• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

GBA ಚುನಾವಣೆ: ರಾಜ್ಯ ಚುನಾವಣಾ ಆಯೋಗಕ್ಕೆ ಡಿ.ಕೆ ಶಿವಕುಮಾರ್ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
February 19, 2026
in Top Story, ಕರ್ನಾಟಕ, ರಾಜಕೀಯ
0
GBA ಚುನಾವಣೆ: ರಾಜ್ಯ ಚುನಾವಣಾ ಆಯೋಗಕ್ಕೆ ಡಿ.ಕೆ ಶಿವಕುಮಾರ್ ಪತ್ರ
Share on WhatsAppShare on FacebookShare on Telegram

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ADVERTISEMENT
B. S. Yediyurappa  : ರಾಜಕೀಯದಲ್ಲಿ 50 ವರ್ಷ ಪೊರೈಸಿದ ರಾಜಾಹುಲಿ.. #pratidhvani

ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಮತದಾರರನ್ನು ಬೇರೆ ಬೇರೆ ಮತಗಟ್ಟೆಗಳು ಹಾಗೂ ಬೇರೆ ವಾರ್ಡ್‌ಗಳಿಗೆ ವಿಂಗಡಿಸಲಾಗಿದೆ, ಮತದಾರರ ವಿಳಾಸದಲ್ಲಿ ಮನೆ ಸಂಖ್ಯೆ ತಪ್ಪಾಗಿರುವುದು, ರಸ್ತೆ ಸಂಖ್ಯೆ ತಪ್ಪಾಗಿ ನಮೂದಿಸಲಾಗಿದೆ. ಮತದಾರರ ಹೆಸರು ಎರಡು ಹಾಗೂ ಹೆಚ್ಚು ಬಾರಿ ಸೇರ್ಪಡೆ, ಮತ್ತೆ ಕೆಲವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇಷ್ಟೇ ಅಲ್ಲದೇ, ಕೆಲವು ಬೀದಿಗಳಲ್ಲಿ ಇರುವ ಮತದಾರರ ಹೆಸರುಗಳೇ ಪಟ್ಟಿಯಲ್ಲಿ ಕಣ್ಮರೆಯಾಗಿವೆ. ಮತ್ತೆ ಕೆಲವು ಮತದಾರರ ವಿಳಾಸ ಸರಿಯಾಗಿದ್ದರೂ ಅವರನ್ನು ಬೇರೆ ವಾರ್ಡ್ ಗಳಿಗೆ ಹಾಕಲಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಈ ತಪ್ಪುಗಳು ಕಣ್ತಪ್ಪಿನಿಂದ ಆಗಿರುವಂತೆ ಕಾಣುತ್ತಿಲ್ಲ. ಉದ್ದೇಶಪೂರ್ವಕವಾಗಿ ಮತದಾರರು ಹಾಗೂ ಬಿಎಲ್ಒಗಳು, ರಾಜಕೀಯ ಪಕ್ಷಗಳಲ್ಲಿ ಗೊಂದಲ ಮೂಡಿಸಲು ವ್ಯವಸ್ಥಿತವಾಗಿ ನಡೆಸಿರುವಂತಿದೆ. ಇದರಿಂದ ಮತದಾರರ ಪಟ್ಟಿಯ ವಿಶ್ವಾಸಾರ್ಹತೆಗೆ ಧಕ್ಕೆಯುಂಟು ಮಾಡಲಿದೆ. ಈ ಪ್ರಮಾದಗಳನ್ನು ಪಾರದರ್ಶಕವಾಗಿ ಹಾಗೂ ಶಾಶ್ವತವಾಗಿ ಸರಿಪಡಿಸಬೇಕಾಗಿದೆ. ಹೀಗಾಗಿ ಬೀದಿವಾರು ಹಾಗೂ ಮನೆವಾರು ಮ್ಯಾಪಿಂಗ್ ಮಾಡುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು ಎಂದು ಆಯೋಗಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಆಗ್ರಹಿಸಿದ್ದಾರೆ.

Sumalatha : ಬಿಜೆಪಿ - ಜೆಡಿಎಸ್‌ ಮೈತ್ರಿ ಬಗ್ಗೆ ಬಿಜೆಪಿ ಮಾಜಿ ಸಂಸದೆ ಸುಮಲತಾ ಏನಂದ್ರು..!

ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿಗಳು, ಪ್ರತಿ ಬೀದಿಗಳಲ್ಲಿರುವ ಎಲ್ಲಾ ಮನೆಗಳು, ಪ್ರತಿ ಮನೆಯಲ್ಲಿರುವ ಎಲ್ಲಾ ಮತದಾರರನ್ನು ಮ್ಯಾಪಿಂಗ್ ಮಾಡಬೇಕು. ಇದರಿಂದ ಮತದಾರರ ಪಟ್ಟಿ ನಿಖರತೆ ಕಾಪಾಡಿ, ನಕಲಿ ಮತದಾರರನ್ನು ತೆಗೆಯಲು ಹಾಗೂ ಕೈಬಿಡಲಾಗಿರುವ ಮತದಾರರನ್ನು ಮತ್ತೆ ಸೇರಿಸಲು ನೆರವಾಗಲಿದೆ. ಅರ್ಹ ಮತದಾರರು ಮತದಾನದ ಅವಕಾಶದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗವು ವಿಶೇಷವಾಗಿ ಪರಿಷ್ಕರಣ ಅಭಿಯಾನ ನಡೆಸಬೇಕು ಎಂದು ತಿಳಿಸಿದ್ದಾರೆ.

Tags: BJPCM SiddaramaiahcongressDCM DK ShivakumarElectionsElections 2026GBA ElectionGBA Election 2026KarnatakaKarnataka PoliticsPolitics
Previous Post

Transport Employees Protest: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್‌..!

Next Post

ಕೆಂಡದಂಥ ಕೋಪ, ಹೃದಯವಂತ ಕೆಲಸಗಾರ : ಹೇಗಿತ್ತು ಶೂನ್ಯದಿಂದ ಸಿಂಹಾಸನದವರೆಗೆ ಯಡಿಯೂರಪ್ಪ 50 ವರ್ಷದ ರಾಜಕೀಯ ಪಯಣ..?

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ಕೆಂಡದಂಥ ಕೋಪ, ಹೃದಯವಂತ ಕೆಲಸಗಾರ : ಹೇಗಿತ್ತು ಶೂನ್ಯದಿಂದ ಸಿಂಹಾಸನದವರೆಗೆ ಯಡಿಯೂರಪ್ಪ 50 ವರ್ಷದ ರಾಜಕೀಯ ಪಯಣ..?

ಕೆಂಡದಂಥ ಕೋಪ, ಹೃದಯವಂತ ಕೆಲಸಗಾರ : ಹೇಗಿತ್ತು ಶೂನ್ಯದಿಂದ ಸಿಂಹಾಸನದವರೆಗೆ ಯಡಿಯೂರಪ್ಪ 50 ವರ್ಷದ ರಾಜಕೀಯ ಪಯಣ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada