• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in Top Story, ಕರ್ನಾಟಕ, ರಾಜಕೀಯ
0
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Share on WhatsAppShare on FacebookShare on Telegram

ಬೆಂಗಳೂರು: ಕಿರಣ್ ಹೆಬ್ಬಾರ್ ಎಂಬಾತ ತಾನು ಅಂಪಾರ್ಟ್ಮೆಂಟ್ ಮಾಲೀಕ ಎಂದು ಪತ್ರ ಬರೆದಿದ್ದು, ನಮಗೆ ಬೆದರಿಕೆ ಹಾಕಲು ಮುಂದಾಗಿದ್ದಾನೆ. ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ ಎಂದುಡಿಸಿಎಂ ಡಿ.ಕೆ ಶಿವಕುಮಾರ್‌ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಖಜಾಂಚಿ ಕಿರಣ್ ಹೆಬ್ಬಾರ್‌ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT
Yatnal : ಸದನದಲ್ಲಿ ನೇರವಾಗಿ ವಿಜಯೇಂದ್ರಗೆ ಯತ್ನಾಳ್‌ ಸವಾಲ್‌..! #yatnal #bsyediyurappa #byvijayendra

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಬಹುದೊಡ್ಡ ಮತದಾರರ ಸಮೂಹವಿದ್ದು, ಬೆಂಗಳೂರಿನ 1.30 ಕೋಟಿ ಮತದಾರರ ಮೇಲೆ ಪರಿಣಾಮ ಬೀರಬಲ್ಲೆವು. ಸರ್ಕಾರಗಳು ನಮ್ಮನ್ನು ನಿರ್ಲಕ್ಷಿಸಿದ್ದು, ಆಡಳಿತ ಪಕ್ಷ ನಮ್ಮ ಮನವಿ ನಿರ್ಲಕ್ಷಿಸಿದರೆ ಸದ್ಯದಲ್ಲೇ ಜಿಬಿಎ ಚುನಾವಣೆ ಬರುತ್ತಿದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾನೆ. ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಅವನ್ಯಾರೋ ಹೆಬ್ಬಾರ್ ಎಂಬುವವನಿಗೆ ಹೆದರುತ್ತೇನೆಯೇ? ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ. ಯಾರೇ ಆಗಲಿ ಯಾರ ಜೊತೆ ಮಾತನಾಡುತ್ತಿದ್ದೇವೆ ಎಂಬುದರ ಬಗ್ಗೆ ಕನಿಷ್ಠ ಪರಿಜ್ಞಾನ ಇಟ್ಟುಕೊಳ್ಳಬೇಕು ಎಂದು ಕಿಡಿಕಾರಿದರು.

UT Khader on Yatnal : ಯತ್ನಾಳ್‌ಗೆ ಬುದ್ದಿ ಮಾತು ಹೇಳಿದ ಸ್ಪೀಕರ್‌ ಯು.ಟಿ. ಖಾದರ್‌..! #pratidhvani

ನಾನು ಇರುವುದು ನಿಮಗಾಗಿ. ನಾನು ನಿಮ್ಮನ್ನು ಕರೆದು ಅಭಿಪ್ರಾಯ ಪಡೆಯುವ ಅಗತ್ಯವಿರಲಿಲ್ಲ. ನಾವು ನಿಮ್ಮ ಮೇಲೆ ಪ್ರೀತಿ ವಿಶ್ವಾಸವಿಟ್ಟು ಕರೆದಿದ್ದೇವೆ. ಗಾಂಧೀಜಿ ಒಂದು ಮಾತು ಹೇಳಿದ್ದಾರೆ. ನಿಮ್ಮನ್ನು ನೀವು ನಿಯಂತ್ರಿಸಬೇಕಾದರೆ ನಿಮ್ಮ ಮೆದುಳನ್ನು ಪ್ರಯೋಗಿಸಿ, ಬೇರೆಯವರನ್ನು ನಿಯಂತ್ರಿಸಬೇಕಾದರೆ ನಿಮ್ಮ ಹೃದಯವನ್ನು ಪ್ರಯೋಗಿಸಿ ಎಂದು. ನಾನು ನನ್ನ ಹೃದಯದಿಂದ ಜನರ ಮನಸ್ಸು ಗೆದ್ದಿದ್ದೇನೆ. ನಾನು ಸತತವಾಗಿ 8 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಕಳೆದ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಹೋಗಲಿಲ್ಲ. ವಿರೋಧ ಪಕ್ಷದ ನಾಯಕ ಅಶೋಕ್ ನನ್ನ ವಿರುದ್ಧ ಸ್ಪರ್ಧಿಸಿದ್ದರೂ ಜನ ನನಗೆ 1.23 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಅಂತರದ ಗೆಲುವು ಎಂದು ತಿಳಿಸಿದರು.

ನಿಮ್ಮ ಸೇವೆ ಮಾಡಿದರೆ ನಮಗೆ ಮತ ಹಾಕುತ್ತೀರಿ ಎಂಬುದಷ್ಟೇ ನಮ್ಮ ಆಸೆ. ಅದನ್ನು ಬಿಟ್ಟು ನಿಮ್ಮನ್ನು ಬೇರೆ ಏನು ಕೇಳುತ್ತೇವೆ? ನಾವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಅಪಾರ್ಟ್ ಮೆಂಟ್ ನಿವಾಸಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಿದ್ದೇವೆ. ಈ ಯೋಜನೆ ಜಾರಿ ಅಸಾಧ್ಯ ಎಂದು ಪ್ರಧಾನಮಂತ್ರಿಗಳು ಹೇಳಿದರು. ಆದರೆ ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳೇ ಅವರನ್ನು ಕಾಪಾಡುತ್ತಿದೆ. ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿ, ಮೊದಲು ನೀರಿನ ಸಂಪರ್ಕ ಪಡೆಯಿರಿ, ಒಂದು ವರ್ಷ ತಡವಾಗಿ ಬೇಕಾದರೆ ಹಣ ಪಾವತಿಸಿ ಎಂದು ಕಾಲಾವಕಾಶವನ್ನು ನೀಡಿದ್ದೇವೆ. ಆರನೇ ಹಂತದ ಯೋಜನೆಗೆ ಯೋಜನೆ ರೂಪಿಸಿದ್ದೇವೆ. ಇದನ್ನು ನೀವುಗಳು ಅರಿಯಬೇಕು. ಎಲ್ಲರನ್ನು ಆಟವಾಡಿಸಿದಂತೆ ನಮ್ಮನ್ನು ಆಟವಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

Yatnal : ಉತ್ತರ ಕರ್ನಾಟಕದ ಅಭಿವೃದ್ಧಿ ಕಾಂಗ್ರೆಸ್‌ ಸರ್ಕಾರಕ್ಕೆ ಯತ್ನಾಳ್‌ ಚಾಟಿ..! #uttarakarnataka

ನಾನು ಸಾವಿರಾರು ಅಪಾರ್ಟ್‌ಮೆಂಟ್ ಕಟ್ಟಿದ್ದೇನೆ. ಅಪಾರ್ಟ್‌ಮೆಂಟ್ ಕಟ್ಟೋಕೆ ಜಾಗ ಕೊಟ್ಟಿದ್ದೇನೆ. ನಾವು ಇರುವುದೇ ನಿಮ್ಮ ಸೇವೆ ಮಾಡಲು. ಚುನಾವಣೆಗಳನ್ನು ಹೇಗೆ ನಡೆಸಬೇಕು ಎಂದು ನನಗೆ ಗೊತ್ತಿದೆ. ಪ್ರತಿ ಅಪಾರ್ಟ್‌ಮೆಂಟ್ ನಲ್ಲಿ ಯಾರಿಗೆ ಎಷ್ಟು ಮತ ಬೀಳುತ್ತದೆ ಎಂದೂ ನನಗೆ ಗೊತ್ತಿದೆ. ಆದರೂ ನಾವು ನಿಮ್ಮ ಸೇವೆ ಮಾಡಿ ನಿಮ್ಮ ವಿಶ್ವಾಸ ಗೆಲ್ಲಲು ಬಯಸುತ್ತೇನೆ. ನೀವು ಬಲಿಷ್ಠವಾಗಿದ್ದರೆ, ನಾವು ಬಲಿಷ್ಠ, ನೀವು ದುರ್ಬಲರಾದರೆ, ನಾವು ದುರ್ಬಲ ಎಂದು ಭಾವಿಸಿದ್ದೇನೆ. ನಾನು ನೇರವಾಗಿ, ಕಟುವಾಗಿ ಹಾಗೂ ದಿಟ್ಟವಾಗಿ ಮಾತನಾಡಿದ್ದೇನೆ. ಇದಕ್ಕೆ ಯಾರೂ ಬೇಸರ ಮಾಡಿಕೊಳ್ಳಬೇಡಿ. ಬೆದರಿಸಿದರೆ ನಡೆಯುತ್ತದೆ ಎಂಬ ಭ್ರಮೆ ಬೇಡ ಎಂದರು.

ಬೆಂಗಳೂರು ದೊಡ್ಡದಾಗಿ ಬೆಳೆದಿದೆ

ಬೆಂಗಳೂರು ಬಹಳ ದೊಡ್ಡದಾಗಿ ಬೆಳೆದಿದ್ದು, ಉತ್ತಮ ಆಡಳಿತ ನೀಡಬೇಕು ಎಂಬ ಉದ್ದೇಶದಿಂದ ಜಿಬಿಎ ರಚನೆ ಮಾಡಿದ್ದೇವೆ. ಅನೇಕ ಪರ ವಿರೋಧದ ನಡುವೆ ಇದನ್ನು ಜಾರಿಗೆ ತಂದಿದ್ದೇವೆ. 25 ವರ್ಷಗಳ ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. ನಿತ್ಯ 3 ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ನಗರದಲ್ಲಿ ವಾಹನಗಳ ಸಂಖ್ಯೆ 1.30 ಕೋಟಿ ಇದೆ ಎಂದರು.

Yatnal Vs CM Siddaramaiah :ಸದನದಲ್ಲಿ  ರಾಜೀನಾಮೆ ಸೀಕ್ರೆಟ್‌  ಬಿಚ್ಚಿಟ್ಟ ಯತ್ನಾಳ್! #pratidhvani

ಬೆಂಗಳೂರಿನ ಜನಸಂಖ್ಯೆಯಲ್ಲಿ 19% ಜನ ಅಪಾರ್ಟ್ಮೆಂಟ್ ನಿವಾಸಿಗಳಾಗಿದ್ದಾರೆ. ಇಂದು ಇಡೀ ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು. ಬೆಂಗಳೂರು ಅತ್ಯುತ್ತಮ ಹವಾಮಾನ, ಸಂಸ್ಕೃತಿ ಹೊಂದಿದೆ. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ಹೊಂದಿರುವವರು ಇದ್ದಾರೆ. ಕ್ಯಾಲಿಫೋರ್ನಿಯದಲ್ಲಿ 13 ಲಕ್ಷ ಐಟಿ ವೃತ್ತಿಪರರು ಇದ್ದರೆ ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು ಇದ್ದಾರೆ. ಇದರಲ್ಲಿ ಬಹುತೇಕರು ನಿಮ್ಮ ಅಪಾರ್ಟ್ ಮೆಂಟ್ ನಲ್ಲಿ ಇದ್ದಾರೆ ಎಂದು ಹೇಳಿದರು.

DK Shivakumar : ಅವ್ನ್ಯಾರೋ ಹೆಬ್ಬಾರಗೆ ಹೆದರುತ್ತೀನಾ ನಾನು..? #pratidhvani #dkshivakumar #greaterbengaluru

1972ರಲ್ಲಿ ಅಪಾರ್ಟ್ಮೆಂಟ್ ಕಾಯ್ದೆ ಬಂದ ನಂತರ ಮತ್ತೆ ಯಾವುದೇ ಸರ್ಕಾರಗಳು ಅಪಾರ್ಟ್ಮೆಂಟ್ ಗಳಿಗೆ ಶಕ್ತಿ ತುಂಬಲಿಲ್ಲ. ಬೆಂಗಳೂರು ಪೂರ್ವ ನಿಯೋಜಿತ ನಗರವಲ್ಲ. ಆದರೂ ಭವಿಷ್ಯದ ದೃಷ್ಟಿಯಿಂದ ನಾವು ಉತ್ತಮ ಯೋಜನೆ ರೂಪಿಸಬೇಕು. ಕೆಂಪೇಗೌಡ, ಕೆಂಗಲ್ ಹನುಮಂತಯ್ಯ, ಎಸ್.ಎಂ ಕೃಷ್ಣ ಅವರು ಬೆಂಗಳೂರಿನ ಮೂವರು ಪ್ರಮುಖ ವ್ಯಕ್ತಿಗಳು. ಹೈದರಾಬಾದ್ ನಲ್ಲಿ 30 ಸಾವಿರ ಎಕರೆಯಲ್ಲಿ ಭವಿಷ್ಯದ ನಗರ ನಿರ್ಮಾಣ ಮಾಡುಟ್ಟುದ್ದಾರೆ. ನಮ್ಮಲ್ಲಿ ಬಿಡದಿ, ನಂದಗುಡಿ ಹಾಗೂ ಸೋಲೂರಿನಲ್ಲಿ ನೂತನ ನಗರ ನಿರ್ಮಾಣ ಮಾಡುತ್ತಿದ್ದೇವೆ. ಬೆಂಗಳೂರಿನ ಮೇಲಿರುವ ಒತ್ತಡ ಇಳಿಸಬೇಕು. ನಾವು ಬೆಂಗಳೂರಿಗೆ ಬರುವ ಜನರು ಹಾಗೂ ಜನರ ವಾಹನ ಖರೀದಿ ತಡೆಯಲು ಆಗುವುದಿಲ್ಲ ಎಂದು ಹೇಳಿದರು.

Lakshmi Hebbalkar ತಪ್ಪು ಮಾಹಿತಿ ಕೊಟ್ಟವ್ರೆ ಅಂತ ಸ್ಪೀಕರ್ ವಿರುದ್ಧವೂ ಗುಡುಗಿದ ಅಶೋಕ್, ಸುನೀಲ್‌ #pratidhvani

ನಿಮಗೆ ಸಹಾಯ ಮಾಡಿದರೂ ನಮಗೆ ಬೆಂಬಲ ನೀಡಲಿಲ್ಲ

ಚುನಾವಣೆ ಸಮಯದಲ್ಲಿ 100 ಅಪಾರ್ಟ್ಮೆಂಟ್ ಗಳಿಗೆ ಭೇಟಿ ನೀಡಿ ನಮಗೆ ಬೆಂಬಲ ನೀಡಿ ಎಂದು ಕೇಳಿಕೊಂಡಿದ್ದೆ. ಆಗ ಬೆಂಗಳೂರಿನಲ್ಲಿ ಸುಮಾರು 6 ಸಾವಿರ ಕೊಳವೆ ಬಾವಿ ಬತ್ತಿದ್ದಾಗ ನಾನು ಎಷ್ಟೇ ಕಷ್ಟ ಆದರೂ ನಿಮಗೆ ತೊಂದರೆ ಆಗಬಾರದು ಎಂದು ಸಹಾಯ ಮಾಡಿದ್ದೆ. ಆದರೆ ಚುನಾವಣೆ ಫಲಿತಾಂಶ ಬಂದಾಗ ನೀವು ನಮಗೆ ಬೆಂಬಲ ನೀಡಲಿಲ್ಲ. ನನ್ನ ತಮ್ಮನನ್ನು ಒಂದೇ ಕ್ಷೇತ್ರದಲ್ಲಿ 1 ಲಕ್ಷ ಮತಗಳಿಂದ ಸೋಲಿಸಿದಿರಿ. ನೀವು ನಮಗೆ ಯಾವುದೇ ರೀತಿಯ ಬೆಂಬಲ ನೀಡಲಿಲ್ಲ. ನಾವು ಕಷ್ಟಪಟ್ಟು ಸಹಾಯ ಮಾಡಿದರೂ ನೀವು ನಮಗೆ ಕರುಣೆ ತೋರಲಿಲ್ಲ. ಆಗ ನಾವು ಯಾಕೆ ಸಹಾಯ ಮಾಡಬೇಕು ಎಂದು ಅನಿಸಿದ್ದು ನಿಜ ಎಂದು ಬೇಸರ ವ್ಯಕ್ತಪಡಿಸಿದರು.

DK Shivakumar : ಬೆಂಗಳೂರು ಸಿಟಿಯಲ್ಲಿ 17 ಕಿಲೋ ಮೀಟರ್‌ ಫ್ಲೈಓವರ್‌ ಮಾಡ್ತೀನಿ #pratidhvani #dkshivakumar

ಆದರೂ ಈ ವಿಧೇಯಕದ ವಿಚಾರವಾಗಿ ನಿಮ್ಮ ಅಭಿಪ್ರಾಯ, ಸಲಹೆ ಪಡೆಯಲು ನಿಮ್ಮನ್ನು ಆಹ್ವಾನಿಸಿದ್ದೇನೆ. ಈ ವಿಧೇಯಕ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಇರಬೇಕು. ನಿಮ್ಮ ಧ್ವನಿ, ಶಾಸಕರ ಧ್ವನಿ ಸರ್ಕಾರದ ಧ್ವನಿ ಆಗಬೇಕು. ಇಲ್ಲಿ ಬರುವ ಮುನ್ನ ಅಧಿಕಾರಿಗಳ ಜೊತೆ ಚರ್ಚೆ ಮಾಡಿದೆ. ಆತುರದಲ್ಲಿ ಈ ವಿಧೇಯಕ ರೂಪಿಸುವ ಮುನ್ನ ನಿಮ್ಮೆಲ್ಲರ ಅಭಿಪ್ರಾಯ ತಿಳಿಯಲು ಬಂದಿದ್ದೇನೆ. ನಿಮ್ಮ ಅಭಿಪ್ರಾಯ ಪಡೆದ ಬಳಿಕ ಸದನದಲ್ಲಿ ಶಾಸಕರ ಜೊತೆ ಚರ್ಚೆ ಮಾಡಲಾಗುವುದು. ಬೆಂಗಳೂರಿನಲ್ಲಿ ಐದು ಪಾಲಿಕೆ ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪಾಲಿಕೆಗಳನ್ನು ವಿಸ್ತರಣೆ ಮಾಡಲಾಗುವುದು. ಬೆಂಗಳೂರಿನ ಹೊರ ವಲಯ ಸೇರಿದಂತೆ ಈ ವಿಧೇಯಕ ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ತಿಳಿಸಿದರು.

Tags: Bengaluru Apartment Federationcongressdcm dk shivkumarKarnatakaKarnataka PoliticsWinter session
Previous Post

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

Next Post

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ
ಕರ್ನಾಟಕ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

by ಪ್ರತಿಧ್ವನಿ
December 13, 2025
0

ಮೈಸೂರಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ...

Read moreDetails
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!