ಇಂದಿನಿಂದ ಮೂರು ದಿನಗಳ ಕಾಲ 16ನೇ ಕರ್ನಾಟಕ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ವಿಧಾನಸಭೆ ಅಧಿವೇಶನದ ವೇಳೆ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಇನ್ನೂ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಆಕ್ಷೇಪಗಳು ವ್ಯಕ್ತವಾದವು. ಸದನದಲ್ಲಿ ಗದ್ದಲ ಶುರುವಾಗುತ್ತಿದ್ದಂತೆಯೇ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಇದ್ರ ಮಧ್ಯೆ ವಿಜಯಪುರದ ಶಾಸಕರಾಗಿ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಹಿಂದುತ್ವ ಮತ್ತು ಗೋಮಾತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.