ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದಲ್ಲೇ 9 ವರ್ಷಗಳ ನಂತರ ಮೊದಲ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
ಅಹಮದಾಬಾದ್ ನಲ್ಲಿ ಸೋಮವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಾರ್ನರ್ ಇನಿಂಗ್ಸ್ ನ ಮೊದಲ ಎಸೆತದಲ್ಲೇ ಖಾತೆ ತೆರೆಯುವ ಮುನ್ನವೇ ಔಟಾದರು. ಲಿಯಾಮ್ ಲಿವಿಂಗ್ ಸ್ಟೋನ್ ಎಸೆತದಲ್ಲಿ ಚಾಹರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಡೇವಿಡ್ ವಾರ್ನರ್ ಒಟ್ಟಾರೆ 9ನೇ ಬಾರಿ ಶೂನ್ಯಕ್ಕೆ ಔಟಾಗಿದ್ದು, ಈ ಟೂರ್ನಿಯಲ್ಲಿ 3ನೇ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ವಿಶೇಷ ಅಂದರೆ 2103ರ ನಂತರ ಅಂದರೆ 9 ವರ್ಷಗಳ ನಂತರ ಶೂನ್ಯಕ್ಕೆ ಔಟಾಗಿದ್ದಾರೆ.
ಮತ್ತೊಂದು ವಿಶೇಷ ಅಂದರೆ ಡೇವಿಡ್ ವಾರ್ನರ್ 9 ವರ್ಷಗಳ ಹಿಂದೆ ಇದೇ ದಿನಾಂಕದಂದು ಇದೇ ತಂಡ ಅಂದರೆ ಪಂಜಾಬ್ ಕಿಂಗ್ಸ್ ವಿರುದ್ಧ ಶೂನ್ಯಕ್ಕೆ ಔಟಾಗಿದ್ದರು. ಡೆಲ್ಲಿ ಪರ ಆಡುವಾಗ ಸಂದೀಪ್ ಶರ್ಮ ಎಸೆತದಲ್ಲಿ ವಿಕೆಟ್ ಒಪ್ಪಿಸಿದ್ದರು.