ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಅಪ್ಪರ್ ಡ್ಯಾಂಗ್ರಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ಶಂಕಿತ ಸ್ಪೋಟಕ್ಕೆ ಸಂಬಂಧಿಸಿದಂತೆ ಇಬ್ಬರು ನಾಗರೀಕರು ಗಾಯಗೊಂಡಿದ್ದಾರೆ.
ಸದ್ಯ ಇಬ್ಬರು ನಾಗರೀಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.
ಇನ್ನು ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಮೃತಪಟ್ಟಿದ್ದು ಇಬ್ಬರು ಉಗ್ರರು ಸಂಜೆ 7:00 ಘಂಟೆ ಸುಮಾರಿಗೆ 3ಮನೆಗಳನ್ನ ಗುರಿಯಾಗಿಸಿ ದಾಳಿ ನಡೆಸಿದ್ದರು ಎಂದು ಪ್ರತ್ಯಲ್ಷದರ್ಶಿಯೊಬ್ಬರು ತಿಳಿಸಿದ್ದಾರೆ.