• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತು

ಪ್ರತಿಧ್ವನಿ by ಪ್ರತಿಧ್ವನಿ
October 15, 2023
in Top Story, ಕರ್ನಾಟಕ
0
ಮೈಸೂರಿನಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್  ಮಾತು
Share on WhatsAppShare on FacebookShare on Telegram

ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ, ಹೆಣ್ಣು ದೇವತೆಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಲಾಗಿದೆ. ಕರ್ನಾಟಕದ ಯಾವುದೇ ಊರಿಗೆ ಹೋದರು ಅಲ್ಲಿ ಗ್ರಾಮ ದೇವತೆ ಇರುತ್ತದೆಯೇ ಹೊರತು ಯಾವುದೇ ಗಂಡು ದೇವರುಗಳು ಇರುವುದಿಲ್ಲ. ತಂದೆ ಭಾಷೆಯನ್ನು ಯಾರೂ ಕೇಳುವುದಿಲ್ಲ, ಆದರೆ ಅರ್ಜಿಯಲ್ಲಿ ಮಾತೃ ಭಾಷೆ ಯಾವುದು ಎಂದು ಕೇಳುತ್ತಾರೆ. ಅದೇ ರೀತಿ ಚಾಮುಂಡಿ ತಾಯಿ ಈ ನಾಡಿಗೆ ಅಧಿದೇವತೆ. ಈ ರಾಜ್ಯದ ದುಃಖವನ್ನು ದೂರಮಾಡು, ನುಡಿದಂತೆ ನಡೆಯಲು ಶಕ್ತಿ ಕೊಡು ತಾಯಿ ಎಂದು ಚುನಾವಣೆಗೆ ಮುಂಚಿತವಾಗಿ ಬಂದು ಪ್ರಾರ್ಥನೆ ಮಾಡಿದ್ದೆವು. ತಾಯಿ ಆಶೀರ್ವಾದ ಮಾಡಿದಳು.

ADVERTISEMENT

ಯಶಸ್ವಿಯಾಗಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ನಮ್ಮ ಕೈ ಹಿಡಿದ ಈ ನಾಡಿನ ಜನರ ಕಷ್ಟ ದೂರ ಮಾಡು ಎಂದು ಮುಖ್ಯಮಂತ್ರಿಗಳ ಜೊತೆ ಬಂದು ದೇವಿಗೆ 2,000 ಕಾಣಿಕೆ ಸಲ್ಲಿಸಿ, ಹರಕೆ ತೀರಿಸಿದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌. ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ನೀಡಲು ಬಂದಿದ್ದ ಅಧಿಕಾರಿಗಳು ಶ್ರೀಮತಿ, ಆನಂತರ ಶ್ರೀ ಡಿ.ಕೆ.ಶಿವಕುಮಾರ್ ಎಂದು ಬರೆದಿದ್ದರು. ಗೌರಿಯ ಹೆಸರು ಹೇಳಿ ಗಣೇಶ ಎನ್ನುತ್ತೇವೆ, ಲಕ್ಷ್ಮಿ ವೆಂಕಟೇಶ್ವರ ಎಂದು ಹೇಳುತ್ತೇವೆ. ಇದರ ಅರ್ಥ ಹೆಣ್ಣಿಗೆ ನಮ್ಮ ಸಂಸ್ಕೃತಿಯಲ್ಲಿ ಮೊದಲ ಆದ್ಯತೆ.

ಈ ರಾಜ್ಯದ ಜನಸಮಾನ್ಯರ ದುಖಃವನ್ನು ದೂರ ಮಾಡಿದ ದೇವಿ ದುರ್ಗಾ ದೇವಿ. ಕರ್ನಾಟಕ ಮತ್ತು ಮೈಸೂರಿನ ಇತಿಹಾಸ ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಬಾರಿ ಜನಸಾಮಾನ್ಯರಂತೆ ಇದ್ದು, ಉನ್ನತ ಮಟ್ಟಕ್ಕೆ ಬೆಳೆದವರ ಕೈಯಲ್ಲಿ ದಸರಾ ಉದ್ಘಾಟನೆ ಮಾಡಬೇಕು ಎನ್ನುವ ಅಭಿಪ್ರಾಯ ಬಂದ‌ ಕಾರಣ, ಈ ನಾಡಿಗೆ ಕಲಾ ಸೇವೆಯನ್ನು ಮಾಡಿದ ಹಂಸಲೇಖ ಅವರಿಂದ ಉದ್ಘಾಟನೆ ಮಾಡಿಸುವ ತೀರ್ಮಾನ ಮಾಡಲಾಯಿತು.

ಕೇಳಿ ಕೊಡುವ ನೂರಾರು ಬಹುಮಾನಕ್ಕಿಂತ, ಕೇಳದೆ ನೀಡುವ ಬಹುಮಾನಕ್ಕೆ ಹೆಚ್ಚು ಬೆಲೆ ಕೇಳಿ ಪಡೆಯುವ ಗೌರವಕ್ಕಿಂತ, ಕೇಳದೆ ಪಡೆಯುವ ಗೌರವವೇ ದೊಡ್ಡದು. ಸಂಪತ್ತು ಎಷ್ಟೇ ಇರಲಿ ಸರಳತೆಯೇ ಮನುಷ್ಯನಿಗೆ ಹೆಚ್ಚು ಬೆಲೆ ತಂದುಕೊಡುತ್ತದೆ. ಸರಳತೆಗೆ ಎಂದಿಗೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ನಮ್ಮೆಲ್ಲರ ನಡುವೆ ಅತ್ಯಂತ ಜನಸಾಮಾನ್ಯರಾಗಿ ಬದುಕುತ್ತಿರುವ ಹಂಸಲೇಖ ಅವರನ್ನು ಉದ್ಘಾಟಕರನ್ನಾಗಿ ಆಯ್ಕೆ ಮಾಡಿದ್ದೇ ಈ ಕಾರಣಕ್ಕೆ. ಮರಕ್ಕೆ ಬೇರು ಹೇಗೆ ನಂಬಿಕೆಯೋ, ಅದೇ ರೀತಿ ಹಂಸಲೇಖ ಅವರು ನಮ್ಮ ಸಂಸ್ಕೃತಿಯ ರಾಯಭಾರಿ.

ಚುನಾವಣೆಯಲ್ಲಿ ನಮ್ಮ ಕೈಹಿಡಿದು ದೊಡ್ಡ ದುಃಖವನ್ನು ದೂರ ಮಾಡಿದ ಜನರು, ದೇವಸ್ಥಾನಕ್ಕೆ ಬರುವುದೇ ಮನಶಾಂತಿಗಾಗಿ. ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳವೇ ದೇವಸ್ಥಾನ. ಉದ್ಘಾಟನೆಯ ನಂತರ ದೇವಿಯ ಹಾಡು ಹಾಡುವಂತೆ ಹಂಸಲೇಖ ಅವರಿಗೆ ನಾನು ಮನವಿ ಮಾಡಿದ್ದೆ,‌ ಆದರೆ ಅವರು ಸಂವಿಧಾನ ಪೀಠಿಕೆಯನ್ನೇ ಹಾಡಿಸಿ ಇಡೀ ದೇಶಕ್ಕೆ ದೊಡ್ಡ ಸಂದೇಶ ನೀಡಿದ್ದಾರೆ. ಇದನ್ನ ಉಳಿಸಿ, ಬೆಳೆಸಿಕೊಳ್ಳೋಣ, ಸಂವಿಧಾನದ ಆಶಯದಂತೆ ನಡೆಯೋಣ.

ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪ್ರಾರಂಭವಾದ ಈ ವಿಜಯದಶಮಿ ಹಬ್ಬವನ್ನು ಪಕ್ಷ ಬೇಧ ಮರೆತು ನಾವೆಲ್ಲಾ ಆಚರಿಸಿಕೊಂಡು ಹೋಗಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಶಯದಂತೆ ನಾವೆಲ್ಲಾ ನಡೆಯೋಣ. ಕರ್ನಾಟಕದ ಘನತೆಯನ್ನು ಎತ್ತಿಹಿಡಿಯುವ ಶಕ್ತಿ ನೀಡಲಿ ಎಂದು ದೇವತೆಯಲ್ಲಿ ಪ್ರಾರ್ಥಿಸೋಣ.

Tags: Dasara FestivalDCM DK ShivakumarKarnatakaMysuruNews
Previous Post

ಡಿಸಿಎಂ ಡಿಕೆಶಿವಕುಮಾರ್ ಗೆ ಟಾಂಗ್‌ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Next Post

ಪರಶುರಾಮ ಥೀಮ್ ಪಾರ್ಕ್ ಅಕ್ರಮಕ್ಕೆ ಟ್ವಿಸ್ಟ್: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ನಕಲಿ ಪ್ರತಿಮೆಯ ಅಸಲಿ ಕಥೆ!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಪರಶುರಾಮ ಥೀಮ್ ಪಾರ್ಕ್ ಅಕ್ರಮಕ್ಕೆ ಟ್ವಿಸ್ಟ್: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ನಕಲಿ ಪ್ರತಿಮೆಯ ಅಸಲಿ ಕಥೆ!

ಪರಶುರಾಮ ಥೀಮ್ ಪಾರ್ಕ್ ಅಕ್ರಮಕ್ಕೆ ಟ್ವಿಸ್ಟ್: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ನಕಲಿ ಪ್ರತಿಮೆಯ ಅಸಲಿ ಕಥೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada