• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಸರ್ಕಾರದ ನಿರ್ಧಾರಕ್ಕೆ ಸಂತೋಷಪಡಿ, ನಮ್ಮ ಪರಿಸ್ಥಿತಿಯನ್ನು ನೌಕಕರು ಕೂಡ ಅರ್ಥಮಾಡಿಕೊಳ್ಳಿ”

ನಾವು ಕಷ್ಟದಲ್ಲಿ ದುಡಿಯುವ ವರ್ಗದ ಜನರು. ನಮ್ಮ ದುಡಿಮೆಗೆ ತಕ್ಕ ಪ್ರತಿಫಲವನ್ನು ಕೇಳುತ್ತಿದ್ದೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ ಎಂದ ಸಾರಿಗೆ ಮುಖಂಡರು....

ಪ್ರತಿಧ್ವನಿ by ಪ್ರತಿಧ್ವನಿ
February 19, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ಸರ್ಕಾರದ ನಿರ್ಧಾರಕ್ಕೆ ಸಂತೋಷಪಡಿ, ನಮ್ಮ ಪರಿಸ್ಥಿತಿಯನ್ನು ನೌಕಕರು ಕೂಡ ಅರ್ಥಮಾಡಿಕೊಳ್ಳಿ”
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರದಲ್ಲಿ ತೊಡಗಿದ್ದಾರೆ. ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ನೌಕರರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿ ಸರ್ಕಾರದ ನಡೆಯನ್ನು ಖಂಡಿಸುತ್ತಿದ್ದಾರೆ.

ADVERTISEMENT
KSRTC Strike : ಶಕ್ತಿ ಯೋಜನೆ ಸಕ್ಸಸ್ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸ್ರು ತಂದವ್ರೇ ನಾವು... #pratidhvani

ಈ ನಡುವೆಯೇ ಹೋರಾಟದ ತೀವ್ರತೆ ಅರಿತ ಸರ್ಕಾರ ಕಳೆದ ರಾತ್ರಿಯಷ್ಟೇ ನೌಕರರ 26 ತಿಂಗಳ ಹಿಂಬಾಕಿ ವೇತನವನ್ನು ಬಿಡುಗಡೆ ಮಾಡುವ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೆ 2024 ಸಾರಿಗೆ ಸಿಬ್ಬಂದಿಗೆ 26 ತಿಂಗಳ ಹಿಂಬಾಕಿ ನೀಡಲು ಸರ್ಕಾರದ ನಿರ್ಧಾರವಾಗಿದ್ದು, ವೇತನ ಪರಿಷ್ಕರಣೆ ವಿಚಾರದಲ್ಲಿ 2025ರ ಮಾರ್ಚ್ 1 ರಿಂದ ವೇತನ ಹೆಚ್ಚಳಕ್ಕೆ ತೀರ್ಮಾನ ಮಾಡಿದೆ. ಇದಕ್ಕಾಗಿ 1271.92 ಕೋಟಿ ರೂಪಾಯಿ ಬಿಡುಗಡೆಗೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ಇದನ್ನೂ ಓದಿ : ಆಸ್ಟ್ರೇಲಿಯಾ ಟೂರ್‌ಗೆ ಹೋದ ಕಾಂಗ್ರೆಸ್ ಶಾಸಕರು ಯಾರ್ಯಾರು? ರದ್ದು ಮಾಡಿದವರು ಯಾರು?

ಆದರೆ ಸರ್ಕಾರದ ಈ ತೀರ್ಮಾನಕ್ಕೆ ಸಾರಿಗೆ ನೌಕರರು ಒಪ್ಪುತ್ತಿಲ್ಲ, ಇದೊಂದು ಏಕಮುಖದ ತೀರ್ಮಾನವಾಗಿದೆ. ನಮಗೆ ಬರಬೇಕಾದ ಹಿಂಬಾಕಿ ವೇತನ ಎಲ್ಲವೂ ನೀಡಲಿ, ವೇತನ ಪರಿಷ್ಕರಣೆ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೆ ನಾವು ಮುಷ್ಕರದಿಂದ ಹಿಂದೆ ಸರಿಯಲ್ಲ ಎಂದು ಸಾರಿಗೆ ಮುಖಂಡರು ತಿಳಿಸಿದ್ದಾರೆ. ನಾವು ಕಷ್ಟದಲ್ಲಿ ದುಡಿಯುವ ವರ್ಗದ ಜನರು. ನಮ್ಮ ದುಡಿಮೆಗೆ ತಕ್ಕ ಪ್ರತಿಫಲವನ್ನು ಕೇಳುತ್ತಿದ್ದೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಆಗುವ ಪ್ರಶ್ನೆಯಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ನಾಯಕರು ಹೇಳಿದ್ದಾರೆ.

ಇನ್ನೂ ಇದೇ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿ, ನೌಕರರು ಈ ಸರ್ಕಾರದ ನಿರ್ಧಾರಕ್ಕೆ ಸಂತೋಷ ಪಡಬೇಕು. 26 ತಿಂಗಳ ಹಿಂಬಾಕಿ ನೀಡಲು ನಿರ್ಧರಿಸಲಾಗಿದೆ. ಸರ್ಕಾರದ ಪರಿಸ್ಥಿತಿಯನ್ನು ನೌಕಕರು ಕೂಡ ಅರ್ಥಮಾಡಿಕೊಳ್ಳಬೇಕು. 38 ತಿಂಗಳು ಕೇಳಿದ್ದರು, 26 ತಿಂಗಳು ಕೊಟ್ಟಿದ್ದೇವೆ. ಸದ್ಯ ಅಷ್ಟು ಕೊಟ್ಟಿದ್ದಾರಲ್ಲ ಎಂದು ಸಂತೋಷಪಡಬೇಕು. ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ. ದಯವಿಟ್ಟು ಸಾರಿಗೆ ನೌಕರರೆಲ್ಲ ಸಹಕಾರ ಮಾಡಬೇಕು ಎಂದು ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ.

ಆದರೆ ಸರ್ಕಾರದ ಮನವಿಗೆ ಬಗ್ಗದ ಸಾರಿಗೆ ಮುಖಂಡರು ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದ್ದು, ಇಂದು ಸಂಜೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಮುಂದಿನ ಹೋರಾಟ ಹಾಗೂ ರಾಜ್ಯಾದ್ಯಂತ ಬಸ್‌ ಬಂದ್‌ನ ಭವಿಷ್ಯ ನಿರ್ಧಾರವಾಗಲಿದೆ.

Tags: bjp karnatakaBMTCbus bandhBus protestBust strikeCM SiddaramaiahConductorscongress karnatakaDK ShivakumardriversKarnatak GovernmentKKRRTCKSRTCNWKRTCPratidhvaniRamalinga ReddyTransport departmentTransport Ministertransport unions
Previous Post

ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಧರ್ಮ ಯಾವುದು?

Next Post

Bill Gates: ಎಐ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ​ಭಾಷಣ ದಿಢೀರ್‌ ರದ್ದು, ಕಾರಣವೇನು?

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
Bill Gates: ಎಐ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ​ಭಾಷಣ ದಿಢೀರ್‌ ರದ್ದು, ಕಾರಣವೇನು?

Bill Gates: ಎಐ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ​ಭಾಷಣ ದಿಢೀರ್‌ ರದ್ದು, ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada