• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮತ್ತೆ ಸಿಎಂ ಆಸೆ ಬಿಚ್ಚಿಟ್ಟ DCM ಡಿ.ಕೆ ಶಿವಕುಮಾರ್..! ಯಾವಾಗ ಬದಲಾವಣೆ..?

ಕೃಷ್ಣ ಮಣಿ by ಕೃಷ್ಣ ಮಣಿ
June 4, 2023
in Top Story, ಇದೀಗ
0
ಮತ್ತೆ ಸಿಎಂ ಆಸೆ ಬಿಚ್ಚಿಟ್ಟ DCM ಡಿ.ಕೆ ಶಿವಕುಮಾರ್..! ಯಾವಾಗ ಬದಲಾವಣೆ..?
Share on WhatsAppShare on FacebookShare on Telegram

ಚುನಾವಣೆಗೂ ಮೊದಲು ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟಿದ್ದ ಡಿ.ಕೆ ಶಿವಕುಮಾರ್‌ ಉಪಮುಖ್ಯಮಂತ್ರಿ ಹುದ್ದೆ ಪಡೆದ ಬಳಿಕ ಸ್ವ ಕ್ಷೇತ್ರ ಕನಕಪುರಕ್ಕೆ ತೆರಳಿ, ಕಾರ್ಯಕರ್ತರು, ಅಭಿಮಾನಿಗಳನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಪರವಾಗಿ ಕೆಲಸ ಮಾಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರಿನಿಂದ ಚಿಕ್ಕತಿರುಪತಿಗೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್‌, ಕಲ್ಲಹಳ್ಳಿ ಶ್ರೀನಿವಾಸ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಅಲ್ಲಿಂದ 12 ಗಂಟೆಗೆ ಶಿವನಹಳ್ಳಿ ಶ್ರೀ ವೀರಭದ್ರ ಸ್ವಾಮಿ ದೇವರ ದರ್ಶನ ಮಾಡಿದ್ರು. ಮಧ್ಯಾಹ್ನ 2 ಗಂಟೆಗೆ ಕಬ್ಬಾಳಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ 3 ಗಂಟೆಗೆ ಹುಟ್ಟೂರಾದ ದೊಡ್ಡ ಆಲಹಳ್ಳಿಯಲ್ಲಿ ಬೃಹತ್‌ ಕಾರ್ಯಕ್ರಮ ಮಾಡಿ ಕಾರ್ಯಕರ್ತರಿಗೆ ಧನ್ಯವಾದ ಅರ್ಪಸಿದ್ರು. ಈ ವೇಳೆ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌, ಸಿಎಂ ಆಗುವ ಆಸೆಯನ್ನು ಜನರ ಎದುರು ಮತ್ತೊಮ್ಮೆ ಬಿಚ್ಚಿಟ್ಟಿದ್ದಾರೆ. ಈ ಹಿಂದೆ ಹೇಳಿದ್ದ ಮಾತನ್ನೇ ಪುನರುಚ್ಚಾರ ಮಾಡಿ, ಸಿಎಂ ಆಗುವ ಕನಸನ್ನು ಹೇಳಿಕೊಂಡಿದ್ದಾರೆ.

ADVERTISEMENT

ಎಲ್ಲರಿಗೂ ಅವಕಾಶ ಕೊಟ್ಟಿದ್ದೀರಿ..! ನನಗೆ ಯಾಕಿಲ್ಲ..?

ಹಳೇ ಮೈಸೂರು ಭಾಗದಲ್ಲಿ ರಾಜಕೀಯ ತಂತ್ರಗಾರಿಕೆ ಮಾಡಿದ್ದ ಕಾಂಗ್ರೆಸ್‌, ಡಿ.ಕೆ ಶಿವಕುಮಾರ್‌ ಅವರನ್ನು ಮುಂದೆ ಬಿಟ್ಟು ಮತ ಸೆಳೆಯುವ ಕಸರತ್ತು ಮಾಡಿತ್ತು. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ನೀವು ಆಶೀರ್ವಾದ ಮಾಡಿದ್ದೀರಿ. ನಾನು ನಿಮ್ಮ ಸಮುದಾಯಕ್ಕೇ ಸೇರಿದವನು. ನನಗೆ ಒಂದು ಅವಕಾಶ ಯಾಕೆ ಕೊಡಲ್ಲ. ನನಗೂ ಒಂದು ಅವಕಾಶ ಕೊಡಿ ಎನ್ನುವ ಮೂಲಕ ನಾನು ಆಯ್ಕೆ ಆದರೆ ರಾಜ್ಯದ ಮುಖ್ಯಮಂತ್ರಿ ಆಗ್ತೇನೆ ಎನ್ನುವ ಆಸೆ ಹುಟ್ಟಿಸಿದ್ದರು. ದೇವೇಗೌಡರು ಹಾಗು ಕುಮಾರಸ್ವಾಮಿಯನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿ ಮಾಡಿದ್ದು ಆಯ್ತು. ನನ್ನ ಕಡೆಗೂ ಒಮ್ಮೆ ನೋಡಬೇಕು ಎಂದು ನೇರವಾಗಿಯೇ ಹೇಳುವ ಮೂಲಕ ಜೆಡಿಎಸ್‌ ಮತಬ್ಯಾಂಕ್‌ ಕೂಡ ಕಾಂಗ್ರೆಸ್‌ ಬುಟ್ಟಿ ಸೇರುವಂತೆ ಮಾಡಿದ್ದರು. ಆದರೂ ಕಾಂಗ್ರೆಸ್‌ ಹೈಕಮಾಂಡ್‌ ಡಿ.ಕೆ ಶಿವಕುಮಾರ್‌ ಅವರನ್ನು ಸಿಎಂ ಮಾಡದೆ ಉಪಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇದೀಗ ಮತ್ತೆ ಹಳೇ ಆಸೆಯನ್ನೇ ಬಿಚ್ಚಿಟ್ಟಿದ್ದಾರೆ.

ಡಿಕೆಶಿಯನ್ನು ಕಟ್ಟಿ ಹಾಕಲು ಯತ್ನಿಸಿದ್ರು, ಜೈಲಿಗೂ ಹಾಕಿದ್ರು..

ಹುಟ್ಟೂರು ದೊಡ್ಡಾಲಹಳ್ಳಿಯಲ್ಲಿ ಡಿಕೆ ಶಿವಕುಮಾರ್ ಮಾತನಾಡಿ, ದೇವೇಗೌಡರ ಮೇಲೆ ಚುನಾವಣೆ ಸೋತಾಗ ತೋರಿದ ಪ್ರೀತಿ ಈಗಲೂ ಇದೆ. ಈಗ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನಕ್ಕೆ ನನ್ನನ್ನು ಕೂರಿಸಿದ್ದೀರಿ. ನಾನು ಸಿಎಂ ಆಗಲಿ ಅನ್ನೋ ಆಸೆ ನಿಮ್ಮದಾಗಿತ್ತು. ಆದರೆ ಕಾಲ ಅದನ್ನ ನಿರ್ಧಾರ ಮಾಡುತ್ತದೆ. ನಮ್ಮ ಪಕ್ಷ ನಿರ್ಧಾರ ಮಾಡಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಿದ ಮೇಲೆ, ಒಂದು ದಿನವೂ ಮನೆಯಲ್ಲಿ ಮಲಗಲಿಲ್ಲ. ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿದ್ದೇನೆ. ನಿಮ್ಮ ಹಾಗೂ ನನ್ನ‌ ಕುಟುಂಬದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಲಿಲ್ಲ. ನನ್ನನ್ನು ಕಟ್ಟಿ ಹಾಕಬೇಕು ಎಂದು ಬಿಜೆಪಿಯವರು ಕಿರುಕುಳ ಕೊಟ್ಟರು, ಜೈಲಿಗೂ ಹಾಕಿದರು. ನಾನು ಯಾರಿಗೂ ಮೋಸ ಮಾಡಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಮ್ಮ ಆಸ್ತಿಯನ್ನೇ ದಾನ ಮಾಡಿದ್ದೇವೆ ಎಂದಿದ್ದಾರೆ. ಪ್ರಾಮಾಣಿಕತೆಗೆ, ಅಭಿವೃದ್ಧಿಗೆ ಕನಕಪುರದ ಜನತೆ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೀರಿ. ರಾಮನಗರ ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಅಂತ ದೊಡ್ಡ ಬೆಂಬ‌ಲ ಸಿಕ್ಕಿದೆ. ಸಿಲ್ಕು ಮತ್ತು ಮಿಲ್ಕ್ ಈ ಎರಡಕ್ಕೂ ನಮ್ಮ‌ ಜಿಲ್ಲೆ ಹೆಸರುವಾಸಿ. ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀವು ಓಟ್ ಹಾಕಿದ್ದೀರಿ. ಅದಕ್ಕೆ ನಾವು ನಿಮಗೆ ಕೊಟ್ಟ ಉಡುಗೊರೆಯೇ ಗ್ಯಾರಂಟಿಗಳು ಎಂದಿದ್ದಾರೆ.

ಮುಂದಿನ ಮುಖ್ಯಮಂತ್ರಿ ನಾನೇ.. ಡೌಟ್ ಬೇಡ..

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುವ ಮೂಲಕ ಡಿ.ಕೆ ಶಿವಕುಮಾರ್‌ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದ್ದಾರೆ. ಸ್ವಗ್ರಾಮದಲ್ಲಿ ಮಾತನಾಡಿರುವ ಡಿ.ಕೆ ಶಿವಕುಮಾರ್, ‘ಪವರ್‌ ಶೇರಿಂಗ್‌’ ಗುಟ್ಟು ರಟ್ಟು ಮಾಡಿದ್ದಾರೆ. ನಿಮಗೆಲ್ಲ ನಾನು ಸಿಎಂ ಆಗಬೇಕು ಎಂಬ ಆಸೆ ಇತ್ತು. ಅಧಿಕಾರ ನಶ್ವರ, ನಾವು ಮಾಡುವ ಕೆಲಸ ಅಜರಾಮರ. ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತೆ, ನನಗೂ ಅವಕಾಶ ಸಿಗುತ್ತೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಸಿಎಂ ತಾವೇ ಎಂದಿದ್ದಾರೆ. ಇನ್ನೂ ರಾಹುಲ್ ಗಾಂಧಿ ಹಾಗು ಮಲ್ಲಿಕಾರ್ಜುನ ಖರ್ಗೆ ಕೆಲವೊಂದು ಮಾತನಾಡಿದರು. ಅವರ ಸೂಚನೆ ಮೇರೆಗೆ ಒಂದು ನಿರ್ಧಾರಕ್ಕೆ ಒಪ್ಪಿಕೊಂಡಿದ್ದೇನೆ. ಅದೇ ಕಾರಣಕ್ಕಾಗಿ ತಾಳ್ಮೆಯಿಂದ ಇದ್ದೇನೆ. ಒಳ್ಳೇ ಕಾಲ ಬಂದೇ ಬರುತ್ತದೆ ಎನ್ನುವ ಮೂಲಕ ನಾನು ಮುಂದಿನ ಮುಖ್ಯಮಂತ್ರಿ ಎಂದು ಬಹಿರಂಗವಾಗಿ ಹೇಳಿದ್ದಾರೆ. ಡಿಕೆ ಶಿವಕುಮಾರ್ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿರುತ್ತದೆ ಅನ್ನೋದ್ರ ಮೇಲೆ ಕಾಂಗ್ರೆಸ್ ಸಿಎಂ ಕುರ್ಚಿ ಬಿಕ್ಕಟ್ಟು ಸ್ವರೂಪ ಪಡೆಯಲಿದೆ.

ಕೃಷ್ಣಮಣಿ

Tags: amithshahBJPcmsiddaramiahCongress PartyDCM DK ShivakumarDKShivakumardksnextcmKarnataka GovernmentlatestnewsnextcmdksPMModisiddaramaiah
Previous Post

BREAKING ಯುವನಿಧಿ ಯೋಜನೆ ಅಧಿಕೃತವಾಗಿ ಜಾರಿಗೊಳಿಸಿದ ರಾಜ್ಯ ಸರ್ಕಾರ..!

Next Post

ಒಡಿಶಾ ರೈಲು ದುರಂತ : ಬೆಂಗಳೂರಿನ ಹೋಟೆಲ್​ ಕಾರ್ಮಿಕ ದುರ್ಮರಣ

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
Odisha Train Accident : ಒಡಿಶಾ ರೈಲು ದುರಂತ ; ಗಾಯಾಳುಗಳಿಗಾಗಿ ಮಿಡಿದ ಹೃದಯಗಳು, ರಕ್ತ ನೀಡಲು ಮುಂದೆ ಬಂದ ಸಾಲು ಸಾಲು ಜನ

ಒಡಿಶಾ ರೈಲು ದುರಂತ : ಬೆಂಗಳೂರಿನ ಹೋಟೆಲ್​ ಕಾರ್ಮಿಕ ದುರ್ಮರಣ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!