
ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಜಲಶಕ್ತಿ ಸಚಿವರಲ್ಲಿ ರಾಜ್ಯದ ನೀರಾವರಿ ಯೋಜನೆ ಕುರಿತು ಮನವಿ ಸಲ್ಲಿಸಿದ್ದಾರೆ ಡಿಕೆ ಶಿವಕುಮಾರ್. ಪ್ರಮುಖ ನೀರಾವರಿ ಯೋಜನೆಗೆ ಅನುಮತಿ ಮತ್ತು ಅನುದಾನ ಕುರಿತು ಮನವಿ ಸಲ್ಲಿಸಿದ್ದಾರೆ ಡಿಕೆಶಿ. ರಾಜ್ಯ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ ಶಿವಕುಮಾರ್ರಿಂದ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್‌ಗೆ ಮನವಿ ಸಲ್ಲಿಸಿದ್ರು. ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ರಾಜ್ಯ ಸಣ್ಣ ನೀರಾವರಿ ಸಚಿವ ಬೋಸರಾಜ್, ದೆಹಲಿಯ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ರು.

ಜಲಶಕ್ತಿ ಸಚಿವಾಲಯದ ಮುಂದೆ ಇಟ್ಟಿರುವ ಪ್ರಮುಖ ಮನವಿಗಳು ಏನು ಅನ್ನೋದನ್ನು ನೋಡೋದಾದರೆ ರಾಜ್ಯದ ನೀರಾವರಿ ಯೋಜನೆ ಕುರಿತು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳನ್ನ ಪ್ರಸ್ತಾಪಿಸಿರುವ ಸಚಿವರು, ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಕ್ಕೆ ಬೇಡಿಕೆ ಇರಿಸಿದ್ದಾರೆ. ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೂ ಅನುದಾನ ಕೊಡುವಂತೆ ಮನವಿ ಮಾಡಿದ್ದಾರೆ.
ಭದ್ರಾ ಎಡದಂಡೆ ಕಾಲುವೆಯ (TLBC) ವಿಸ್ತರಣೆ, ಆಧುನೀಕರಣಕ್ಕೆ ಅನುದಾನ ನೀಡಲು ಮನವಿ ಮಾಡಿರುವ ಡಿಸಿಎಂ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆಯ 0.00 ಕಿ.ಮೀನಿಂದ 199.09 ಕಿ.ಮೀವರೆಗೆ ಹಾಗು ಚಿಕ್ಕೋಡಿ ಭಾಗದ ಕಾಲುವೆ 30.00 ಕಿ.ಮೀ. ನಿಂದ 88.25 ಕಿ.ಮೀ. ವರೆಗೆ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ಅನುದಾನ, ಈ ಯೋಜನೆಗೆ ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ 1596.98 ಕೋಟಿ ರೂ.ಗಳ ಅನುದಾನ ಒದಗಿಸಲು ಮನವಿ ಸಲ್ಲಿಸಿದ್ದಾರೆ.

ಬೆಣ್ಣಿಹಳ್ಳದಿಂದ ಮಲಪ್ರಭಾದ ಸಂಗಮದವರೆಗೂ ಪ್ರವಾಹ ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಯ ಕಾಮಗಾರಿಗಾಗಿ 1610 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದಾರೆರ. ಸೋಂತಿ ಏತ ನೀರಾವರಿ ಯೋಜನೆಯು ಸೋಂತಿ ಬ್ಯಾರೇಜ್ ನಿಂದ ನೀರನ್ನು ಎತ್ತಿ ಕಾಲುವೆಗಳ ಮೂಲಕ ಬರಪೀಡಿತ ಚಿತ್ತಾಪುರ, ಯಾದಗಿರಿ ತಾಲೂಕಿನಲ್ಲಿ 16,000 ಹೆಕ್ಟೇರ್ ಕೃಷಿ ಭೂಮಿಗೆ 4 ಟಿಎಂಸಿ ನೀರನ್ನು ಒದಗಿಸುವ ಯೋಜನೆಗೂ ಮನವಿ ಸಲ್ಲಿಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಮುಖ ಭಾಗವಾಗಿರುವ 172 ಕಿ.ಮೀ ಉದ್ದದ ಇಂಡಿ ಕಾಲುವೆ ಯೋಜನೆಯಲ್ಲಿ ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ 1.31 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಒದಗಿಸಲು ಯೋಜನೆ ರೂಪಿಸಲಾಗಿದೆ. ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ ಈ ಯೋಜನೆಗೆ ಅನುದಾನ ಒದಗಿಸಲು ಮನವಿ ಮಾಡಿದ್ದಾರೆ. ಇನ್ನು ಮಲಪ್ರಭಾ ಕಾಲುವೆ ಯೋಜನೆಯ ಮೂರನೇ ಹಂತದಲ್ಲಿ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ಅನುಮತಿ ಮತ್ತು ಅನುದಾನಕ್ಕೂ ಮನವಿ ಮಾಡಿದ್ದಾರೆ.
