ವಿಜಯಲಕ್ಷ್ಮಿಗೆ ಅವಾಚ್ಯ ಪದಗಳಿಂದ ನಿಂದನೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಚಿಕ್ಕಬಾಣವಾರ ಹಾಗೂ ದಾವಣಗೆರೆಯ ಮೂಲದ
ಚಂದ್ರು ಮತ್ತು ನಿಖಿಲ್ ರನ್ನ ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಿತಿನ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ರೆ, ಚಂದ್ರು
ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದಾನೆ.
ಈ ಇಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪದಗಳಿಂದ ದರ್ಶನ್ ಪತ್ನಿಗೆ ನಿಂದನೆ ಮಾಡಿದ್ದರು. ಆದರೆ ಕೇಸ್ ದಾಖಲಾಗ್ತಿದ್ದಂತೆ ತಮ್ಮ ಪೋಸ್ಟ್ ಡಿಲಿಟ್ ಮಾಡಿದ್ದರು. ಆದರೂ ಪೊಲೀಸರು ಐಪಿ ಅಡ್ರೆಸ್ ತನಿಖೆ ನಡೆಸಿ ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರೋ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್,
ಆನ್ ಲೈನ್ ನಲ್ಲಿ ಆಥವಾ ಆಫ್ ಲೈನ್ ನಲ್ಲಿ ಆಗಲಿ ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶ ಹಾಗೂ ಕಿರುಕುಳ ನೀಡಿದೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತದೆ.
ಈ ಕೇಸ್ ನಲ್ಲಿಯೂ ಅಷ್ಟೇ. ಎಲ್ಲರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ






