• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿಗೆ ಶುಭ ತರುತ್ತಾ ಸಂಕ್ರಾಂತಿ..? : ಯಾವ ಸಂದೇಶ ಹೊತ್ತು ದಿಲ್ಲಿಯಿಂದ ರಿಟರ್ನ್‌ ಆಗ್ತಾರೆ DCM..?

ಪ್ರತಿಧ್ವನಿ by ಪ್ರತಿಧ್ವನಿ
January 16, 2026
in Top Story, ಕರ್ನಾಟಕ, ರಾಜಕೀಯ
0
ಡಿಕೆಶಿಗೆ ಶುಭ ತರುತ್ತಾ ಸಂಕ್ರಾಂತಿ..? : ಯಾವ ಸಂದೇಶ ಹೊತ್ತು ದಿಲ್ಲಿಯಿಂದ ರಿಟರ್ನ್‌ ಆಗ್ತಾರೆ DCM..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌(DCM DK Shivakumar) ದೆಹಲಿಗೆ ಹಾರಿದ್ದಾರೆ. ಸಂಕ್ರಾಂತಿಯ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನಕಾರಿ ಬೆಳವಣಿಗೆಗಳು ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು(Rahul Gandhi) ಭೇಟಿಯಾಗಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಪ್ರತ್ಯೇಕವಾಗಿ ಚರ್ಚಿಸಿದ್ದರು.

ADVERTISEMENT
DK Shivakumar : ದೆಹಲಿಯಲ್ಲಿ ಡಿಕೆಶಿ ಸಂಚಲನಕಾರಿ ಹೇಳಿಕೆ..! #siddaramaiah #dkshivakumar #pratidhvani

 

ಸಿದ್ದರಾಮಯ್ಯ ಜೊತೆಯಲ್ಲಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ, ಡಿಕೆ ಶಿವಕುಮಾರ್‌ ಅವರನ್ನು ಸ್ವಲ್ಪ ದೂರ ಕರೆದುಕೊಂಡು ರಹಸ್ಯ ಮಾತುಕತೆ ನಡೆಸಿದ್ದರು. ಈ ವೇಳೆ ನೀವು ಯಾವುದಕ್ಕೂ ಚಿಂತೆ ಪಡುವ ಅವಶ್ಯಕತೆಯಿಲ್ಲ. ನಾನು ನಿಮ್ಮನ್ನು ಶೀಘ್ರದಲ್ಲೇ ದೆಹಲಿಗೆ ಬರುವಂತೆ ತಿಳಿಸುತೇನೆ ಎಂದು ರಾಹುಲ್ ಗಾಂಧಿ ಡಿಸಿಎಂಗೆ ಅಭಯ ನೀಡಿದ್ದರು.

ಹೀಗಾಗಿಯೇ ರಾಹುಲ್‌ ಗಾಂಧಿ ಬುಲಾವ್‌ ಮೇರೆಗೆ ಡಿಕೆ ಶಿವಕುಮಾರ್‌ ದೆಹಲಿಗೆ ತೆರಳಿರುವುದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಅದರಲ್ಲೂ ಡಿಕೆಶಿ ಬಣದಲ್ಲಿ ಆಶಾಭಾವ ಮೂಡಲು ಕಾರಣವಾಗಿದೆ. ಡಿಕೆ ಶಿವಕುಮಾರ್‌ ಅವರನ್ನು ಅಸ್ಸಾಂ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ಚುನಾವಣಾ ವೀಕ್ಷಕರಾಗಿ ಕಾಂಗ್ರೆಸ್‌ ನೇಮಕ ಮಾಡಿದೆ. ಈ ಮೂಲಕ ಡಿಕೆಶಿ ಸಂಘಟನಾ ಚತುರತೆ ಹಾಗೂ ರಾಜಕಾರಣದ ಅನುಭವವನ್ನು ಬಳಸಿಕೊಳ್ಳುವ ಪ್ಲ್ಯಾನ್‌ ರೂಪಿಸಿದೆ.

Congress Leader Rajeev Gowda Escape | ರಾಜೀವ್‌ ಬಂಧನಕ್ಕೆ ವಿಶೇಷ ತಂಡ ರಚನೆ, #pratidhvani

ಚುನಾವಣಾ ವೀಕ್ಷಕರ ಜೊತೆ ರಾಹುಲ್‌ ಗಾಂಧಿ ಸಭೆಯ ನೆಪದಲ್ಲಿ ದೆಹಲಿಯಲ್ಲಿ ಡಿಕೆ ಶಿವಕುಮಾರ್‌ ಹೈಕಮಾಂಡ್‌ ನಾಯಕರಿಗೆ ಸ್ಪಷ್ಟ ಸಂದೇಶ ನೀಡುತ್ತಾರಾ ಎಂಬ ಪ್ರಶ್ನೆ ಮೂಡುತ್ತಿದೆ.

ಇದನ್ನೂ ಓದಿ: BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

ಈಗಾಗಲೇ ಹಲವು ದಿನಗಳಿಂದಲೂ ಸಿಎಂ ಕನಸು ಹೊತ್ತಿರುವ ಡಿಕೆ ಶಿವಕುಮಾರ್‌ ಸಂಕ್ರಾಂತಿಯ ಬಳಿಕ ಶುಭ ಸುದ್ದಿಯ ನಿರೀಕ್ಷೆಯಲ್ಲಿದ್ದಾರೆ. ಆದರೆ ಇತ್ತ ಕಡೆ ಸಿಎಂ ಸಿದ್ದರಾಮಯ್ಯ ಅವರನ್ನು ಮುಂದಿನ ಹಂತಗಳಲ್ಲಿ ದೆಹಲಿಗೆ ಬರುವಂತೆ ಸೂಚಿಸಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚಿಸುವ ಸಾಧ್ಯತೆಗಳಿವೆ. ಬಜೆಟ್‌ ಬಳಿಕ ಈ ನಾಯಕತ್ವದ ಗೊಂದಲಕ್ಕೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.

ಇನ್ನೂ ತಮ್ಮ ದೆಹಲಿ ಭೇಟಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್‌, ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ಈ ಸಭೆಯ ಯೋಜನೆಗಳನ್ನು ಹಾಗೂ ನಮ್ಮ ಪಕ್ಷದ ಪ್ಲ್ಯಾನ್‌ಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚಿಸಲಾಗುವುದೇ ಹೊರತು ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳಿದ್ದಾರೆ ಅವರು ನೀಡುತ್ತಾರೆ. ಆದರೆ ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ ಕಾದು ನೋಡಿ ಎನ್ನುವ ಮೂಲಕ ಡಿಕೆಶಿ ತಮ್ಮ ಮುಂದಿನ ನಡೆಯ ಬಗ್ಗೆ ಸಂಚಲನ ಸೃಷ್ಟಿಸಿದ್ದಾರೆ.

CM Siddaramaiah : ಸಿದ್ದರಾಮಯ್ಯ ಚುನಾವಣಾ ಇತಿಹಾಸ ಎಷ್ಟಿದೆ ನೋಡಿ..! | Devaraj urs | Congress |

ಈಗಾಗಲೇ ಸಂಕ್ರಾಂತಿಯು ಮುಗಿದಿದ್ದು, ಇನ್ನು ಮುಂದೆ ಹಂತ ಹಂತವಾಗಿ ರಾಜ್ಯ ರಾಜಕಾರಣದಲ್ಲಿ ಬೆಳವಣಿಗೆಗಳು ಇನ್ನಷ್ಟು ವೇಗ ಪಡೆಯಲಿವೆ. ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ದಾಖಲೆ ಮುರಿದಿರುವ ಸಂತಸದಲ್ಲಿದ್ದಾರೆ. ದೀರ್ಘಕಾಲ ಆಡಳಿತ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ದಾಖಲೆಯ 17 ನೇ ಬಜೆಟ್‌ ಮಂಡನೆಗೂ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಡಿಕೆ ಶಿವಕುಮಾರ್‌ ವಿಚಾರದಲ್ಲಿ ರಾಹುಲ್‌ ಗಾಂಧಿ ಯಾವ ನಿಲುವನ್ನು ತಾಳುತ್ತಾರೆ ಎನ್ನುವುದು ಕಾಂಗ್ರೆಸ್‌ ಪಾಳಯದಲ್ಲಿನ ಚರ್ಚೆಯಾಗಿದೆ. ದೆಹಲಿಯಿಂದ ಕನಕಪುರದ ಜನತೆಗೆ ಹಾಗೂ ಅಭಿಮಾನಿಗಳಿಗೆ ಡಿಕೆ ಶಿವಕುಮಾರ್‌ ಯಾವ ಸಂದೇಶ ಹೊತ್ತು ಮರಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

Tags: BJPCM SiddaramaiahcongressDCM DK ShivakumarKarnataka PoliticsPoliticsRahul Gandhi
Previous Post

BBK 12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

Next Post

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada