• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
January 11, 2026
in Top Story, ಕರ್ನಾಟಕ, ರಾಜಕೀಯ
0
ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ ಯಾವುದೇ ವೇದಿಕೆಯಲ್ಲಾದರೂ ಚರ್ಚೆ ಬರಲಿ, ನಾನು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar )ಹೇಳಿದ್ದಾರೆ.

ADVERTISEMENT
HD KUMARSWAMY : ನನ್ನ ಹತ್ತಿರ ಬಂದು ಮಾಹಿತಿ ಕೊಟ್ರೆ ಏನು ಕೆಲಸ ಮಾಡಬೇಕು ಅಂತಾ ನನಗೆ ಚೆನ್ನಾಗಿ ಗೊತ್ತು

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಅದನ್ನು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದವರು ಚರ್ಚೆಗೆ ಸಿದ್ಧ ಎಂದಿದ್ದಾರೆ. ಅವರು ಯಾವುದೇ ಮಾಧ್ಯಮ ವೇದಿಕೆಯಲ್ಲಾದರೂ, ಯಾವಾಗ ಕರೆದರೂ ನಾನು ಚರ್ಚೆಗೆ ಬರುತ್ತೇನೆ. ಕುಮಾರಸ್ವಾಮಿ ಅವರು ಚರ್ಚೆಗೆ ಬಂದರೆ ನಾನು ಅವರನ್ನು ಸ್ವಾಗತಿಸುತ್ತೇನೆ. ಮೊದಲು ಅವರು ಬಂದರೆ ಬಹಳ ಒಳ್ಳೆಯದು. ಬಿಜೆಪಿ ರಾಜ್ಯ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಕುಮಾರಸ್ವಾಮಿ ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಸಾರ್ವಜನಿಕ ವೇದಿಕೆ, ಅಧಿವೇಶನ ಅಥವಾ ಮಾಧ್ಯಮ ವೇದಿಕೆಯಾದರೂ ಸರಿ. ಚರ್ಚೆಗೆ ನಾನು ಸಿದ್ಧ ಎಂದರು.

KJ George : ರಾಜಕೀಯಕ್ಕೆ ಬನ್ನಿ ಜನಸೇವೆ ಮಾಡಿ ಎಂದು ನನ್ನ ಯಾರೂ ಒತ್ತಾಯ ಮಾಡಿಲ್ಲ #pratidhvani #kjgeorge

ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯುವ ಕುಮಾರಸ್ವಾಮಿ ಮಾತು ಗಂಭೀರವಲ್ಲ

ಸಿಎಂ ಸಿದ್ದರಾಮಯ್ಯ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಮೊದಲಿನಿಂದ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆದು ಹೋಗುವುದನ್ನು ನೋಡಿದ್ದೇವೆ. ಅವರ ಟೀಕೆಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡುತ್ತಾರೆ. ಆ ಸಾಮರ್ಥ್ಯ ಅವರಿಗಿದೆ. ಬಹಿರಂಗ ಚರ್ಚೆಗೆ ಯಾವಾಗ ಸಮಯ ನಿಗದಿ ಮಾಡುತ್ತೀರಾ ಹೇಳಿ. ಇವತ್ತು ಸಂಜೆಯಿಂದಲೇ ಚರ್ಚೆಗೆ ಸಿದ್ಧ. ನರೇಗಾ ವಿಚಾರದಲ್ಲಿ ನನಗೆ ಚರ್ಚೆ ಮಾಡಲು ಯಾವ ತಯಾರಿಯೂ ಬೇಕಾಗಿಲ್ಲ. ಎಲ್ಲಾ ಮಾಹಿತಿಗಳು ನನ್ನ ಬೆರಳ ತುದಿಯಲ್ಲಿವೆ. ಬೇರೆ ಎಲ್ಲೂ ಹೋಗಬೇಕಿಲ್ಲ ಎಂದು ಹೇಳಿದರು.

Chaluvarayaswamy : ದೇವೇಗೌಡರು ಆಗ ಸೆಕ್ಯೂಲರ್‌ ಪಾರ್ಟಿ ಅಂತಿದ್ರು..ಈಗ ಹೀಗೆ ಮಾಡ್ಬಿಟ್ರು..! #pratidhvani

ನರೇಗಾ ಯೋಜನೆಯಲ್ಲಿ ನಮ್ಮ ಕನಕಪುರ ತಾಲೂಕಿನಲ್ಲಿ ಎಷ್ಟು ಕೆಲಸ ಆಗಿದೆ ಎಂದು ನಮಗೆ ಗೊತ್ತಿದೆ. ನರೇಗಾ ಯೋಜನೆ ಜಾರಿಯಲ್ಲಿ ಕನಕಪುರ ನಂಬರ್ 1 ಎಂದು ಬಿಜೆಪಿಯ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ಈ ವಿಚಾರ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ ಅವರಿಗೆ ಗೊತ್ತಿದೆಯೋ ಇಲ್ಲವೋ. ನಮ್ಮ ತಾಲ್ಲೂಕಿನಲ್ಲಿ ಅವ್ಯವಹಾರ ಆಗಿದೆಯೇ ಇಲ್ಲವೇ ಎಂದು ಕೇಂದ್ರ ಸರ್ಕಾರ ಹತ್ತು ತಂಡ ಕಳುಹಿಸಿ ತನಿಖೆ ಮಾಡಿಸಿದೆ ಎಂದರು.

Tags: BJPcongressDCM D.K. ShivakumarHD KumaraswamyKarnataka PoliticsPoliticsVB-G RAM G Bill
Previous Post

ರಸ್ತೆ ಅತಿಕ್ರಮಣ ಪ್ರಶ್ನೆಗೆ ಸಿಟ್ಟಿಗೆದ್ದ ವ್ಯಾಪಾರಿಯಿಂದ ಪ್ರಧಾನಿ ಮೋದಿಗೆ ಅವಾಚ್ಯ ನಿಂದನೆ ಆರೋಪ

Next Post

ನಡು ರಸ್ತೆಯಲ್ಲಿ ಮಹಿಳಾ ಹೋಂ ಗಾರ್ಡ್ ಮೇಲೆ ಯುವತಿ ಹಲ್ಲೆ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
ರಾಜಕೀಯ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

by ಪ್ರತಿಧ್ವನಿ
April 27, 2026
0

“ದೀದಿ” ಎಂದು ಪ್ರಸಿದ್ಧರಾದ ಮಮತಾ ಬ್ಯಾನರ್ಜಿ ಅವರು ಇಂದಿನ ಭಾರತೀಯ ರಾಜಕೀಯದಲ್ಲಿ ಅತ್ಯಂತ ಪ್ರಭಾವಿ ಮಹಿಳಾ ನಾಯಕರಲ್ಲಿ ಒಬ್ಬರು. ಪಶ್ಚಿಮ ಬಂಗಾಳ ರಾಜ್ಯದ ರಾಜಕೀಯವನ್ನು ಕಳೆದ ಒಂದು...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
Next Post
ನಡು ರಸ್ತೆಯಲ್ಲಿ ಮಹಿಳಾ ಹೋಂ ಗಾರ್ಡ್ ಮೇಲೆ ಯುವತಿ ಹಲ್ಲೆ

ನಡು ರಸ್ತೆಯಲ್ಲಿ ಮಹಿಳಾ ಹೋಂ ಗಾರ್ಡ್ ಮೇಲೆ ಯುವತಿ ಹಲ್ಲೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada