• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

ರೈತರ ಮಕ್ಕಳು ಅಂತ ಹೇಳಿಕೊಳ್ಳುವವರು ಯಾಕೆ ಈ ಯೋಜನೆ ಮಾಡ್ಲಿಲ್ಲ :‌ ದಳಪತಿಗಳಿಗೆ ಡಿಕೆ ಟಾಂಗ್..

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Share on WhatsAppShare on FacebookShare on Telegram

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಇಲ್ಲಿ ಇಂದು ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿ, ಸತ್ತೇಗಾಲದಿಂದ ಇಗ್ಗಲೂರಿಗೆ 26 ಕಿ.ಮೀ, ಇಗ್ಗಲೂರಿನಿಂದ ಮೊಗೇನಹಳ್ಳಿಗೆ 58 ಕಿ.ಮೀ. ಮೊಗೇನಹಳ್ಳಿಯಿಂದ ಕಣ್ವಕ್ಕೆ 6 ಕಿ.ಮೀ, ಕಣ್ವದಿಂದ ವೈ.ಜಿ. ಗುಡ್ಡಕ್ಕೆ 25 ಕಿ.ಮೀ ಸೇರಿ ಒಟ್ಟು 115 ಕಿ.ಮೀ ಮಾರ್ಗದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ನೀರನ್ನು ಪಂಪ್ ಮಾಡಿ ಹರಿಸಲಾಗುವುದು ಎಂದು ತಿಳಿಸಿದ್ದಾರೆ.

Dk Shivakumar: ನಾಳೆ ಅಂತಾ ಭವಿಷ್ಯ ಹೇಳವನು ನಾನಲ್ಲ.. #pratidhvani #dkshivakumar #magadi #hdkumaraswamy

ನಾವು ಅಂತರ್ಜಲ ಹೆಚ್ಚಳ ಮಾಡಲು ಈ ನೀರು ತರುತ್ತಿದ್ದೇವೆ. ಇದಕ್ಕೆ 160 ಎಚ್.ಪಿ ಪಂಪ್ ಮೂಲಕ 115 ಕಿ.ಮೀ ದೂರಕ್ಕೆ ಲಿಫ್ಟ್ ಮಾಡಲಾಗುತ್ತಿದೆ. ಆ ಮೂಲಕ ಈ ಭಾಗದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ಇದರಿಂದ ರೈತರಿಗೆ ಶಕ್ತಿ ತುಂಬುವಂತಾಗುತ್ತದೆ. ಬಡ ರೈತನ ಬದುಕಿಸಲು, ಸಹಾಯ ಮಾಡಲು ರೈತರ ಮಕ್ಕಳಿಗೆ ಈ ಚಿಂತನೆ ಬರಲಿಲ್ಲವೇ? ಜನರಿಂದ ಮತ ಹಾಕಿಸಿಕೊಂಡು ರಾಜಕಾರಣ ಮಾಡಿಕೊಂಡಿರುವುದಲ್ಲ. ಜನ ನಮ್ಮನ್ನು ನಾಯಕರನ್ನಾಗಿ ಆಯ್ಕೆ ಮಾಡಿದ್ದು, ಜನರ ಬದುಕಿನಲ್ಲಿ ಬಡಲಾವಣೆ ತರಲು ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ನಮ್ಮ ಕೆಲಸ ನೋಡಿ ನಾವು ಇಂತಹ ಕೆಲಸ ಮಾಡಲು ಆಗಲಿಲ್ಲವಲ್ಲ ಎಂದು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಜೆಡಿಎಸ್‌ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

“ಕುಮಾರಣ್ಣ ಅವರು ಮಂಡ್ಯ ಸಂಸದರಾಗಿದ್ದಾರೆ, ಮದ್ದೂರಿನಲ್ಲಿ ರೈತರಿಗೆ ನಮ್ಮ ರೀತಿ ಟ್ರಾನ್ಸ್ಫಾರ್ಮರ್ ಹಾಕಿಸಲು ಹೇಳಿ ನೋಡೋಣ. ಕೇಂದ್ರ ಸರ್ಕಾರದಿಂದ ಹಣ ತಂದು ಮಂಡ್ಯದ ರೈತರಿಗೆ ಟ್ರಾನ್ಸ್ಫಾರ್ಮರ್ ಹಾಕಿಸಲಿ ಸಾಕು. ರೈತರ ಪಂಪ್ ಸೆಟ್ ಗಳಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡಿದ್ದು ನಾವು, ಕಾಂಗ್ರೆಸ್ ಸರ್ಕಾರ. ಇಲ್ಲಿ ಬಂದಿದ್ದ ಕೆಲವು ಮಹಿಳಾ ಫಲಾನುಭವಿಗಳಿಗೆ ಪಟ್ಟಾ ದಾಖಲೆ ಕೊಟ್ಟಿದ್ದೇವೆ. ಅದರಲ್ಲಿ ಅವರ ಫೋಟೋ, ಅವರ ಮನೆ ಫೋಟೋ, ಇ ಖಾತಾ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ರೀತಿ 2.20 ಲಕ್ಷ ಜನರಿಗೆ ಆಸ್ತಿ ದಾಖಲೆ ನೀಡುವ ಮೂಲಕ ಭೂಮಿ ಗ್ಯಾರಂಟಿ ನೀಡಿದ್ದೇವೆ. ಅಶೋಕಣ್ಣ, ನಿಮ್ಮ ಅವಧಿಯಲ್ಲಿ, ಜನತಾ ದಳದ ಅವಧಿಯಲ್ಲಿ ಇಂತಹ ಕೆಲಸ ಮಾಡಲು ಆಗುತ್ತಿರಲಿಲ್ಲವೇ? ಉಳುವವನಿಗೆ ಭೂಮಿ, ಬಗರ್ ಹುಕ್ಕುಂ, ಅರಣ್ಯ ಭಾಗದ ರೈತರಿಗೆ ಜಮೀನು ಸೇರಿದಂತೆ ರೈತರ ಪರವಾಗಿ ದೆಹಲಿಯಲ್ಲಾದರೂ ಸರಿ, ರಾಜ್ಯದಲ್ಲಾದರೂ ಸರಿ ಯೋಜನೆ ರೂಪಿಸಿದ್ದರೆ ಅದು ಕಾಂಗ್ರೆಸ್ ಮಾತ್ರ. ಇಂತಹ ಒಂದೇ ಒಂದು ಕೆಲಸ ಮಾಡಲು ಆಗದಿದ್ದರೆ ಮತ್ಯಾಕೆ ಜನ ಮತ ಹಾಕಬೇಕು?” ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಹೀಗೂ ಉಂಟೆ ಕಾರ್ಯಕ್ರಮ ನೋಡಿರುತ್ತೀರಿ..!

ಟಿವಿಯಲ್ಲಿ ಹೀಗೂ ಉಂಟೆ ಎಂಬ ಕಾರ್ಯಕ್ರಮವನ್ನು ಎಲ್ಲರೂ ನೋಡಿರುತ್ತೀರಿ. ನಾನು ಇಲ್ಲಿ ನಮ್ಮ ಕೆಲಸವನ್ನು ತೋರಿಸಲು ನಿಂತಿದ್ದೇನೆ, ಹೊರತು, ಮುಂದೆ ಇಂತಹ ಕೆಲಸ ಮಾಡುತ್ತೇನೆ ಎಂದು ಹೇಳಲು ನಿಂತಿಲ್ಲ. ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ. ನಾಳೆ ಕೆಲಸ ಮಾಡುತ್ತೇವೆ ಎಂಬುದು ಶತೃತ್ವ, ಇವತ್ತೇ ಕೆಲಸ ಮಾಡುತ್ತೇವೆ ಎಂಬುದು ಮಿತ್ರತ್ವ. ನಾಳೆ ಯಾರು ಇರುತ್ತಾರೋ ಇರುವುದಿಲ್ಲವೋ ಗೊತ್ತಿಲ್ಲ. ಅಧಿಕಾರ ಇದ್ದಾಗ ನಾವು ಏನು ಮಾಡಿದೆವು ಎಂಬುದು ಮುಖ್ಯ. ನಮ್ಮದು ನಾಳೆ ಎನ್ನುವ ಸರ್ಕಾರವಲ್ಲ, ಇಂದೇ ಎನ್ನುವ ಸರ್ಕಾರ” ಎಂದು ಡಿಕೆ ಶಿವಕುಮಾರ್‌ ದಳಪತಿಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

“ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಮತಕ್ಕಾಗಿ ಬಂದಾಗ ಯಾರು ಏನು ಮಾಡಿದ್ದಾರೆ ಎಂದು ಕೇಳಬೇಕು. ಕಾಂಗ್ರೆಸ್ ಕಾರ್ಯಕರ್ತರು ನೀವುಗಳು ಬೇರೆ ಪಕ್ಷಗಳ ನಿಮ್ಮ ಸ್ನೇಹಿತರ ಜತೆ ಯಾರ ಕಾಲದಲ್ಲಿ ಯಾವ ಕೆಲಸ ಆಗಿದೆ ಎಂದು ಲೆಕ್ಕಾಚಾರ ಹಾಕಬೇಕು. ಅಧಿಕಾರ ಯಾರಿಗೆ ಇರಲಿಲ್ಲ? ದಳದ ಸಿಎಂ, ಪ್ರಧಾನಿ ಎಲ್ಲರಿಗೂ ಅಧಿಕಾರ ಇತ್ತಲ್ಲವೇ? ಅಧಿಕಾರದಲ್ಲಿ ಇದ್ದಾಗ ಯಾವ ಸಾಕ್ಷಿ ಗುಡ್ಡೆ ಬಿಟ್ಟು ಹೋಗಿದ್ದಾರೆ?” ದೇವೇಗೌಡ ಕುಟುಂಬದ ವಿರುದ್ಧ ಅಬ್ಬರಿಸಿದ್ದಾರೆ.

“ಈ ಮಾಗಡಿ ಗುಡ್ಡಗಾಡು ಪ್ರದೇಶ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಈ ಜಿಲ್ಲೆಯನ್ನು ರಾಮನಗರ ಎಂದು ಮಾಡುವಾಗ ನಮ್ಮ ಹೆಸರು, ಗುರುತನ್ನು ಯಾಕೆ ತೆಗೆಯುತ್ತಿದ್ದೀರಿ? ನಾನು ಜಿಲ್ಲಾ ಪಂಚಾಯ್ತಿ ಸದಸ್ಯನಾದಾಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಂತಾ ಇತ್ತು. ಸುರೇಶ್ ಸಂಸದರಾಗಿದ್ದು ಬೆಂಗಳೂರು ಗ್ರಾಮಾಂತರಕ್ಕೆ. ಜಿಲ್ಲೆಯ ಕೇಂದ್ರಾಡಳಿತ ರಾಮನಗರದಲ್ಲೇ ಇರಲಿ, ಆದರೆ ಜಿಲ್ಲೆಯ ಹೆಸರಿನಲ್ಲಿ ಬೆಂಗಳೂರು ಹೆಸರನ್ನು ತೆಗೆಯಬೇಡಿ ಎಂದು ಕೇಳಿದೆ. ಆದರೆ ಅವರದ್ದು ಬೇರೆಯದೇ ಲೆಕ್ಕಾಚಾರ. ಆದರೆ ನೀವು ನಮಗೆ ಅಧಿಕಾರ ಮರಳಿ ನೀಡಿದ್ದೀರಿ, ಹೀಗಾಗಿ ನಮ್ಮ ಈ ಹಿಂದಿನ ಹೆಸರನ್ನು ಉಳಿಸಿಕೊಂಡು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸಿದ್ದೇವೆ” ಎಂದು ಮರುನಾಮಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

HC Balakrishna : ಎಚ್ಡಿಕೆ ಹೇಳೋದೆಲ್ಲ ಸುಳ್ಳು #pratidhvani #hcbalakrishna #hdkumaraswamy #magadi

“ನಮ್ಮ ಕೆಲಸ, ತೀರ್ಮಾನಗಳಿಂದ ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಿದೆ. ಬಿಡದಿ ಟೌನ್ ಶಿಪ್ ಯೋಜನೆ ಭೂಸಂತ್ರಸ್ತರಿಗೆ ನಾನು ಎಕರೆಗೆ 2.50 ಕೋಟಿ ಪರಿಹಾರ ನಿಗದಿ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಅಲ್ಲಿ ಎಕರೆಗೆ 6-7 ಸಾವಿರಕ್ಕೆ ಜಮೀನು ತೆಗೆದುಕೊಂಡಿದ್ದರು. ನಾನು ಕೂಡ ಎಕರೆಗೆ 7-8 ಲಕ್ಷಕ್ಕೆ 10-20 ಎಕರೆ ಜಮೀನು ಖರೀದಿ ಮಾಡಿದ್ದೇನೆ. ಭೂಸ್ವಾಧೀನವಾಗುವ ಕುಮಾರಸ್ವಾಮಿ ಅವರ ಜಮೀನಿಗೂ 2.50 ಕೋಟಿ ನಿಗದಿ ಮಾಡಿದ್ದೇವೆ. ನಾವು ಅಧಿಕಾರಕ್ಕೆ ಬಂದಾಗ ತೆಗೆದುಕೊಳ್ಳುವ ಒಂದು ತೀರ್ಮಾನ ಜನರಿಗೆ ಶಕ್ತಿ ತುಂಬುವಂತಿರಬೇಕು ಎಂದು ಡಿಕೆ ಶಿವಕುಮಾರ್‌ ಪ್ರತಿಪಾದಿಸಿದ್ದಾರೆ.

“ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚಂದ ಎಂದು ಹೇಳಿದ್ದೆ. ರಾಜ್ಯದ ಜನ 136 ಸೀಟುಗಳನ್ನು ನೀಡಿ ನಮಗೆ ಶಕ್ತಿ ನೀಡಿದ್ದಕ್ಕೆ ನಾವು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಿಮ್ಮ ಮನೆಗಳಿಗೆ ಉಚಿತ ವಿದ್ಯುತ್, ಬಡ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ, 10 ಕೆ.ಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ, ನಿರುದ್ಯೋಗಿ ಯುವಕರಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಿಮ್ಮ ಕಾಲದಲ್ಲಿ ಒಂದು ನೀವು ಒಂದೇ ಒಂದು ಟ್ರಾನ್ಸ್ಫಾರ್ಮರ್ ಕೊಟ್ಟಿದ್ದೀರಾ, ರೈತರ ಮಕ್ಕಳು ಎಂದು ಹೇಳಿಕೊಳ್ಳುವ ನೀವು ಒಂದು ಕೆರೆಯನ್ನು ತುಂಬಿಸಿದ್ದೀರಾ? ಎಂದು ಕುಮಾರಣ್ಣ, ಇಲ್ಲಿನ ಸಂಸದರು ಹಾಗೂ ದಳದ ನಾಯಕರಿಗೆ ಕೇಳಬೇಕು ಎಂದು ಹರಿಹಾಯ್ದಿದ್ದಾರೆ.

ನಾಲ್ಕು ಬಾರಿ ಗೆದ್ದರೂ ಕುಣಿಗಲ್ ಜನ ನಾಗರಾಜಯ್ಯ ಅವರನ್ನು ಸ್ಮರಿಸುತ್ತಿಲ್ಲ ಯಾಕೆ?..

“ಈ ಸರ್ಕಾರದಲ್ಲಿ ನನಗೆ ನೀರಾವರಿ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಇದೇ ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಕುಣಿಗಲ್ ರೈತರಿಗೆ ನೀರು ಹರಿಸಲು ಮುಂದಾಗಿದ್ದೇವೆ. ಈ ನೀರಿಗಾಗಿ ಹೋರಾಟ ಮಾಡಿದ ವೈ.ಕೆ ರಾಮಯ್ಯ, ಹುಚ್ಚಮಾಸ್ತಿಗೌಡರ ಹೆಸರನ್ನು ಜನ ಇವತ್ತಿಗೂ ಚರ್ಚೆ ಮಾಡುತ್ತಿದ್ದಾರೆ. ಆದರೆ ನಾಲ್ಕು ಬಾರಿ ಗೆದ್ದಿರುವ ನಾಗರಾಜಯ್ಯ ಅವರ ಹೆಸರನ್ನು ಜನ ಇನ್ನು ಮಾತನಾಡುತ್ತಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.‌

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಚಟ ಇರುವವರು ಗೋವಾದಲ್ಲಿ ಕ್ಯಾಸಿನೋಗೆ ಹೋಗುವುದಿಲ್ಲವೇ?..

ಮೈಸೂರು ಮಹಾರಾಜರ ಕಾಲದಿಂದಲೂ ಕುಣಿಗಲ್ ನಲ್ಲಿ ಕುದುರೆ ಸಾಕಲಾಗುತ್ತಿದೆ. ಬೆಂಗಳೂರು ರೇಸ್ ಕೋರ್ಸ್ ಅನ್ನು ಇಲ್ಲಿಗೆ ಸ್ಥಳಾಂತರಿಸುತ್ತೇವೆ ಎಂದರೆ ಇದಕ್ಕೆ ವಿರೋಧ ಮಾಡುತ್ತೀರಾ? ಇದರಿಂದ ಸುಮಾರು 2 ಸಾವಿರ ಜನರಿಗೆ ಕೆಲಸ ಸಿಗುತ್ತದೆ. ನಾವು ಕುಣಿಗಲ್ ಜನರಿಗೆ ರೇಸ್ ಆಡಿ ಎಂದು ಹೇಳಿಲ್ಲ. ರೇಸ್ ಕೋರ್ಸ್ ಬೆಂಗಳೂರಿನಲ್ಲಿದೆ ಎಂದು ಬೆಂಗಳೂರಿನ ಎಲ್ಲರೂ ರೇಸ್ ಆಡುತ್ತಿದ್ದಾರಾ? ನೀನು ಕೂಡ ರೇಸ್ ಆಡಬೇಡ. ನೀನು ಎಲ್ಲಿ ಆಡುತ್ತಿದ್ದೀಯಾ, ಆ ಜಾಗ ಯಾವುದು ಎಂದು ನನಗೆ ಗೊತ್ತು. ಕುಣಿಗಲ್ ಹೆಸರು ಬರುತ್ತದೆ. ಬೇರೆ ಊರುಗಳಿಂದ ಬಂದವರು, ಅದರ ಚಟ ಇರುವವರು ರೇಸ್ ಆಡುತ್ತಾರೆ. ಚಟ ಇರುವವರು ವೈನ್ ಶಾಪಿಗೆ ಹೋಗುವುದಿಲ್ಲವೇ? ಚಟ ಇರುವವರು ಗೋವಾದಲ್ಲಿ ಕ್ಯಾಸಿನೋಗೆ ಹೋಗುವುದಿಲ್ಲವೇ? ರಾಮನಗರದವರು ಹೋಗಿ ಕ್ಯಾಸಿನೋ ಆಡುತ್ತಿರುವ ಫೋಟೋ ನೋಡಿದ್ದೇನೆ. ದೊಡ್ಡವರು ಆಡಿದ್ದಾರೋ, ಚಿಕ್ಕವರು ಆಡಿದ್ದಾರೋ ಎಂದು ನಾನು ಹೇಳುವುದಿಲ್ಲ. ಹೆಸರು ಹೇಳಿದರೆ ಪತ್ರಿಕೆಯವರು ಅದನ್ನೇ ಬರೆಯುತ್ತಾರೆ ಎಂದು ತಿಳಿಸಿದ್ದಾರೆ.

