• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in Top Story, ಕರ್ನಾಟಕ, ರಾಜಕೀಯ
0
ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ADVERTISEMENT

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ, ಬೆಳಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ ಎಂದರು.

Satish Jarkiholiಜೊತೆ 2 ನೇ ಬಾರಿ ಮೀಟ್‌.. ಅಸಲಿ ವಿಚಾರ ಬಿಚ್ಚಿಟ್ಟ Siddaramaiah #pratidhvani

ಈಗ ನಾನು ಹಾಗೂ ಎಂ.ಬಿ. ಪಾಟೀಲ್ ಅವರು ಸುಮಾರು ಒಂದು ಗಂಟೆ ಕಾಲ ಮಾತಾಡಿದ್ದೇವೆ. ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಹೇಗೆ ಆಕರ್ಷಿಸಬೇಕು. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಹೇಗೆ ನಮಗೆ ಸ್ಪರ್ಧೆ ನೀಡುತ್ತಿದೆ. ತೆಲಂಗಾಣದಲ್ಲಿ ಸದ್ಯದಲ್ಲೇ ಜಾಗತಿಕ ಸಮಾವೇಶ ನಡೆಯಲಿದ್ದು, ಜಾಗತಿಕ ಮಟ್ಟದಲ್ಲಿ ನಾವು ಹೇಗೆ ಸ್ಪರ್ಧೆ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಈ ರೀತಿ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು.

ಕೆಕೆಆರ್ ಡಿಬಿ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ಉದ್ಯಮ ಮಾಡುವವರನ್ನು ಗೌರವಿಸಬೇಕು, ಅವರ ವ್ಯವಹಾರ, ಅಧಿಕಾರಿಗಳ ಭೇಟಿಗೆ ಅನುಕೂಲ, ಅವರ ಕಡತಗಳ ತ್ವರಿತ ವಿಲೇವಾರಿ ಉದ್ದೇಶಕ್ಕೆ ರಾಜ್ಯ ಸರ್ಕಾರವು ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಕೆಕೆಆರ್ ಡಿಬಿ ನೂತನ ಕಚೇರಿ ನಿರ್ಮಿಸಿದೆ. ಇಷ್ಟು ದಿನ ಬಾಡಿಗೆ ಕಟ್ಟಡದಲ್ಲಿ ಇದ್ದರು, ಈಗ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಈ ಕಚೇರಿಯಿಂದ ವಿಧಾನಸೌಧಕ್ಕೆ, ಬಸ್ ಹಾಗೂ ರೈಲ್ವೇ ನಿಲ್ದಾಣಕ್ಕೆ ಸಮೀಪವಾಗಿದ್ದು, ಇಲ್ಲಿ ಕಚೇರಿ ನಿರ್ಮಿಸಲಾಗಿದೆ ಎಂದು ತಿಳಿಸಿದರು.

CM Siddaramaiah : ಬಹಿರಂಗ ಹೇಳಿಕೆಗೆ ಬ್ರೇಕ್, ಗೊಂದಲ ಬಗೆಹರಿಸಿ ಎಂದ ಸಿಎಂ #pratidhvani

63% ಭ್ರಷ್ಟಾಚಾರ ರಾಜ್ಯದಲ್ಲಿದೆ ಎಂಬ ಉಪಲೋಕಾಯುಕ್ತ ಅವರ ವರದಿ ಬಗ್ಗೆ ಆರ್.ಅಶೋಕ್ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಪಾಪ, ಆರ್.ಅಶೋಕ್ ಅವರಿಗೆ ಅದು ಯಾರ ಕಾಲದ ವರದಿ ಎಂದು ಗೊತ್ತಿಲ್ಲ. ಅವರು ಮೊದಲು ಈ ವರದಿ ಯಾರ ಕಾಲದ್ದು ಎಂದು ಓದಿಕೊಳ್ಳಲಿ. ಅವರು ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲಿ, ಅಲ್ಲಿಯೇ ಉತ್ತರ ನೀಡುತ್ತೇವೆ ಎಂದು ತಿರುಗೇಟು ನೀಡಿದರು

Tags: BJPcongressdcm dk shivkumarKarnatakaPoliticsSathish Jarakiholi
Previous Post

ಪ್ರತಿಷ್ಠಿತ ಇಂಡಿಗೋ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಉಂಟಾಗಲು ಕಾರಣವೇನು..?

Next Post

ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada