ದಾವಣಗೆರೆ: ಸಾಮಾಜಿಕ ಕಾರ್ಯಕರ್ತನ ಮೇಲೆ ಕೊಲೆ ಯತ್ನ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕರನ್ನು ಬಂಧಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸವಿತಾಬಾಯಿ ಮಲ್ಲೇಶ್ ನಟಿ ಕೂಡ ಆಗಿದ್ದಾರೆ.

ದಾವಣಗೆರೆಯಲ್ಲಿ ನವೆಂಬರ್ 10ರಂದು ಸಾಮಾಜಿಕ ಕಾರ್ಯಕರ್ತ ಟಿ. ಅಜ್ಗರ್ ಮೇಲೆ ಕೊಲೆ ಯತ್ನ ನಡೆದಿತ್ತು. ಖಾಲೀದ್ ಪೈಲ್ವಾನ್ ಎನ್ನುವಾತ ಈ ಕೊಲೆ ಯತ್ನ ಮಾಡಿದ್ದು, ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕ ಆತನಿಗೆ ಸಾಥ್ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಘಟನೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ. ಅಜ್ಗರ್ ಗಂಭೀರ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಯತ್ನದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ದಾವಣಗೆರೆ ಅಜಾದ್ ನಗರ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.






