• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

ಪ್ರತಿಧ್ವನಿ by ಪ್ರತಿಧ್ವನಿ
October 11, 2025
in Uncategorized
0
Share on WhatsAppShare on FacebookShare on Telegram

ಲಾಲ್ ಬಾಗ್ ಗೆ ತೊಂದರೆಯಾಗಬಾರದು, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಓಸಿ ಸಿಸಿ ಸಮಸ್ಯೆ ನಿವಾರಣೆ, ಕಸ ನಿರ್ವಹಣೆ ಬಗ್ಗೆ ಚರ್ಚೆ

ADVERTISEMENT

“ಟನಲ್ ರಸ್ತೆ ಯೋಜನೆಯಿಂದ ಲಾಲ್ ಬಾಗ್ ತೊಂದರೆಯಾಗದಂತೆ ನೋಡಿಕೊಳ್ಳಿ, ಓಸಿ ಸಿಸಿ ಸಮಸ್ಯೆ, ಕಸದ ಸಮಸ್ಯೆ ನಿವಾರಿಸಿ ಎಂಬ ಮನವಿಗಳ ಜೊತೆಗೆ, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ವಿಚಾರವಾಗಿ ಬೆಂಗಳೂರಿನ ನಾಗರಿಕರ ಸಲಹೆಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಲಿಸಿದರು.

ಬೆಂಗಳೂರಿನ ನಾಗರಿಕರ ಬಳಿಗೆ ಹೋಗಿ, ಅವರ ಅಭಿಪ್ರಾಯ, ಸಲಹೆ, ಅಹವಾಲುಗಳನ್ನು ಸ್ವೀಕರಿಸಲು ಹಮ್ಮಿಕೊಂಡಿರುವ ಬೆಂಗಳೂರು ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಶನಿವಾರ ಮುಂಜಾನೆ ಲಾಲ್ ಬಾಗ್ ಉದ್ಯಾನದಲ್ಲಿ ನಡಿಗೆ ಜೊತೆಗೆ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.

ಡಿಸಿಎಂ ಬಳಿ ತಮ್ಮ ಸಲಹೆಗಳನ್ನು ಮುಕ್ತವಾಗಿ ಹಂಚಿಕೊಂಡ ಸಾರ್ವಜನಿಕರು ಉಪಮುಖ್ಯಮಂತ್ರಿಗಳ ಈ ಹೆಜ್ಜೆಯನ್ನು ಮುಕ್ತಕಂಠದಿಂದ ಸ್ವಾಗತಿಸಿದರು. ಸಾರ್ವಜನಿಕರ ಸಲಹೆ, ಮನವಿ ಹಾಗೂ ಅವರ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ದಾಖಲು ಮಾಡಿಕೊಂಡರು.

ಹಿರಿಯ ನಾಗರಿಕರಾದ ಆರ್.ಸಿ ಜಗನ್ನಾಥ್ ಅವರು ಲಾಲ್ ಬಾಗ್ ನಲ್ಲಿ ಯಾವುದೇ ಯೋಜನೆ ಕೈಗೊಳ್ಳಬೇಡಿ ಹಾಗೂ ಇದಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿಸಿಎಂ, “ಯಾವುದೇ ಕಾರಣಕ್ಕೂ ಲಾಲ್ ಬಾಗ್ ಗೆ ಧಕ್ಕೆ ಆಗುವುದಿಲ್ಲ. ಟನಲ್ ರಸ್ತೆ ಭೂಮಿಯ ಒಳಗೆ ಹಾದು ಹೋಗಲಿದೆ. ಲಾಲ್ ಬಾಗ್ ಬಂಡೆಯ ಪಕ್ಕದಲ್ಲಿ ಟನಲ್ ಗೆ ಪ್ರವೇಶ ನೀಡಲು ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಆ ಜಾಗವನ್ನು ಪರಿಶೀಲಿಸುತ್ತೇನೆ. ಅಗತ್ಯವಿದ್ದರೆ ಈ ಯೋಜನೆಯಲ್ಲಿ ಮಾರ್ಪಾಡು ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಕಾರ್ತಿಕ್ ಕುಮಾರ್ ಎಂಬುವವರು ಸರ್ಕಾರ ಏನೇ ಕೆಲಸ ಮಾಡಿದರೂ ಜನರಲ್ಲಿ ನಾಗರಿಕ ಪ್ರಜ್ಞೆ ಮೂಡದಿದ್ದರೆ ಯಶಸ್ವಿಯಾಗುವುದಿಲ್ಲ. ಹೀಗಾಗಿ ಇದಕ್ಕೆ ಅಗತ್ಯ ಜಾಗೃತಿ ಮೂಡಿಸುವ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದರು. ಇನ್ಮು ಸಿಬಿಡಿ ಶಾಲೆಗಳ ಆವರಣದಲ್ಲಿ ಜಾಗ ಇದ್ದರು, ರಸ್ತೆಯಲ್ಲಿ ವಾಹನ ನಿಲ್ಲಿಸುತ್ತಾರೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚುತ್ತದೆ, ಈ ಶಾಲೆಗಳು ತಮ್ಮ ಆವರಣದಲ್ಲಿ ವಾಹನ ಇಟ್ಟುಕೊಳ್ಳುವಂತೆ ಮಾಡಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಅವರು “ಈ ವಿಚಾರವಾಗಿ ಖಂಡಿತ ಆಲೋಚನೆ ಮಾಡಿ, ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು.

ಇನ್ನು 30×50 ನಿವೇಶನದಲ್ಲಿ ಮನೆ ಕಟ್ಟುತ್ತಿದ್ದು ಓಸಿ ಮತ್ತು ಸಿಸಿ ಸಮಸ್ಯೆ ಇದೆ ಎಂದರು, ಮತ್ತೊಬ್ಬರು 40×60 ನಿವೇಶನದಲ್ಲಿ ಮನೆ ಕಟ್ಟುತ್ತಿದ್ದೇವೆ ಎಂದು ಓಸಿ ಸಿಸಿ ವಿನಾಯಿತಿ ನೀಡಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಅವರು, “ನಿನ್ನೆಯಷ್ಟೇ 30×40 ನಿವೇಶನಕ್ಕೆ ವಿನಾಯಿತಿ ನೀಡಿದ್ದೇವೆ. ಉಳಿದಂತೆ ಎರಡನೇ ಹಂತದಲ್ಲಿ ಇತರೆ ಕಟ್ಟಡಗಳ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ರಾಜಾರಾಂ ಎಂಬುವವರು ಬೆಂಗಳೂರಿನ ರಸ್ತೆಯಲ್ಲಿ ಮೆಟ್ರೋ ಅಥವಾ ಯಾವುದೇ ಕಾಮಗಾರಿ ನಡೆದರೂ ಆ ಭಾಗದ ರಸ್ತೆಯನ್ನು ಯೋಜನೆ ಆರಂಭದಿಂದ ಅಂತ್ಯದವರೆಗೆ ಅವರೇ ನಿರ್ವಹಣೆ ಮಾಡುವಂತೆ ನೋಡಿಕೊಳ್ಳಬೇಕು. ಆಗ ರಸ್ತೆ ಗುಂಡಿ ಬಿದ್ದರೂ ಅವರೇ ಅದನ್ನು ಮುಚ್ಚಿ ನಿರ್ವಹಣೆ ಮಾಡಿದಂತಾಗುತ್ತದೆ. ಆಗ ಅರ್ಧದಷ್ಟು ಸಮಸ್ಯೆ ನಿವಾರಣೆ ಆಗಲಿದೆ ಎಂದರು.

ಜಯನಗರ 4ನೇ ಬ್ಲಾಕ್ ನಿವಾಸಿಯೊಬ್ಬರು 7ಬಿ ಮುಖ್ಯರಸ್ತೆಯಲ್ಲಿ ಬೀದಿ ದೀಪ ಇಲ್ಲ. ಈ ಬಗ್ಗೆ ದೂರು ನೀಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅಹವಾಲು ಹೇಳಿಕೊಂಡರು. “ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುತ್ತೇವೆ. ಇದರ ಜೊತೆಗೆ ಬೆಂಗಳೂರಿನ ಎಲ್ಲಾ ಬೀದಿ ದೀಪಗಳನ್ನು ಬದಲಿಸಿ ಎಲ್ ಇಡಿ ದೀಪ ಅಳವಡಿಸಲಾಗುತ್ತದೆ. ಮುಂದಿನ ಆರು ತಿಂಗಳಲ್ಲಿ ಈ ಕೆಲಸ ನಡೆಯಲಿದೆ” ಎಂದು ಭರವಸೆ ನೀಡಿದರು.

ಸೆಂಟ್ ಫ್ರಾನ್ಸಿಸ್ ಶಾಲೆ ಶಿಕ್ಷಕಿ ತಮ್ಮ ಶಾಲೆ ಬಳಿಯ ರಸ್ತೆಯಲ್ಲಿ ಕಸ ಸುರಿಯುತ್ತಾರೆ, ರಸ್ತೆ ಹದಗೆಟ್ಟಿದೆ ಎಂದು ತಮ್ಮ ಅಹವಾಲು ಹೇಳಿಕೊಂಡರು. “ನಿಮ್ಮ ಶಾಲೆ ಬಳಿಗೆ ಅಧಿಕಾರಿಗಳ ತಂಡವನ್ನು ಕಳುಹಿಸಿ ಸಮಸ್ಯೆ ಬಗೆಹರಿಸಲು ಸೂಚಿಸುತ್ತೇನೆ. ನಿಮ್ಮನ್ನು ಸಂಪರ್ಕ ಮಾಡಲು ತಿಳಿಸುತ್ತೇನೆ” ಎಂದು ಭರವಸೆ ನೀಡಿದರು.

Tags: BangaloreDCM D.K ShivakumarDCM DK Shivakumardcm dk shivakumar ride a scooterdcm dkshivakumarDK Shivakumardk shivakumar accidentdk shivakumar exclusivedk shivakumar falldk shivakumar indidk shivakumar interviewdk shivakumar latestdk shivakumar memesdk shivakumar motherdk shivakumar rallydk shivakumar slams bjpdk shivakumar speaksdk shivakumar speechdk shivakumar videoskarnataka cm dk shivakumarkarnataka dk shivakumarlalbaghLalbagh Parktv9 interview with dcm dk shivakumar
Previous Post

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ-DCM ಡಿಕೆಶಿ

Next Post

DK Shivakumar: ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ.: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

Related Posts

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ
Uncategorized

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ರಾಜ್ಯಪಾಲರ ನಡೆಯ ವಿರುದ್ಧ ಈಗಾಗಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜ್ಯಪಾಲರನ್ನು‌ ಕೇಂದ್ರ ಸರ್ಕಾರ ತಕ್ಷಣ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರದ್ದು ಖಂಡನಾರ್ಹವಾದ ನಡೆಯಾಗಿದೆ ಎಂದು ಕಾಂಗ್ರೆಸ್‌...

Read moreDetails
ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

January 23, 2026
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

January 21, 2026
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
Next Post

DK Shivakumar: ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ.: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada