• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಆಂತರಿಕ ಕಲಹದ ಬಗ್ಗೆ ಇಂಚಿಂಚೂ ಮಾಹಿತಿ ನೀಡಿದ ಸಚಿವ ಜಮೀರ್‌ ಅಹ್ಮದ್‌ ಖಾನ್..

ಪ್ರತಿಧ್ವನಿ by ಪ್ರತಿಧ್ವನಿ
April 14, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಗಳು ಜೋರಾಗಿವೆ. ಎರಡು ಉಪಚುನಾವಣೆಗಳ ವಿಚಾರದಲ್ಲಿ “ಕೈ” ನಲ್ಲಿ ಆಂತರಿಕ ಕೊತ ಕೊತ ಕುದಿಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿದ್ದ ಅಭಿಷೇಕ್‌ ದತ್ತ ಹೈಕಮಾಂಡಿಗೆ ಸಲ್ಲಿಸಿರುವ ವರದಿಯಲ್ಲಿ ಕೈ ನಾಯಕರ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಉಲ್ಲೇಖಿಸಿರುವುದು ಕಾಂಗ್ರೆಸ್‌ ಪಕ್ಷದಲ್ಲಿನ ಅಲ್ಪಸಂಖ್ಯಾತ ನಾಯಕರ ಬುಡವನ್ನೇ ಅಲ್ಲಾಡಿಸುವ ಹಂತಕ್ಕೆ ತಲುಪಿದೆ.

ADVERTISEMENT
Yatnal : ಲಕ್ಷ್ಮಣ ಸವದಿ ಹೇಳಿಕೆಗೆ ಯತ್ನಾಳ್‌ ಹೇಳಿದ್ದೇನು..! #rameshjarkiholi #yatnal #lakshmansavadi

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಈ ಬೆಳವಣಿಗೆಯು ಕಾಂಗ್ರೆಸ್‌ನಲ್ಲಿನ ಅಲ್ಪಸಂಖ್ಯಾತರ ಆತಂಕಕ್ಕೆ ಕಾರಣವಾಗಿದೆ.

ಪ್ರಮುಖವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಜೀರ್ ಅಹ್ಮದ್ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ಕಿತ್ತು ಹಾಕಲಾಗಿದೆ.

ಇದನ್ನೂ ಓದಿ : ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

ಇನ್ನೂ ನಸೀರ್ ಅಹಮದ್ ಅವರು ಬಾಗಲಕೋಟೆ ಚುನಾವಣಾ ಜವಾಬ್ದಾರಿಯನ್ನು ಹೊತ್ತಿದ್ದರು. ದಾವಣಗೆರೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗುತ್ತೇನೆ ಎಂದು ನಸೀರ್ ಅಹಮದ್ ಕೇಳಿಕೊಂಡಿದ್ದರು. ಆದರೆ ಬಾಗಲಕೋಟೆಯಲ್ಲಿಯೇ ಉಳಿದು ಅಲ್ಲಿಯೇ ಪಕ್ಷಕ್ಕಾಗಿ ಕೆಲಸ ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಮುಖ್ಯಮಂತ್ರಿಗಳ ಸೂಚನೆಯಂತೆ ನಸೀರ್ ಅಹಮದ್ ಬಾಗಲಕೋಟೆಯಲ್ಲಿ 10 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು ಎಂದು ಪಕ್ಷದಲ್ಲಿನ ಬೆಳವಣಿಗೆಗಳ ಕುರಿತು‌ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.

ಮಾಹಿತಿ ಬಿಚ್ಚಿಟ್ಟಿದ್ದ ರಿಜ್ವಾನ್‌, ಸಲೀಂ..

ಪ್ರಮುಖವಾಗಿ ದಾವಣಗೆರೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿನ ಅಲ್ಪಸಂಖ್ಯಾತರ ನಾಯಕರ ಪಕ್ಷ ವಿರೋಧಿ ಚಟುವಟಿಕೆಗಳ ಕುರಿತು ಶಾಸಕರಾದ ರಿಜ್ವಾನ್‌ ಅರ್ಷದ್‌ ಹಾಗೂ ಸಲೀಂ ಅಹ್ಮದ್‌ ಇಬ್ಬರೂ ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಪಕ್ಷದ ಹಿನ್ನಡೆಗೆ ಒಳಗಿನ ನಾಯಕರೇ ಕಾರಣರಾಗುತ್ತಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದರು.

ಇದಾದ ಬೆನ್ನಲ್ಲೇ ಕಾಂಗ್ರೆಸ್ ಅಲ್ಪಸಂಖ್ಯಾತರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಪ್ರಸಂಗ ಬಂದಿತ್ತು. ಅಲ್ಲದೆ ಹೀಗೆ ಮುಂದುವರೆದಿರುವ ಈ ಪಕ್ಷ ವಿರೋಧಿ ಕೆಲಸಗಳ ಬಿಸಿ ನಜೀರ್‌ ಅಹ್ಮದ್‌ಗೂ ತಟ್ಟಿದ್ದೂ, ಸಚಿವ ಜಮೀರ್‌ ಅಹ್ಮದ್‌ ಖಾನ್‌ಗೂ ತಟ್ಟುವ ಲಕ್ಷಣಗಳು ದಟ್ಟವಾಗಿವೆ.

Tags: Abdul JabbarAICCAnti Congress Activitiesb. z. zameer ahmed khanCM Siddaramaiahcongress karnatakaDavanagere By PollDK ShivakumarKPCCMinority LeadersNajeer AhmedPratidhvaniSamarth Shamanur
Previous Post

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

Next Post

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

Related Posts

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!
Top Story

2026-27 ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ: ದಸರಾ-ಬೇಸಿಗೆ ರಜೆ ವಿವರ ಇಲ್ಲಿದೆ!

by ಪ್ರತಿಧ್ವನಿ
May 8, 2026
0

ರಾಜ್ಯದ ಶಾಲಾ ಶಿಕ್ಷಣ ಇಲಾಖೆ 2026-27ನೇ ಶೈಕ್ಷಣಿಕ ಸಾಲಿನ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29, 2026ರಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

May 8, 2026
BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

May 8, 2026
ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

May 8, 2026
ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

May 8, 2026
Next Post
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada