• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ
Share on WhatsAppShare on FacebookShare on Telegram

ಬೆಂಗಳೂರು: ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT
CM Siddaramaiah: ಸಿಎಂ ಸಿದ್ದರಾಮಯ್ಯ ಮಾತಿಗೆ ಬಿದ್ದು ಬಿದ್ದು ನಕ್ಕ ಜನ..! #kodagu #language

ಕನ್ನಹಳ್ಳಿಯಲ್ಲಿ ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ 33 ಪ್ಯಾಕೇಜ್ ಗೆ ನ್ಯಾಯಾಲಯ ಸಮ್ಮತಿ ನೀಡಿದೆ. ಸ್ವಲ್ಪ ‌ದಿನಗಳಲ್ಲೇ ಇವು ಕಾರ್ಯರೂಪಕ್ಕೆ ಬರಲಿದೆ. ಕಸದ ಮಾಫಿಯಾ ಎನ್ನುವ ಪದವನ್ನು ನಾನು ಪದೇ ಪದೆ ಏಕೆ ಬಳಸುತ್ತಿದ್ದೇನೆ ಎಂದರೆ. ಇವರು ಪ್ರತಿ ಹಂತದಲ್ಲಿ ನ್ಯಾಯಾಲಯಗಳಿಗೆ ತೆರಳಿ ತಡೆಯಾಜ್ಞೆ ತಂದು ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಇವರುಗಳು ಹೇಳಿದಂತೆ ಸರ್ಕಾರ ಕೇಳಬೇಕು ಎನ್ನುವ ಧೋರಣೆ ಹೊಂದಿದ್ದರು.‌ ಇದಕ್ಕೆಲ್ಲ ಕಡಿವಾಣ ಹಾಕಲಾಗಿದೆ ಎಂದರು.

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲೇ ಬೇಕು ಎಂದು ನಾನು ಸಂಕಲ್ಪ ಮಾಡಿದ್ದೇನೆ. ಸ್ವಯಂಸೇವಾ ಸಂಸ್ಥೆ ಹಸಿರು ದಳದವರು ಸೇರಿ ಅತ್ಯಂತ ಕ್ಲಿಷ್ಟಕರ ಕೆಲಸ ಮಾಡುತ್ತಿದ್ದಾರೆ. ನಗರದ ಅನೇಕ ಕಡೆ ಜನರು ಎಲ್ಲೆಂದರಲ್ಲಿ ಕಸ ಎಸೆಯುವುದು, ಕಟ್ಟಡ ತ್ಯಾಜ್ಯ ಸುರಿದು ಹೋಗುತ್ತಿದ್ದಾರೆ.‌ ಇದರ ನಿಯಂತ್ರಣಕ್ಕೆ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ. ಕಸ ಸುರಿಯುವ ವಾಹನಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದರು.

DK Shivakumar:ಸ್ವಾಮೀಜಿಗಳು ಇಲ್ಲದಿದ್ರೆ‌ ಸಿಎಂ ಆಗ್ತಿದ್ರಾ ದೇವೇಗೌಡ್ರು? HDKಗೆ ಡಿಕೆಶಿ ಟಾಂಗ್.! #hdkumaraswamy

ನನ್ನ ಗುರಿ, ಉದ್ದೇಶ, ಆಲೋಚನೆ, ಬದ್ದತೆ ಸ್ಪಷ್ಟವಾಗಿದೆ. ಕಸದಿಂದ ಗ್ಯಾಸ್ ತಯಾರಿಕೆಗೆ ನಾಲ್ಕು ಸಂಸ್ಥೆಗಳನ್ನು ಮಾಡಬೇಕು ಎಂದು ಹೊರಟಿದ್ದೆ. ಜಾಗದ ಸಮಸ್ಯೆಯಿಂದ ಈಗ ಎರಡು ಸ್ಥಳಗಳಲ್ಲಿ ಅವಕಾಶ ನೀಡಿ ಟೆಂಡರ್ ಕೂಡ ನೀಡಲಾಗಿದೆ.ಈ ಹಿಂದೆ 10- 12 ಕ್ಕೂ ಹೆಚ್ಚು ಸಂಸ್ಥೆಗಳು ಕಸದಿಂದ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಎಂದು ಬಂದು ವಿಫಲರಾಗಿದ್ದಾರೆ. 24 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ತಂತ್ರಜ್ಞಾನದಿಂದ ಯಶಸ್ವಿಯಾಗಬಹುದು ಎಂದು ಕೇಳಿದ್ದೇನೆ. ಜೊತೆಗೆ ದೆಹಲಿ, ಚೆನ್ನೈ, ಹೈದರಾಬಾದ್ ನಗರಗಳಲ್ಲಿ ಇದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಹೇಳಿದರು.

Pralhad Joshi: ಹಾದಿ, ಬೀದಿ ರಂಪ ಮಾಡೋದನ್ನ ನಿಲ್ಸಿ.. ಕೈ ನಾಯಕ ವಿರುದ್ಧ ಜೋಶಿ ವಾಗ್ದಾಳಿ..#siddaramaiah

ಕಸದಿಂದ ಗ್ಯಾಸ್ ಉತ್ಪಾದನೆಗೆ ಇಳಿದಿರುವ ಅಭಿಷೇಕ್ ಅವರ ಸಂಸ್ಥೆ ಪ್ರಾಥಮಿಕವಾಗಿ 100 ಕೋಟಿ ರೂಪಾಯಿ ಬಂಡವಾಳ ಹೂಡಲಿದೆ. ಒಟ್ಟು 300 ಕೋಟಿ ಹೂಡಿಕೆ ಮಾಡಲಿದ್ದಾರೆ. ಇವರಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡಲಿದೆ. ಈ ಪ್ರಯೋಗ ಯಶಸ್ವಿಯಾದರೆ ರಾಜ್ಯದಲ್ಲಿ ಇನ್ನೂ ಒಂದಷ್ಟು ಕಡೆ ಸ್ಥಾಪಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಯಶಸ್ಸು ಸಿಗಬೇಕಾದರೆ ಶ್ರಮ ಅಗತ್ಯ. ಶ್ರಮವಿಲ್ಲದೆ ಏನೂ ಸಿಗುವುದಿಲ್ಲ. ಇದು ಸ್ವಲ್ಪ ಸ್ಪರ್ಧಾತ್ಮಕ ಕೆಲಸ ಏಕೆಂದರೆ ಇದಕ್ಕೆ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮಗೆ ಶುಭವಾಗಲಿ, ನಾನು ಹಾಗೂ ನಮ್ಮ ಅಧಿಕಾರಿಗಳು ಈ ಸಂಸ್ಥೆಯ ಜೊತೆಯಲ್ಲಿರುತ್ತೇವೆ ಎಂದರು.

Tags: bengalurucongressdcm dk shivkumargarbageWaste Disposal
Previous Post

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೊಸ ಟ್ವಿಸ್ಟ್‌: ವಕೀಲರಿಂದ ಪ್ರಬಲ ವಾದ ಮಂಡನೆ

Next Post

ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

Related Posts

ಅಂದು ಅಭಿಮಾನಿಯೊಬ್ಬರ ಅಂತ್ಯಕ್ರಿಯೆಗೆ ಯಶ್‌ ಹೋಗಲೇ ಇಲ್ಲ! ಅದಕ್ಕೆ ಕಾರಣವೇನು ಗೊತ್ತಾ?
ಕರ್ನಾಟಕ

ಅಂದು ಅಭಿಮಾನಿಯೊಬ್ಬರ ಅಂತ್ಯಕ್ರಿಯೆಗೆ ಯಶ್‌ ಹೋಗಲೇ ಇಲ್ಲ! ಅದಕ್ಕೆ ಕಾರಣವೇನು ಗೊತ್ತಾ?

by ಪ್ರತಿಧ್ವನಿ
August 14, 2026
0

ಬೆಂಗಳೂರು: ಕಳೆದ 2021 ರಲ್ಲಿ ಮಂಡ್ಯ ತಾಲ್ಲೂಕಿನ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬ ಅಭಿಮಾನಿ ಯಶ್ ಮತ್ತು ಸಿದ್ದರಾಮಯ್ಯ ನನ್ನ ಅಂತ್ಯ ಸಂಸ್ಕಾರಕ್ಕೆ ಬರಬೇಕು ಅಂತ...

Read moreDetails
ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

August 14, 2026
ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

August 14, 2026
ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

August 14, 2026
NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

August 14, 2026
Next Post
ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada