• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

Any Mind by Any Mind
May 30, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ  ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ
Share on WhatsAppShare on FacebookShare on Telegram

ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ. ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು. ನೀರಾವರಿ ಯೋಜನೆಗಳಿಗೆ 5 ವರ್ಷದಲ್ಲಿ 2 ಲಕ್ಷ ಕೋಟಿ ರು ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಸರಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕು. ಕೇಂದ್ರ ಸಚಿವ ಶೇಖಾವತ್ ಉತ್ತಮ ವ್ಯಕ್ತಿ. ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ. ಬಾಕಿ ಯೋಜನೆಗಳಿಗೆ ಭೂಸ್ವಾಧೀನ ತ್ವರಿತಗತಿಯಲ್ಲಿ ಮಾಡಿ.

ADVERTISEMENT

ಗುಣಮಟ್ಟದಲ್ಲಿ ರಾಜಿ ಇಲ್ಲ. ಮೇಕೆದಾಟು ಯೋಜನೆಗೆ ಮೀಸಲಿಟ್ಟ 1000 ಕೋಟಿ ರೂಪಾಯಿ ಅನುದಾನವನ್ನು ಭೂಸ್ವಾಧೀನದಂತಹ ಪೂರ್ವಸಿದ್ಧತೆ ಕೆಲಸಗಳಿಗೆ ಬಹುದಿತ್ತು. ಮಾಡಿಲ್ಲ ಏಕೆ? ಹಾಗಾದರೆ ಹಣ ಇಟ್ಟಿದ್ದಾದರೂ ಏಕೆ? ಬರೀ ಎಲ್ಒಸಿ, ಟೆಂಡರ್, ಗುತ್ತಿಗೆ ಹಂಚಿಕೆ, ಬಿಲ್ ಮಾಡೋ ಕೆಲಸಕ್ಕೆ ನಿಮ್ಮ ಶ್ರಮ ವಿನಿಯೋಗ ಆಗಬಾರದು. ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ. ಜಾತಿಯತೆ ಬೇಡ. ಮಾನವೀಯತೆ ಇರಲಿ. ನನಗೆ ಯಾವುದೇ ದ್ವೇಷ ಇಲ್ಲ. ಕೆಲಸ ಆಗಬೇಕು ಅಷ್ಟೇ. ನೀವು ಸರಕಾರಕ್ಕೆ ನಿಷ್ಠಾರಾಗಿರಬೇಕೆ ಹೊರತು ನಿಮಗೆ ಪೋಸ್ಟಿಂಗ್ ಕೊಟ್ಟವರಿಗಲ್ಲ. ಅಂತವರನ್ನು ಸಹಿಸೋದಿಲ್ಲ. ನನಗೂ 33 ವರ್ಷ ಅನುಭವ ಇದೆ. ನಿಮ್ಮ ಕೈಯಲ್ಲಿ ಮಾಡಬಾರದ್ದು ಮಾಡಿಸಲ್ಲ. ದಾರಿ ತಪ್ಪಬೇಡಿ. ಎಚ್ಚರಿಕೆಯಿಂದ ಕೆಲಸ ಮಾಡಿ. ಬದಲಾವಣೆ ತನ್ನಿ. ಡೆಲ್ಲಿಯಿಂದ ಯೋಜನೆಗಳನ್ನು ತರಬೇಕು.

ನೆರೆಯ ತಮಿಳುನಾಡು, ಆಂಧ್ರ, ಮಹಾರಾಷ್ಟ್ರಕ್ಕೆ ಎಷ್ಟು ಯೋಜನೆಗಳು ಬಂದಿವೆ, ನಮ್ಮ ರಾಜ್ಯಕ್ಕೆ ಎಷ್ಟು ಬಂದಿವೆ ಎಂದು ನೀವೇ ಹೋಲಿಕೆ ಮಾಡಿಕೊಳ್ಳಿ. ನೀವು ಎಷ್ಟು ಚೆನ್ನಾಗಿ ಕೆಲಸ ಮಾಡಿದ್ದೀರಿ ಎಂದು ಗೊತ್ತಾಗುತ್ತದೆ. ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ. ನಾವು ಕರ್ನಾಟಕದ ಎಂಪಿಗಳ ಜತೆ ಸಭೆ ಮಾಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋಣ. ಪ್ರಧಾನಿಗಳು, ಕೇಂದ್ರದ ಜಲ ಸಂಪನ್ಮೂಲ ಸಚಿವರು ಸೇರಿದಂತೆ ಅಗತ್ಯ ಇರುವ ಎಲ್ಲರನ್ನೂ ಭೇಟಿ ಮಾಡೋಣ. ಕೇಂದ್ರದಿಂದ ಯೋಜನೆಗಳನ್ನು ತರುವ ಗುರಿಯನ್ನು ನಿಮಗೆ ನೀಡುತಿದ್ದೇನೆ. ಕೇಂದ್ರಕ್ಕೆ ಮನವರಿಕೆ ಮಾಡಿ, ಯೋಜನೆ ತರುವುದೇ ನಿಮ್ಮ ಕೆಲಸ. ಕೆಲಸ ಮಾಡಿದರೆ ನೀವು ಇಲ್ಲಿರುತ್ತೀರಿ. ಇಲ್ಲದಿದ್ದರೆ ನಿಮ್ಮ ಜಾಗದಲ್ಲಿ ಬೇರೆಯವರು ಇರುತ್ತಾರೆ. ನಾನು ಇಲಾಖೆ ವಹಿಸಿಕೊಂಡ ಏನೇನು ಕೆಲಸ ಮಾಡಿದ್ದೀರಿ ಎಂಬ ಬಗ್ಗೆ ಕಾಲ ಕಾಲಕ್ಕೆ ವರದಿ ಕೊಡಬೇಕು.

ಯಾವ, ಯಾವ ಯೋಜನೆಗಳು ಯಾವ ಹಂತದಲ್ಲಿವೆ ಎಂಬ ಬಗ್ಗೆ ವಿಡಿಯೋ, ಫೋಟೋ ದಾಖಲೆ ಒದಗಿಸಬೇಕು. ಯೋಜನೆಗಳು ಕುಂಠಿತಗೊಳ್ಳಲು ಕಾರಣಗಳನ್ನು ಸಾಕ್ಷಿ ಸಮೇತ ನೀಡಬೇಕು. ಕತೆ, ಕಟ್ಟು ಕತೆ ಕೇಳುವುದಿಲ್ಲ. ನಾನು ಈ ಖಾತೆಯಿಂದ ಇಳಿದ ನಂತರ ಕಣ್ಣಿಗೆ ಕಾಣುವ ಯಾವುದೇ ಕೆಲಸ ಆಗಿಲ್ಲ. ಮೂರು ವರ್ಷದ ಹಿಂದೆ ಇದ್ದಂತೆಯೇ ಇದೆ. ನಾನು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೆನೆ ಎನ್ನುವುದಕ್ಕಿಂತ ಎಷ್ಟು ಕೆಲಸ ಮಾಡಿದೆ ಎಂಬುದೇ ಮುಖ್ಯವಾಗಬೇಕು. ನೀವು ಯಾವುದೇ ಯೋಜನೆ ಮಾಡಿದರೂ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಪ್ರತಿ ಹನಿ ನೀರು ರೈತರ, ಜನರ ಹಿತಕ್ಕೆ ಬಳಕೆ ಆಗಬೇಕು. ಪೋಲಾಗಬಾರದು. ಎಲ್ಲೆಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದು ಎಂಬುದರ ಬಗ್ಗೆ ತ್ವರಿತಗತಿಯಲ್ಲಿ ನೀಲನಕ್ಷೆ ತಯಾರು ಮಾಡಿ. ಕೆಆರ್ ಎಸ್, ಮಂಚನಬೆಲೆ, ತಿಪ್ಪಗೊಂಡನಹಳ್ಳಿ, ಹೇಮಾವತಿ ಜಲಾಶಯ ಸೇರಿದಂತೆ ಈಗಾಗಲೇ ಸಿದ್ದವಾಗಿರುವ ಉದ್ಯಾನವನ, ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ತುರ್ತು ಕ್ರಮ ತೆಗೆದುಕೊಳ್ಳಿ.

Tags: BJPCongress Partycooperationdcm dkshivakumarDKShivakumarimplementedirrigation projectsMahadai projectsmekedatuUnion Ministerwater dispute resolutionWater Resources Departmentಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

Next Post

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada