
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲುಪಾಲಾಗಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡ್ತಿರೋ ಆರೋಪ ಎಲ್ಲೆಡೆ ವ್ಯಾಪಕ ಚರ್ಚೆ ಆಗುತ್ತಿದೆ. ಈ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ಇದ್ರ ಮಧ್ಯೆಯೇ ಗೃಹ ಸಚಿವ ಪರಮೇಶ್ವರ್ 7 ಮಂದಿ ಅಧಿಕಾರಿಗಳನ್ನ ಅಮಾನತು ಮಾಡಿದ್ದಾರೆ.ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.




