ಮೈಸೂರು : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು ತಮ್ಮ ತಮ್ಮ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಹೈ ವೋಲ್ಟೇಜ್ ಕ್ಷೇತ್ರವಾಗಿರುವ ವರುಣದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯ ಪರ ಪ್ರಚಾರದ ಅಖಾಡಕ್ಕೆ ಸ್ಮಿತಾ ರಾಕೇಶ್ ಧುಮುಕಿದ್ದಾರೆ. ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರು ಪ್ರಚಾರದ ಕಣಕ್ಕೆ ಇಳಿದಿದ್ದಾರೆ.
ಮನೆ ಮನೆಗೆ ತೆರಳಿ ಸಿದ್ದರಾಮಯ್ಯ ಪರ ಪ್ರಚಾರ ಮಾಡಿರುವ ಸ್ಮಿತಾ ರಾಕೇಶ್ ವರುಣ ಕ್ಷೇತ್ರದಲ್ಲಿ ಮಾವನ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ. ಈ ಬಾರಿ ವರುಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.