• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿಗೆ ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ Tamil Nadu ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.DK shivakumar ಶಿವಕುಮಾರ್​ ವಿನಂತಿಸಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ಕರೆದಿರುವ ಬಗ್ಗೆ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ನಾವು ಸರ್ವಪಕ್ಷ ಸಭೆ ಮಾಡಿದಂತೆ, ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ.ಅದು ಅವರ ಹಕ್ಕು. ಅವರ ಸಭೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನಿಮಗೂ ಹೆಚ್ಚು ಅನುಕೂಲ ಆಗುವ ಮೇಕೆದಾಟು ಯೋಜನೆಗೆ ಸಹಕಾರ ನೀಡಲಿ ಎಂದಿದ್ದಾರೆ.ರಾಜ್ಯದಲ್ಲಿ ಸೋಮವಾರದಿಂದ ಹೆಚ್ಚು ಮಳೆ ಬೀಳುತ್ತಿದ್ದು, ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಮಳೆಯೇ ನಮಗೆ ಆಧಾರವಾಗಿದೆ. ನಾನು ತಮಿಳುನಾಡಿನ ಬಳಿ ಮನವಿ ಮಾಡಿಕೊಳ್ಳುತ್ತೇನೆ. ನಿಮ್ಮ ಹಿತಾಸಕ್ತಿ ಕಾಪಾಡುವುದಕ್ಕಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡಿ.

ADVERTISEMENT

ಕುಮಾರಸ್ವಾಮಿ ತಮ್ಮ ಪಕ್ಷದವರನ್ನು ಗೋಡಂಬಿ, ದ್ರಾಕ್ಷಿ ತಿನ್ನಲು ಕಳಿಸಿದ್ದರಾ? :ಸರ್ವಪಕ್ಷ ಸಭೆ ಕುರಿತು ಕೇಂದ್ರ ಸಚಿವ ಎಚ್​ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಸಿನಿಮಾ ಶೈಲಿಯಲ್ಲಿ ಮಾತನಾಡುತ್ತಿದ್ದಾರೆ. ಗೋಡಂಬಿ, ದ್ರಾಕ್ಷಿ ತಿನ್ನಲು ನಾವು ಕರೆದಿದ್ದೇವಾ ಹಾಗಿದ್ದರೆ, ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರನ್ನು ಸರ್ವಪಕ್ಷ ಸಭೆಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಕಳುಹಿಸಿದ್ದರೆ. ಕುಮಾರಸ್ವಾಮಿಗೆ ರಾಜಕಾರಣ, ಟೀಕೆ, ಆರೋಪ, ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ಕಾವೇರಿ ನೀರು, ನಮ್ಮ ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಅಸೂಯೆ ಬಿಟ್ಟರೆ ಬೇರೇನೂ ಇಲ್ಲ. ಮೊದಲಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಎಲ್ಲಾ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡೋಣ ಬಾ ಎಂದು ಕರೆಯುತ್ತಿದ್ದೇನೆ. ಕಳೆದ ಬಾರಿ ಸದನದಲ್ಲಿ ಚರ್ಚೆಗೆ ಕರೆದಾಗಲೂ ಬರಲಿಲ್ಲ ಎಂದು ಕಿಡಿಕಾರಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲತಮ್ಮ ವಿರುದ್ಧದ ಸಿಬಿಐ ಪ್ರಕರಣ ರದ್ದು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಈಗಾಗಲೇ ಈ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆಗೆ ನೀಡಲಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿದೆ. ಆದರೂ ಸಿಬಿಐ ತಮ್ಮ ವ್ಯಾಪ್ತಿ ಮೀರಿ ಈ ಪ್ರಕರಣ ತನಿಖೆ ನಡೆಸಲು ಮುಂದಾಗಿರುವುದು ಏಕೆ ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಮುಂದಿನ ಒಂದೆರಡು ದಿನಗಳಲ್ಲಿ ಅವರ ಮುಂದೆ ಹೋಗಿ ನನ್ನ ವಿಚಾರ ತಿಳಿಸುತ್ತೇನೆ. ತನಿಖೆ ಹೆಸರಲ್ಲಿ ನನ್ನ ಜತೆ ವ್ಯವಹಾರ ಮಾಡಿದವರಿಗೆ ಕಿರುಕುಳ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಆರೋಪಿಸಿದ್ದಾರೆ.

Tags: # hdkumaraswamyCM Siddaramaiah‌Congress PartyDCM D.K Shivakumarಬಿಜೆಪಿ
Previous Post

ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ : ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ !

Next Post

ಕನ್ನಡಿಗರ ಸುಧೀರ್ಘ ಕಾಲದ ಬೇಡಿಕೆ ಈಡೇರಿಸಿದ ಶ್ರೇಯ ಪಡೆದ ಸಚಿವ ಸಂತೋಷ್ ಲಾಡ್ ! 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಕನ್ನಡಿಗರ ಸುಧೀರ್ಘ ಕಾಲದ ಬೇಡಿಕೆ ಈಡೇರಿಸಿದ ಶ್ರೇಯ ಪಡೆದ ಸಚಿವ ಸಂತೋಷ್ ಲಾಡ್ ! 

ಕನ್ನಡಿಗರ ಸುಧೀರ್ಘ ಕಾಲದ ಬೇಡಿಕೆ ಈಡೇರಿಸಿದ ಶ್ರೇಯ ಪಡೆದ ಸಚಿವ ಸಂತೋಷ್ ಲಾಡ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada