ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ದರ್ಶನ್, ಸದ್ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನದ್ದಾರೆ. ಅವರಿಗೆ ಅಲ್ಲಿ ಸೊಳ್ಳೆಗಳ ಕಾಟವೇ ಸಮಸ್ಯೆಯಾಗಿ ಪರಿಣಮಿಸಿದೆ. ಅದಕ್ಕೆ ಏನಾದರೂ ಪರಿಹಾರ ಕೊಡಿ ಎಂದು ದರ್ಶನ್ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಅಧಿಕಾರಿಗಳು ನಾನೇನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತೀಚೆಗೆ ರಾಜ್ಯ ಜೈಲುಗಳ ಮಹಾನಿರ್ದೇಶಕರಾದ (ಡಿಜಿಪಿ) ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಪರಿಶೀಲನೆಗಾಗಿ ಭೇಟಿ ನೀಡಿದ್ದ ಸಂದರ್ಭದಲ್ಲಿ ದರ್ಶನ್, ‘ಜೈಲಿನಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ, ಇದಕ್ಕೆ ಏನಾದರೂ ಪರಿಹಾರ ಮಾಡಿ’ ಎಂದು ಅವರಿಗೆ ಮನವಿ ಮಾಡಿದ್ದರು. ಆಗ, ಡಿಜಿಪಿ, ‘ಸೊಳ್ಳೆಗಳ ವಿಷಯದಲ್ಲಿ ನಾನೇನು ಮಾಡಲು ಸಾಧ್ಯವಿಲ್ಲ. ಜೈಲಿನ ಮ್ಯಾನ್ಯುವಲ್ ಪ್ರಕಾರ ಬಂಧಿಗಳಿಗೆ ಏನೆಲ್ಲಾ ಸೌಲಭ್ಯ ಒದಗಿಸಬೇಕೋ ಅದನ್ನು ಮಾತ್ರ ಕೊಡಲು ಸಾಧ್ಯ. ಮ್ಯಾನ್ಯುವಲ್ನಲ್ಲಿ ಇಲ್ಲದಿರುವುದನ್ನು ನೀಡಲು ಬರುವುದಿಲ್ಲ. ಜೈಲು ನಿಯಮಾವಳಿ ಪ್ರಕಾರ ಏನಾದರೂ ಸಮಸ್ಯೆಗಳಿದ್ದರೆ ಹೇಳಿ, ಸೌಲಭ್ಯ ಒದಗಿಸುತ್ತೇವೆ. ಅದನ್ನು ಹೊರತುಪಡಿಸಿ ಸೊಳ್ಳೆಗಳ ಬಗ್ಗೆ ನಾವೇನು ಮಾಡಲು ಆಗುವುದಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.





