Senರಾಜ್ಯದಲ್ಲಿ ಈಗಾಗಲೇ ಮೊದಲ ಸಾಲಿನ SSLC ವಾರ್ಷಿಕ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಈಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.

ಆದ್ರೆ ಇದುವರೆಗೂ ಫಲಿತಾಂಶದ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿಲ್ಲ. ಹೀಗಾಗಿ ಈ ಬಗ್ಗೆ ಪರೀಕ್ಷಾ ಮಂಡಳಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಈಗಾಗಲೇ SSLC ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಮತ್ತು ಕಂಪ್ಯೂಟರ್ ದಾಖಲೀಕರಣ ಪ್ರಕ್ರಿಯೆಗಳು ಮುಕ್ತಾಯವಾಗಿದ್ದು, ಇನ್ನೇನು ಮೂರ್ನಾಲ್ಕು ದಿನದಲ್ಲಿ, ಅಂದ್ರೆ ಮೇ 2ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ.

ಈ ಬಾರಿ ರಾಜ್ಯದಲ್ಲಿ ಒಟ್ಟು 2,818 ಕೇಂದ್ರಗಳಲ್ಲಿ pareekshe ನಡೆದಿದ್ದು, ಒಟ್ಟು 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದಾರೆ.