ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಅನಾರೋಗ್ಯ ಹಿನ್ನಲೆ ನಟ ದರ್ಶನ್‌ಗೆ (Darshan) ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. ಜಾಮೀನಿನ ಮೇಲೆ ಬಿಡುಗಡೆಯಾದ ದರ್ಶನ್ ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ನಿನ್ನೆ ರಾತ್ರಿ 11.30ರ ಸುಮಾರಿಗೆ ಬೆಂಗಳೂರಿಗೆ ಬಂದ ದರ್ಶನ್ ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ (Vijayalakshmi) ಫ್ಲಾಟ್ ಗೆ ತೆರಳಿದ್ದಾರೆ. ಇಂದು ಮಗನ ಹುಟ್ಟುಹಬ್ಬದ ಆಚರಣೆ ಬಳಿಕ, ಮಧ್ಯಾಹ್ನದ ವೇಳೆಗೆ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಇನ್ನು ದರ್ಶನ್ ಹೊರಗೆ ಬರ್ತಿದ್ದಂತೆ ಅಬಿಮಾನಿಗಳು ಪುಲ್ ಖುಷಿಯಾಗಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರಿನ ಮಾರ್ಗದುದ್ದಕ್ಕೂ ದರ್ಶನ್‌ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಟೋಲ್ಕಂದರ ಬಳಿ ಕಾರನ್ನು ತಡೆದು, ಪಟಾಕಿ ಸಿಡಿಸಿ ಸಂಬ್ರಮಿಸಿದ್ದಾರೆ. ಇನ್ನು ಬೆಂಗಳೂರಿನಿನ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸಿದ್ದರು.