“ನಾವು ಶಾಶ್ವತವಲ್ಲ. ನಮ್ಮ ಕೆಲಸಗಳು ಮಾತ್ರ ಶಾಶ್ವತ. ಕೆಂಪೇಗೌಡರನ್ನು ನಾವು ನೆನೆಯುವುದು ಶಾಶ್ವತ. ಬಾಲಕೃಷ್ಣ ಅವರು ಚಕ್ರಬಾವಿಯಲ್ಲಿ ಒಂದು ಶಾಲೆ ಬೇಕು ಎಂದು ಕೇಳಿದರು. ನಾನು ಚಿಕ್ಕವನಾಗಿದ್ದಾಗ ಚಕ್ರಬಾವಿಗೆ ಬರುತ್ತಿದ್ದೆ. ಈ ಮನವಿ ಬಗ್ಗೆ ನಾನು, ಸುರೇಶ್ ಅವರೆಲ್ಲಾ ಸೇರಿ ಚರ್ಚೆ ಮಾಡಿ ಸಾಕ್ಷಿಗುಡ್ಡೆ ಬಿಟ್ಟು ಹೋಗುತ್ತೇವೆ. ನಾನು ಇಂಧನ ಸಚಿವನಾಗಿದ್ದಾಗ ಎಷ್ಟು ಸ್ಟೇಷನ್ ಮಾಡಿದ್ದೇನೆ, ಹೆಚ್ ವಿಡಿಎಶ್ ಯೋಜನೆಯಲ್ಲಿ ನಾನು ಕೊಟ್ಟಿರುವ ಟ್ರಾನ್ಸ್ಫಾರ್ಮರ್ ಗಳು, ಈ ಕೆರೆ ತುಂಬಿಸುವ ಯೋಜನೆ ಸೇರಿದಂತೆ ಮಾಗಡಿ ಕ್ಷೇತ್ರದ ನೀರಾವರಿ ಯೋಜನೆಗೆ 1 ಸಾವಿರ ಕೋಟಿ ಅನುದಾನ ನೀಡಿದ್ದೇನೆ. ಕುಣಿಗಲ್ ಕ್ಷೇತ್ರದ ನೀರಾವರಿ ಯೋಜನೆಗಳಿಗೆ 1 ಸಾವಿರ ಕೋಟಿ, ರಾಮನಗರ ಹಾಗೂ ಕನಕಪುರ ಕ್ಷೇತ್ರಗಳಿಗೆ 1 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಈ ಬಗ್ಗೆ ಬಿಜೆಪಿಯವರು ಉತ್ತರ ನೀಡಬೇಕು. ನಿಮ್ಮ ಕಾಲದಲ್ಲಿ ನೀವು ಏನು ಮಾಡಿದ್ದೀರಿ ಎಂದು ಹೇಳಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಡಿಕೆ ಶಿವಕುಮಾರ್‌ ತಮ್ಮ ಕಾರ್ಯಗಳನ್ನು ಸ್ಮರಿಸಿದ್ದಾರೆ.

ದೇವರು ಬಾಲಕೃಷ್ಣ ಅವರಿಗೆ ಇನ್ನಷ್ಟು ಶಕ್ತಿ ನೀಡುವ ವಿಶ್ವಾಸವಿದೆ

“ಮನುಷ್ಯ ಸತ್ತಾಗ ಭೂಮಿಯೊಳಗೆ ಹೂತು ಬಿಡುತ್ತೇವೆ, ಆದರೆ ಅವರು ಮಾಡಿರುವ ಕೆಲಸಗಳು ಭೂಮಿಯ ಮೇಲೆ ಬದುಕಿರುತ್ತವೆ. ಇಂತಹ ನೀರಾವರಿ ಯೋಜನೆಗಳು ಸಾಕ್ಷಿಯಾಗಿ ಉಳಿದಿವೆ. ನಿಮಗೆ ಉತ್ತಮ ಜೀವನ ನೀಡಬೇಕು, ರೈತರನ್ನು ಕಾಪಾಡಬೇಕು. ತಾವರೆಕೆರೆ, ಕುಣಿಗಲ್‌ನಿಂದ ಇಲ್ಲಿಯವರೆಗೂ ಅತ್ಯುತ್ತಮ ರಸ್ತೆಗಳು ನಿರ್ಮಾಣ ಮಾಡಲಾಗಿದೆ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ಅದೇರೀತಿ ನೀವು ಆಯ್ಕೆ ಮಾಡಿರುವ ಬಾಲಕೃಷ್ಣ ಅವರು ನಿಮಗೆ ಇಷ್ಟೆಲ್ಲಾ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನಷ್ಟು ಶಕ್ತಿ ತುಂಬಬೇಕು ಎಂದು ಮನವಿ ಮಾಡಿದ್ದಾರೆ.

ನಾನು, ರಂಗನಾಥ್, ಸುರೇಶ್ ಇಲ್ಲಿಗೆ ಬಂದಿರುವುದೇ ಬಾಲಕೃಷ್ಣ ಅವರ ಕೈಬಲಪಡಿಸಲು. ಅವರು ಉತ್ತಮ ಕಾರ್ಯ ಮಾಡುತ್ತಿದ್ದು, ಅವರಿಗೆ ದೇವರು ಇನ್ನಷ್ಟು ಶಕ್ತಿ ಕೊಡುತ್ತಾನೆ ಎಂಬ ವಿಶ್ವಾಸ ನನಗಿದೆ. ಮುಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿ ಇರುತ್ತದೆ. 18-20 ತಿಂಗಳಲ್ಲಿ ಈ ಯೋಜನೆ ಮಾಡಲು ಸೂಚಿಸಲಾಗಿದೆ. ಈ ಅಧಿಕಾರ ನಂದಲ್ಲ, ನಿಮ್ಮದು. ನೀವೆಲ್ಲರೂ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಬಾಲಕೃಷ್ಣ. ನಿಮ್ಮ ಹಿಂದೆ ನಾವು, ನಮ್ಮ ಹಿಂದೆ ನೀವು ಇರಬೇಕು. ಮುಂಖ್ಯಮಂತ್ರಿ ವಿಚಾರವಾಗಿ ಈಗ ಮಾತನಾಡುವುದಿಲ್ಲ, ಮಾತನಾಡಿದರೇ, ಅದನ್ನೇ ಬರೆಯುತ್ತಾರೆ. ಅದಕ್ಕೆ ಕಾಲ ಉತ್ತರ ನೀಡುತ್ತದೆ. ಸಧ್ಯದಲ್ಲೇ ಭೇಟಿಯಾಗಿ ನಿಮಗೆ ತಿಳಿಸುತ್ತೇನೆ ಎಂದು ಡಿಕೆ ಶಿವಕುಮಾರ್‌ ತವರು ಜಿಲ್ಲೆಯಲ್ಲಿ ವಿರೋಧಿಗಳ ವಿರುದ್ಧ ಮಾತಿನ ಬಾಣಗಳನ್ನು ಬಿಟ್ಟಿದ್ದಾರೆ.

Tags: Bidadi Town Shipbjp karnatakaCM Siddaramaiahcongress karnatakaDevelopmet ProjectsDK Shivakumardk sureshE khataH C BalakrishnaH D DevegowdaHD Kumaraswamyirrigation department.JDS KarnatakaKarnataka GovernmentKaveri WaterMagadi MLAMagadi TalukaPower DepartmentPratidhvaniR AshokTransformerY G Hill Water Project
Previous Post

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

Next Post

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada