• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DCM DK Shivakumar | ರಾತ್ರೋರಾತ್ರಿ ಫೀಲ್ಡ್​ಗೆ ಇಳಿದ ಡಿಸಿಎಂ..! ಬಿಬಿಎಂಪಿ ವಿರುದ್ಧ ಕೇಸ್​ ಬುಕ್​..!

ಕೃಷ್ಣ ಮಣಿ by ಕೃಷ್ಣ ಮಣಿ
May 22, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
DCM DK Shivakumar | ರಾತ್ರೋರಾತ್ರಿ ಫೀಲ್ಡ್​ಗೆ ಇಳಿದ ಡಿಸಿಎಂ..! ಬಿಬಿಎಂಪಿ ವಿರುದ್ಧ ಕೇಸ್​ ಬುಕ್​..!
Share on WhatsAppShare on FacebookShare on Telegram

ಬೆಂಗಳೂರು ನಗರದಲ್ಲಿ ನಿನ್ನೆ ಸುರಿದ ಮಹಾಮಳೆಗೆ 22 ವರ್ಷದ ಯುವತಿ ಭಾನುರೇಖಾ ಬಲಿಯಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಇದೇ ರೀತಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿನ್ನೆ ಕೆಲವು ಗಂಟೆಗಳ ಕಾಲ ಸುರಿದ ಮಳೆಯ ಪ್ರಮಾಣ ಅತ್ಯಧಿಕವಾಗಿದೆ. ಬೆಂಗಳೂರು ನಗರದಲ್ಲಿ 30 ಮಿ.ಮೀ ಗಿಂತ ಹೆಚ್ಚಿನ ಮಳೆ ಸುರಿದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 8.6 ಮಿ.ಮೀ. HAL ಏರ್ಪೋರ್ಟ್​ನಲ್ಲಿ 25.1 ಮಿ.ಮೀ ಮಳೆಯಾಗಿದೆ ಎಂದು ತಿಳಿಸಲಾಗಿದೆ. ಮುಂಗಾರು ಮಳೆಗೂ ಮುನ್ನವೇ ಸುರಿಯುತ್ತಿರುವ ಮಳೆಯಿಂದ ಆಗಿರುವ ಅವಾಂತರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ವಿರುದ್ದ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದಿದ್ದಾರೆ. ಪ್ರತೀ ಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ. ಯಾಕೆ..? ಮಳೆ ಬಂದರೆ ಜನರು ಸಾಯಲೇಬೇಕೆ..? ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಪ್ರತಿಧ್ವನಿ ವರದಿಯ ಅಂಶಗಳನ್ನೇ ಹೇಳಿದ ಡಿಸಿಎಂ..!

ಮಳೆಯಿಂದ ಸಾವು ಸಂಭವಿಸಿದ ಬಳಿಕ ಪರಿಹಾರ ನೀಡುವುದರಿಂದ ಯಾವುದೇ ಲಾಭವಿಲ್ಲ. ಸಮಸ್ಯೆಗಳು ಆಗುವುದನ್ನೇ ತಪ್ಪಿಸುವುದು ಸೂಕ್ತ ಎಂದು ಪ್ರತಿಧ್ವನಿ ನಿನ್ನೆ ವರದಿ ಮಾಡಿತ್ತು. ಮಂಡ್ಯದ ಆದಿಚುಂಚನಗಿರಿಯಲ್ಲಿ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಕೃತಿ ಯಾರ ಕೈಯಲ್ಲಿ ಇಲ್ಲ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಏನೇನು ಸಮಸ್ಯೆ ಇದೆ ತೊಂದರೆ ಇದೆ ಅದನ್ನು ಸರಿ ಮಾಡಬೇಕು. ಸರಿ ಮಾಡುವ ಕಾಲ ಬಂದಿದೆ, ನಾವು ಸರಿ ಮಾಡುತ್ತೇವೆ. ಯುವತಿ ಕುಟುಂಬಕ್ಕೆ ಪರಿಹಾರ ಕೊಡುವುದು ಒಂದೇ ಅಲ್ಲ. ಐದು, ಹತ್ತು ಲಕ್ಷ ಕೊಡುವುದು ದೊಡ್ಡದು ಅಲ್ಲ. ಮುಂದೆ ಹೀಗೆ ಆಗದ ರೀತಿ ಮುಂಜಾಗ್ರತೆಯಿಂದ ಕೆಲಸ ಮಾಡಬೇಕು. ನಾವು ಮುಂಜಾಗ್ರತಾ ಕೆಲಸಗಳನ್ನು ನಾವು ಮಾಡುತ್ತೇವೆ ಎಂದಿದ್ದರು. ಬೆಂಗಳೂರಿಗೆ ಬರುತ್ತಿದ್ದ ಹಾಗೆ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ಘಟನಾ ಸ್ಥಳ ಕೆ.ಆರ್​ ಸರ್ಕಲ್​ನಾ ಅಂಡರ್​ ಪಾಸ್​ಗೆ ಭೇಟಿ ನೀಡಿದ್ದರು.

