ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಅಭಿನಯದ ಬಹುನಿರೀಕ್ಷಿತ ಡೆವಿಲ್(Devil) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ದರ್ಶನ್ ಫ್ಯಾನ್ಸ್ ಹಬ್ಬ ಮಾಡುತ್ತಿದ್ದಾರೆ. ಸರಿಗಮ ಯೂಟ್ಯೂಬ್‌ನಲ್ಲಿ ಈಗಾಗಲೇ ಡೆವಿಲ್ ಟ್ರೈಲರ್ ಬಿಡುಗಡೆಯಾಗಿದ್ದು, ದರ್ಶನ್ ಅವರನ್ನು ಹೊಸ ಅವತಾರದಲ್ಲಿ ನೋಡಿದ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.

ಡೆವಿಲ್ ಸಿನಿಮಾದಲ್ಲಿ ದರ್ಶನ್ ಡಿಫರೆಂಟ್ ಲುಕ್‌ನಲ್ಲಿ ಹಾಗೂ ಮಾಸ್ ಡೈಲಾಗ್ಸ್ ಮೂಲಕ ಸಿನಿ ಪ್ರಿಯರನ್ನು ಹಿಡಿದಿಟ್ಟುಕೊಳ್ಳುವುದು ಪಕ್ಕಾ ಆಗಿದೆ. ಇನ್ನು ಟ್ರೈಲರ್ ಆರಂಭದಿಂದ ಕೊನೆಯವರೆಗೂ ಬ್ಯಾಕ್ ಟು ಬ್ಯಾಕ್ ಮಸ್ತ್ ಡೈಲಾಗ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ಎಲ್ಲೆಡೆ ಡೆವಿಲ್ ಕ್ರೇಜ್ ಜೋರಾಗಿದ್ದು, ಟ್ರೈಲರ್ ಫುಲ್ ಮೀಲ್ಸ್ ಕೊಡುವ ಮೂಲಕ ಡೆವಿಲ್ ಆರ್ಭಟವನ್ನು ದುಪ್ಪಟ್ಟು ಮಾಡಿದೆ.

ಇನ್ನು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಟ್ರೈಲರ್ ಹಾಗೂ ಡಿಸೆಂಬರ್ 11ರಂದು ಡೆವಿಲ್ ಸಿನಿಮಾ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಬೇಸರ ಹೆಚ್ಚಿಸಿದೆ. ಆದರೆ ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್ ಅವರ ಅನುಪಸ್ಥಿತಿಯಲ್ಲಿಯೂ ಡೆವಿಲ್ ಸಿನಿಮಾವನ್ನು ಗೆದ್ದೇ ಗೆಲ್ಲಿಸಬೇಕು ಎನ್ನುವ ಉತ್ಸಾಹದಲ್ಲಿದ್ದಾರೆ.












