ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಪಡಿಸಿದ್ದಾರೆ. ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ದಿನಾಂಕ ಹಾಗೂ ವೇಳಾಪಟ್ಟಿ ಅಂತಿಮಗೊಳಿಸಲಾಗಿದೆ.

ಮಾರ್ಚ್ 6ರಂದು 2026-27 ನೇ ಸಾಲಿನ ಮಂಡಿಸಲಿದ್ದಾರೆ . ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ದಾಖಲೆಯ 16 ಬಜೆಟ್ ಮಂಡನೆ ಮಾಡಿದ್ದು, ಮಾರ್ಚ್ ನಲ್ಲಿ ಮಂಡಿಸುವ ಬಜೆಟ್ 17ನೇ ಬಜೆಟ್ ಆಗಿರುತ್ತದೆ.






