• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ನಿರಾಸೆ,

ಪ್ರತಿಧ್ವನಿ by ಪ್ರತಿಧ್ವನಿ
October 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಇಂದು ಜಾಮೀನು ನಿರೀಕ್ಷೆಯಲ್ಲಿದ್ದರು. ಆದರೆ ದರ್ಶನ್‌ಗೆ ನಿರಾಸೆಯಾಗಿದೆ. ದರ್ಶನ್ ಜಾಮೀನು ಅರ್ಜಿಯನ್ನು ಮಂಗಳವಾರ(ಅ.8) ಮಧ್ಯಾಹ್ನ 12.30ಕ್ಕೆ ಮುಂದೂಡಲಾಗಿದೆ. ಹೀಗಾಗಿ ಕನಿಷ್ಠ ಮಂಗವಾರದ ವರೆಗೆ ನಟ ದರ್ಶನ್‌ಗೆ ಜೈಲೇ ಗತಿಯಾಗಿದೆ.

ADVERTISEMENT

ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಇಂದು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಇದಕ್ಕೆ ಪ್ರತಿವಾದ ಮಂಡಿಸಲು ಎಸ್‌ಪಿಪಿ ಪ್ರಸನ್ನ ಕುಮಾರ್ ಸಮಯ ಕೇಳಿದ್ದಾರೆ. ಹೀಗಾಗಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.

ವಕೀಲರಾದ ಸಿವಿ ನಾಗೇಶ್, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಕೆ ಮಾಡಿರುವ ಚಾರ್ಜ್‌ಶೀಟ್‌ನ ಕೆಲ ತಪ್ಪುಗಳು, ಕಾನೂನು ತೊಡಕುಗಳನ್ನು ಎತ್ತಿತೋರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ದರ್ಶನ್ ಅಭಿಮಮಾನಿಗಳಿಂದ ಆಗಿದೆ. ಇದರಲ್ಲಿ ದರ್ಶನ್ ನೇರ ಪಾತ್ರವಿಲ್ಲ ಎಂದು ವಾದಿಸಿದ್ದಾರೆ. ಇನ್ನು ಕೊಲೆ ನಡೆದ ದಿನ ಹಾಗೂ ಮರಣೋತ್ತರ ಪರೀಕ್ಷೆ ನಡೆದ ದಿನಕ್ಕೆ ಅಂತರವಿದೆ. ಈ ವಿಳಂಬಕ್ಕೆ ಕಾರಣ ನೀಡಿಲ್ಲ ಎಂದು ಸಿವಿ ನಾಗೇಶ್ ಹೇಳಿದ್ದಾರೆ.

57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಸಿವಿ ನಾಗೇಶ್ ಪೊಲೀಸರು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಿವಿ ನಾಗೇಶ್ ವಾದ ಮುಕ್ತಾಯಗೊಂಡ ಬೆನ್ನಲ್ಲೇ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್, ಪ್ರತಿವಾದಕ್ಕೆ ಕಾಲವಕಾಶ ಕೋರಿದ್ದಾರೆ. ಬೇರೆ ಪ್ರಕರಣಗಳು ಇರುವ ಕಾರಣ ಪ್ರತಿವಾದ ಮಂಡಿಸಲು ಕಾಲವಕಾಶ ಬೇಕು ಎಂದು 57ನೇ ಸಿಸಿಹೆಚ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಹೀಗಾಗಿ ಪ್ರಕರಣವನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ.

ಇತ್ತ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ.ಈ ಕುರಿತು ವೈದ್ಯರ ಬಳಿ ದರ್ಶನ್ ಸಮಸ್ಯೆ ಹೇಳಿಕೊಂಡಿದ್ದಾರೆ. ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ. ಹೀಗಾಗಿ ಸ್ಕ್ಯಾನಿಂಗ್ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದ್ದಾರೆ. ಆದರೆ ಸದ್ಯಕ್ಕೆ ಸ್ಕ್ಯಾನಿಂಗ್ ಬೇಡ, ಔಷಧಿ ನೀಡಲು ಸೂಚಿಸಿರುವ ದರ್ಶನ್, ಬೆಂಗಳೂರಿನಲ್ಲಿ ಸ್ಕ್ಯಾನಿಂಗ್ ಮಾಡಿಸುವುದಾಗಿ ಹೇಳಿದ್ದಾರೆ.

ಇದರ ನಡುವೆ ಬಳ್ಳಾರಿಗೆ ಜೈಲಿಗೆ ದರ್ಶನ್ ಪುತ್ರ ವಿನೇಶ್ ಹಾಗೂ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿ ದರ್ಶನ್ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಪುತ್ರನಿಗೆ ಧೈರ್ಯ ಹೇಳಿರುವ ದರ್ಶನ್ ಆದಷ್ಟು ಬೇಗ ಹೊರಬರುವುದಾಗಿ ಹೇಳಿದ್ದಾರೆ.

Tags: actor darshan arrested in murder caseDarshanHigh Court Karnatakawas disappointed.who was expecting bail
Previous Post

20 ಸಾಕ್ಷಿಗಳ ಹೇಳಿಕೆಯನ್ನೇ ಹಿಡಿದು ವಾದಿಸಿದ ವಕೀಲ ಸಿ.ವಿ ನಾಗೇಶ್‌!

Next Post

ರಾಯಚೂರು: ಸ್ವಾಭಿಮಾನಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post

ರಾಯಚೂರು: ಸ್ವಾಭಿಮಾನಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada