• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಲಶಕ್ತಿ ಸಚಿವರ ಬಳಿಕ ರಾಜ್ಯದ ನೀರಾವರಿ ಸಮಸ್ಯೆ ಬಿಚ್ಚಿಟ್ಟ ಡಿಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
February 26, 2025
in ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಜಲಶಕ್ತಿ ಸಚಿವರಲ್ಲಿ ರಾಜ್ಯದ ನೀರಾವರಿ ಯೋಜನೆ ಕುರಿತು ಮನವಿ ಸಲ್ಲಿಸಿದ್ದಾರೆ ಡಿಕೆ ಶಿವಕುಮಾರ್. ಪ್ರಮುಖ ನೀರಾವರಿ ಯೋಜನೆಗೆ ಅನುಮತಿ ಮತ್ತು ಅನುದಾನ ಕುರಿತು ಮನವಿ ಸಲ್ಲಿಸಿದ್ದಾರೆ ಡಿಕೆಶಿ. ರಾಜ್ಯ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ ಶಿವಕುಮಾರ್​ರಿಂದ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್‌ಗೆ ಮನವಿ ಸಲ್ಲಿಸಿದ್ರು. ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ರಾಜ್ಯ ಸಣ್ಣ ನೀರಾವರಿ ಸಚಿವ ಬೋಸರಾಜ್, ದೆಹಲಿಯ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ರು.

ADVERTISEMENT

ಜಲಶಕ್ತಿ ಸಚಿವಾಲಯದ ಮುಂದೆ ಇಟ್ಟಿರುವ ಪ್ರಮುಖ ಮನವಿಗಳು ಏನು ಅನ್ನೋದನ್ನು ನೋಡೋದಾದರೆ ರಾಜ್ಯದ ನೀರಾವರಿ ಯೋಜನೆ ಕುರಿತು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳನ್ನ ಪ್ರಸ್ತಾಪಿಸಿರುವ ಸಚಿವರು, ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಕ್ಕೆ ಬೇಡಿಕೆ ಇರಿಸಿದ್ದಾರೆ. ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೂ ಅನುದಾನ ಕೊಡುವಂತೆ ಮನವಿ ಮಾಡಿದ್ದಾರೆ.

ಭದ್ರಾ ಎಡದಂಡೆ ಕಾಲುವೆಯ (TLBC) ವಿಸ್ತರಣೆ, ಆಧುನೀಕರಣಕ್ಕೆ ಅನುದಾನ ನೀಡಲು ಮನವಿ ಮಾಡಿರುವ ಡಿಸಿಎಂ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆಯ 0.00 ಕಿ.ಮೀನಿಂದ 199.09 ಕಿ.ಮೀವರೆಗೆ ಹಾಗು ಚಿಕ್ಕೋಡಿ ಭಾಗದ ಕಾಲುವೆ 30.00 ಕಿ.ಮೀ. ನಿಂದ 88.25 ಕಿ.ಮೀ. ವರೆಗೆ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ಅನುದಾನ, ಈ ಯೋಜನೆಗೆ ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ 1596.98 ಕೋಟಿ ರೂ.ಗಳ ಅನುದಾನ ಒದಗಿಸಲು ಮನವಿ ಸಲ್ಲಿಸಿದ್ದಾರೆ.

ಬೆಣ್ಣಿಹಳ್ಳದಿಂದ ಮಲಪ್ರಭಾದ ಸಂಗಮದವರೆಗೂ ಪ್ರವಾಹ ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಯ ಕಾಮಗಾರಿಗಾಗಿ 1610 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದಾರೆರ. ಸೋಂತಿ ಏತ ನೀರಾವರಿ ಯೋಜನೆಯು ಸೋಂತಿ ಬ್ಯಾರೇಜ್ ನಿಂದ ನೀರನ್ನು ಎತ್ತಿ ಕಾಲುವೆಗಳ ಮೂಲಕ ಬರಪೀಡಿತ ಚಿತ್ತಾಪುರ, ಯಾದಗಿರಿ ತಾಲೂಕಿನಲ್ಲಿ 16,000 ಹೆಕ್ಟೇರ್ ಕೃಷಿ ಭೂಮಿಗೆ 4 ಟಿಎಂಸಿ ನೀರನ್ನು ಒದಗಿಸುವ ಯೋಜನೆಗೂ ಮನವಿ ಸಲ್ಲಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಮುಖ ಭಾಗವಾಗಿರುವ 172 ಕಿ.ಮೀ ಉದ್ದದ ಇಂಡಿ ಕಾಲುವೆ ಯೋಜನೆಯಲ್ಲಿ ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ 1.31 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಒದಗಿಸಲು ಯೋಜನೆ ರೂಪಿಸಲಾಗಿದೆ. ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ ಈ ಯೋಜನೆಗೆ ಅನುದಾನ ಒದಗಿಸಲು ಮನವಿ ಮಾಡಿದ್ದಾರೆ. ಇನ್ನು ಮಲಪ್ರಭಾ ಕಾಲುವೆ ಯೋಜನೆಯ ಮೂರನೇ ಹಂತದಲ್ಲಿ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ಅನುಮತಿ ಮತ್ತು ಅನುದಾನಕ್ಕೂ ಮನವಿ ಮಾಡಿದ್ದಾರೆ.

Tags: constitution of indiagreen coverhow to complain to prime ministerkerala psc previous question paperskerala psc previous questions and answersmaster planmunicipal waternatural resource management (field of study)prime minister's officeprofessional talk seriesrussia investigationsmart waterthe epoch timesunited states institute of peaceupsc mains 2020 question paperwaterwater reclamationwater reuse
Previous Post

ವೈಚಾರಿಕ ನೆಲೆಯಲ್ಲಿ – ಶಿವರಾತ್ರಿ ಮತ್ತು ಜಾಗರಣೆ

Next Post

ಪರಮೇಶ್ವರ್​​ ನೀಡಿದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಕೆಂಡ..

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಪರಮೇಶ್ವರ್​​ ನೀಡಿದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಕೆಂಡ..

ಪರಮೇಶ್ವರ್​​ ನೀಡಿದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಕೆಂಡ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada