ನಟ ದರ್ಶನ್ (Actor Darshan) ಆಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ ನ್ಯಾ. ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ದರ್ಶನ್ ರೆಗ್ಯುಲರ್ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ.
ಇದರ ಜೊತೆಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದೇ ನಡೆಯಲಿದ್ದು,ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಈಗಾಗಲೇ ಅನಾರೋಗ್ಯದ ಕಾರಣಕ್ಕೆ ಆರೋಪಿ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ ಈವರೆಗೂ ಸರ್ಜರಿ ಮಾಡಿಸಿಲ್ಲ.ಈ ಬಗ್ಗೆ ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಿಸಿದ್ದಾರೆ.
ಇತ್ತ ದರ್ಶನ್ ಅನಾರೋಗ್ಯ ಸಂಬಂಧ ಹೈಕೋರ್ಟ್ ಗೆ ಮೆಡಿಕಲ್ ರಿಪೋರ್ಟ್ ಕೂಡ ವಕೀಲರು ಸಲ್ಲಿಸಿದ್ದಾರೆ.ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರಿಂದ ವೈದ್ಯಕೀಯ ವರದಿ ಸಲ್ಲಿಕೆ ಮಾಡಲಾಗಿದ್ದು,ಈ ಮೆಡಿಕಲ್ ರಿಪೋರ್ಟ್ ಮೇಲೆ ಇಂದು ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಲೈದ್ದಾರೆ.