• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ!

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಸಿನಿಮಾ
0
ದರ್ಶನ್ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ!
Share on WhatsAppShare on FacebookShare on Telegram

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಸೇರಿದಂತೆ ಒಟ್ಟು 13 ಜನ ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ADVERTISEMENT

ದರ್ಶನ್ ಗೆಳತಿ ಪವಿತ್ರಾ ಗೌಡ (Pavithra Gowda)ರನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿಯನ್ನು (Renuka Swamy) ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಯಿಸಿಕೊಂಡು ದರ್ಶನ್ ಗ್ಯಾಂಗ್ ಕೊಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.

ಕೊಲೆ ಮಾಡಿದ ನಂತರ ರಾಜಕಾಲುವೆ ಬಳಿ ರೇಣುಕಾ ಸ್ವಾಮಿ ಶವ ಎಸೆಯಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ದರ್ಶನ್ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಿದ್ದಾರೆ. ಅರೆಸ್ಟ್ ಮಾಡಿದ ನಂತರ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾ ಗೌಡ, ಕೆ. ಪವನ್ ಸೇರಿದಂತೆ ಎಲ್ಲ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಜಡ್ಜ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ಕೋರ್ಟ್ ನಲ್ಲಿ ವಿಚಾರಣೆ ವೇಳೆ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದರೆ, ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ನಟ ದರ್ಶನ್ ಎ2 ಆಗಿದ್ದಾರೆ. ಕೆ. ಪವನ್ ಎ3 ಆಗಿದ್ದಾನೆ. ಕೋರ್ಟ್ ನಲ್ಲಿ ವಾದ- ವಿವಾದ ಆಲಿಸಿದ ಜಡ್ಜ್ 6 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ವಿಚಾರಣೆ ವೇಳೆ ನ್ಯಾಯಾಲಯ (Court) ದರ್ಶನ್‍ಗೆ ಬಂಧನದ ಸಂದರ್ಭದಲ್ಲಿ ತೊಂದರೆ ಆಗಿದೆಯೆ ಎಂದು ಕೇಳಿದರು. ಇದಕ್ಕೆ ದರ್ಶನ್ ಇಲ್ಲ ಎದು ಪ್ರತಿಕ್ರಿಯಿಸಿದರು. ವಕೀಲರ ನೇಮಕ ಮಾಡಿಕೊಳ್ಳುತ್ತೀರಾ? ಎಂಬ ಪ್ರಶ್ನೆಗೆ, ಹೌದು ಎಂದರು. ಬಳಿಕ ಮನೆಯವರಿಗೆ ಬಂಧನದ ಮಾಹಿತಿ ನೀಡಿದ್ದೇನೆ ಎಂದು ನ್ಯಾಯಾಲಯಕ್ಕೆ ದರ್ಶನ್ ತಿಳಿಸಿದರು.
ದರ್ಶನ್ ಪರ ವಕೀಲ ನಾರಾಯಣಸ್ವಾಮಿ, ದರ್ಶನ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ರೇಣುಕಾಸ್ವಾಮಿ ಶವ ಕೂಡ ಪತ್ತೆಯಾಗಿದೆ. ಇಷ್ಟೇ ಅಲ್ಲದೇ ದರ್ಶನ್ ವಿರುದ್ಧ ಯಾವುದೇ ಆರೋಪಗಳಿಲ್ಲ. ಅವರು ತಪ್ಪಿಸಿಕೊಂಡಿಲ್ಲ. ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ಇದು ಅವರ ತೇಜೋವಧೆ ಮಾಡುವ ಯತ್ನ. ಹೀಗಾಗಿ ಪೊಲೀಸ್ ಕಸ್ಟಡಿಯ ಅಗತ್ಯವಿಲ್ಲ ಎಂದು ವಾದಿಸಿದರು.

ವಿಚಾರಣೆ ಬಳಿಕ 6ನೇ ಎಸಿಎಂಎಂ ನ್ಯಾಯಾಧೀಶ ವಿಶ್ವನಾಥ್ ಗೌಡರ್, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ದರ್ಶನ್ ಹಾಗೂ ಪವಿತ್ರಾ ಗೌಡ ನಾಯಾಧೀಶರ ಮುಂದೆ ಕಣ್ಣೀರು ಸುರಿಸಿದ್ದಾರೆ. ಅಲ್ಲದೇ, ತನಿಖಾಧಿಕಾರಿ, ಎಲ್ಲೆಲ್ಲಿ ಹೊಡೆದಿದ್ದಾರೆ ಎಂಬ ತನಿಖೆ ನಡೆಸಬೇಕು. ವೆಪನ್ ಸೀಜ್ ಮಾಡಬೇಕು. ಹೀಗಾಗಿ ಪೊಲೀಸ್ ಕಸ್ಟಡಿ ಅಗತ್ಯವಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವುದು ಅಗತ್ಯ ಎಂದು ವಾದಿಸಿದರು.

Tags: CourtDarshanPavithra GowdaRenuka Swamy
Previous Post

ವಿದ್ಯುತ್ ತಂತಿ ತಗುಲಿ ದಸರಾ ಆನೆ ಅಶ್ವತ್ಥಾಮ ಸಾವು

Next Post

ಇಹಲೋಕ ತ್ಯಜಿಸಿದ ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
Next Post
ಇಹಲೋಕ ತ್ಯಜಿಸಿದ ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್

ಇಹಲೋಕ ತ್ಯಜಿಸಿದ ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada