
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಊಟ, ಹಾಸಿಗೆ, ಪುಸ್ತಕ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಜುಲೈ 29ಕ್ಕೆ ಮುಂದೂಡಿಕೆ ಮಾಡಿದೆ.

ನಟ ದರ್ಶನ್ ಅವರು ಮನೆಯಿಂದ ಊಟ, ಹಾಸಿಗೆ ಬಟ್ಟೆ ಪುಸ್ತಕ ಸೇರಿದಂತೆ ಇತರೆ ವಸ್ತುಗಳು ಬೇಕು ಎಂದು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿ ಅರ್ಜಿಯನ್ನ ಹೈಕೋರ್ಟ್ ನಲ್ಲಿ ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು.ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಮೂರ್ತಿಯವರು ಈ ಕೇಸಿನಲ್ಲಿ ನಾನು ಮಧ್ಯಂತರ ಆದೇಶ ನೀಡಲು ಬಯಸುವುದಿಲ್ಲ. ವಾದಮಂಡನೆ ಆಲಿಸಿದ ನಂತರವೇ ತೀರ್ಮಾನಿಸಬೇಕಾಗುತ್ತದೆ. ನೀವು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದರು.ವಿಚಾರಣೆಯ ಬಳಿಕ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯ ಪೀಠವು ದರ್ಶನ್ ಅವರು ಸಲ್ಲಿಸಿದ್ದ ರಿಟ್ ಅರ್ಜಿ ಕುರಿತಂತೆ 29ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಜುಲೈ 26ರೊಳಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಬಕು. ಜುಲೈ 26ರೊಳಗೆ ತೀರ್ಪು ನೀಡುವಂತೆ ಸೂಚನೆ ನೀಡಿದೆ.