
ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈಗಾಗ್ಲೇ ಮೈಸೂರಲ್ಲಿ ಸಕಲ ಸಿದ್ಧತೆ ನಡೆಯುತ್ತಿದ್ದು , ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಅಕ್ಷರಶಃ ಸ್ವರ್ಗವೇ ಧರೆಗಿಳಿಯುತ್ತಿದೆ. ಈ ನಡುವೆ ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿ ಪ್ರೊ. ಹಂ.ಪ. ನಾಗರಾಜಯ್ಯ ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು.ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಆಹ್ವಾನ ಕೋರಲಾಯಿತು. ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು.ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸಲ್ಲಿ ಭೇಟಿಯಾಗಿ ದಸರಾ ಮಹೋತ್ಸವಕ್ಕೆ ಆಹ್ವಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ರವಿಶಂಕರ್, ಅನಿಲ್ ಚಿಕ್ಕಮಾದು,ಡಾ . ತಿಮ್ಮಯ್ಯ, ಮಂಜೇಗೌಡ ಇತರರು ಹಾಜರಿದ್ದರು.