ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಬಿಜೆಪಿ ಸಂಸದರುಗಳು ಈ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ಧ್ವನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ. ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಸರ್ಕಾರಕ್ಕೆ ಏಕೆ ಭಯ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ. ಸಂಸತ್ ಅಧಿವೇಶನದಲ್ಲಿ ಈ ವಿಚಾರವನ್ನ ಕೇಂದ್ರ ಸರ್ಕಾರ ಚರ್ಚೆ ಮಾಡಬೇಕು. ಈ ವಿಚಾರ ಚರ್ಚೆ ನಡೆಸಲು ಇವತ್ತಿನ ತನಕ ಅವಕಾಶ ನೀಡುತ್ತಿಲ್ಲ. ಆದ ಕಾರಣಕ್ಕೆ ಇಂಡಿಯಾ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ
ಹೋಟೆಲ್ ಹಾಗೂ ಇತರೇ ಉದ್ದಿಮೆಗಳು ಇದರಿಂದ ತೊಂದರೆಗೆ ಒಳಗಾಗಿವೆ. ಇದರ ಬಗ್ಗೆ ನಾವು ಧ್ವನಿ ಎತ್ತಬೇಕಿರುವುದು ನಮ್ಮ ಕರ್ತವ್ಯ. ಕೋಟ್ಯಂತರ ಮಹಿಳೆಯರ ಮೇಲೆ ಇದು ಪರಿಣಾಮ ಬೀರಿದೆ. ಯುದ್ದದ ಪರಿಣಾಮವಾಗಿ ಸೌದಿ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಭಾರತೀಯ ಉದ್ಯಮಿಗಳು, ಕೆಲಸಗಾರರ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಇತಿಹಾಸ ನೋಡಿ ನಮ್ಮನ್ನು ಸೋಲಿಸಿದ್ದು ಮುಸ್ಲಿಂ ಕ್ರಿಶ್ಚಿಯನ್ನರಲ್ಲ, ಹಿಂದೂಗಳು ಸೋಲಿಸಿದ್ದು-ಅನಂತಕುಮಾರ್ ಹೆಗಡೆ
ಈ ವಯಸ್ಸಿನಲ್ಲಿ ಅವರ ಮನಸ್ಸು ನೋಯಿಸುವುದು ಬೇಡ..
ದೇವೇಗೌಡರು ಮೇಕೆದಾಟು, ಎತ್ತಿನಹೊಳೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಮಾತನಾಡುವಂತೆ ಹೇಳಲಿ. ಈ ವಯಸ್ಸಿನಲ್ಲಿ ಅವರ ಮೇಲೆ ವಾಗ್ದಾಳಿ ಮಾಡುವುದು ಸರಿಯಲ್ಲ. ನನಗೆ ಇಷ್ಟವೂ ಇಲ್ಲ. ಅವರ ಮನಸ್ಸು ನೋಯಿಸುವುದು ಬೇಡ ಎಂದುಕೊಂಡಿರುವೆ. ಅವರೇ ಇವುಗಳಿಗೆ ಪರಿಹಾರ ಸೂಚಿಸಲಿ. ಅದೇ ರೀತಿ ಅವರ ಪಕ್ಷದ ಸದಸ್ಯರುಗಳಿಗೆ ವಿಧಾನಸಭೆಯಲ್ಲಿ ಮಾತನಾಡಲು ಹೇಳಲಿ. ಆಗ ನಾನು ನಮ್ಮ ಕಾಲದಲ್ಲಿ ಏನೇನು ಆಗಿದೆ ಎಂದು ಹೇಳುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ್ದಕ್ಕೆ ಶಾಸಕರಿಗೆ ಹಾಗೂ ಬೆಂಗಳೂರಿನಲ್ಲಿರುವ ಎಐಸಿಸಿ ಕಾರ್ಯದರ್ಶಿಗಳಿಗೆ, ಸಂಸದರಿಗೆ ಔತಣಕೂಟ ಏರ್ಪಡಿಸಲಾಗಿದೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡ ದಿನದಿಂದ ಇಲ್ಲಿಯವರೆಗಿನ ಪ್ರಯಾಣವನ್ನ ಪ್ರತ್ಯೇಕ ಮಾಧ್ಯಮಗೋಷ್ಠಿ ನಡೆಸಿ ವಿವರಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.






