ಹುಬ್ಬಳ್ಳಿ : ಬಿಜೆಪಿಯಿಂದ ಕಾಂಗ್ರೆಸ್ಗೆ ಹಾರಿದ ಬಳಿಕ ಚುನಾವಣೆಯಲ್ಲಿ ಸೋತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜೊತೆಯಲ್ಲಿ ಹುಬ್ಬಳ್ಳಿಯಲ್ಲಿಂದು ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಡಿಕೆಶಿ ಜೊತೆಗಿನ ಮೀಟಿಂಗ್ ಬಳಿಕ ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮುಂದಿನ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ ಎಂದಿದ್ದಾರೆ
.
ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದೇವೆ. ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣಾ ತಯಾರಿ ಬಗ್ಗೆ ಮಾತನಾಡಿದ್ದೇವೆ. ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಸಿಲ್ಲ ಎಂದಿದ್ದಾರೆ.