ಕಂಬಕ್ಕೆ ಕಟ್ಟಿ ಹಾಕಿ ಯುವಕನಿಗೆ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ದುಷ್ಕರ್ಮಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ
ಮುಲ್ಕಿ;ಕೆರೆಕಾಡಿನಲ್ಲಿ ಬಾಲಕಿ ಜೊತೆ ಅಸಭ್ಯವಾಗಿ ವರ್ತನೆ ಆರೋಪಿಸಿ ಯುವಕನಿಗೆ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು.ಇದಾದ ಬಳಿಕ ಹಲ್ಲೆ ಸಂತ್ರಸ್ತ ದಾವೂದ್ ಮೇಲೆ ಪೋಕ್ಸೋ ಕೇಸ್ ದಾಖಲಾಗಿತ್ತು.ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಾವೂದ್ ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಮೂಲ್ಕಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಂಬಕ್ಕೆ ಕಟ್ಟಿ ಹಾಕಿ ಯುವಕನಿಗೆ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ದುಷ್ಕರ್ಮಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38),ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಮುಲ್ಕಿ ಕೆರೆಕಾಡು ಬಳಿ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆಂದು ಆರೋಪಿಸಿ ದಾವೂದ್ ಎಂಬಾತನ ಮೇಲೆ ದುಷ್ಕರ್ಮಿಗಳು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು.
ಘಟನೆಯ ಪೋಟೋಗಳು ವ್ಯಾಪಕವಾಗಿ ವೈರಲ್ ಆಗಿತ್ತು. ಘಟನೆ ಬಗ್ಗೆ ಖಂಡನೆ ಕೂಡ ವ್ಯಕ್ತವಾಗಿತ್ತು. ಇದರಿಂದಾಗಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿತ್ತು.