
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್ , ಮನೆಯಿಂದ ಊಟ, ಹಾಸಿಗೆ ಪುಸ್ತಕ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನ ಊಟ ಸರಿ ಹೊಂದುತ್ತಿಲ್ಲ, ಹಾಗಾಗಿ ಮನೆಯ ಊಟ, ಪುಸ್ತಕ ಸೇರಿದಂತೆ ಹಲವು ವಸ್ತುಗಳನ್ನ ತರಿಸಿಕೊಳ್ಳಲು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಇಂದು ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿದ್ದು, ನಟ ದರ್ಶನ್ ಅರ್ಜಿಗೆ ಸರ್ಕಾರ ಹಾಗೂ ತನಿಖಾಧಿಕಾರಿ ಆಕ್ಷೇಪಣೆ ಸಲ್ಲಿಸಿದ್ದಾರೆ. ವಿಚಾರಣೆಯನ್ನ ನಾಳೆ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.












