
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನ ಸೆಪ್ಟಂಬರ್ 30ರವರೆಗೆ ವಿಸ್ತರಿಸಿ24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಗೊಂಡಿತ್ತು. ಎಲ್ಲಾ ಆರೋಪಿಗಳನ್ನೂ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮೂಲಕ ಹಾಜರುಪಡಿಸಲಾಗಿತ್ತು.
ಇದೀಗ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ ಸೆ.30ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