ಅಂಡರ್​ಪಾಸ್​ಗೆ ಇನ್ಮುಂದೆ ಸಿಸಿಟಿವಿ, ಕಟ್ಟೆಚ್ಚರದ ಭರವಸೆ..

ಸಚಿವ ರಾಲಿಂಗಾರೆಡ್ಡಿ ಜೊತೆಗೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ಡಿಸಿಎಂ ಸಿ.ಕೆ ಶಿವಕುಮಾರ್​, ಅಂಡರ್​ ಒಳಕ್ಕೆ ನೀರು ಬಾರದಂತೆ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ಅಂಡರ್​ ಪಾಸ್​ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಸೂಚನೆ ನೀಡಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ ಶಿವಕುಮಾರ್​, ಪರಿಹಾರ ಕೊಡುವುದು ಮುಖ್ಯವಲ್ಲ ಹೆಚ್ಚು ಪ್ರಾಣಾಪಾಯ ತಪ್ಪಿದೆ. ಅಂಡರ್​ಪಾಸ್​ ಸಮಸ್ಯೆಗಳ ಬಗ್ಗೆ ಒಂದು ಆ್ಯಕ್ಷನ್​ ಪ್ಯಾನ್​ ಮಾಡಲು ತಿಳಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಆಗದಂತೆ ಕಟ್ಟೆಚ್ಚರ ವಹಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಮೃತ ಯುವತಿ ಭಾನುರೇಖಾ ಸಂಬಂಧಿಗಳು ಬಿಬಿಎಂಪಿ ವಿರುದ್ಧ ಹಲಸೂರು ಗೇಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಅಂಡರ್​ಪಾಸ್​ನಲ್ಲಿ ನೀರು ತುಂಬಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್​​ 304 ಅಡಿಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅನಾಹುತದ ಬಳಿಕ ಅಲರ್ಟ್​ ಆದ ಬಿಬಿಎಂಪಿ, ಸರ್ಕಾರ..!

ಮುಂಗಾರು ಪೂರ್ವ ಮಳೆಯಿಂದ ಯುವತಿ ಬೆಂಗಳೂರಿನ ಕೇಂದ್ರ ಭಾಗದಲ್ಲೇ ಸಾವನ್ನಪ್ಪಿದ ಬಳಿಕ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. 41 ಫಾರೆಸ್ಟ್ ಗ್ಯಾಂಗ್ ತಂಡವನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ಮರ ಬೀಳುವುದು, ನೀರು ತುಂಬಿಕೊಳ್ಳುವುದು ಸೇರಿದಂತೆ ಮಳೆ ಹಾನಿ ನಿಟ್ಟಿನಲ್ಲಿ ಕೆಲಸ ಮಾಡಲು ತಂಡ ನಿಯೋಜನೆ ಮಾಡಲಾಗಿದೆ. ನಿನ್ನೆ ಒಂದೇ ಒಂದು ಗಂಟೆಗಳ ಅವಧಿಯಲ್ಲಿ ಸುರಿದ ಮಹಾಮಳೆಗೆ 65 ಮರಗಳು ಧರೆಗುರುಳಿವೆ. ಇನ್ನು ಮರ ಬುಡಸಮೇತ ಕಿತ್ತು ಬೀಳುವುದು, ಮರಗಳ ಎಲೆ ಉದುರಿ ಡ್ರೈನೇಜ್ ಬ್ಲಾಕ್ ಆಗಲಿದೆ. ಬೆಂಗಳೂರು ಜನರು ಎಚ್ಚರಿಕೆಯಲ್ಲಿ ಇರುವಂತೆ ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್​ ಗಿರಿನಾಥ್​ ಮನವಿ ಮಾಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ವರದಿ ನೀಡಿದ್ದು, ಬೆಂಗಳೂರಿನಲ್ಲಿ 206 ಸೂಕ್ಷ್ಮ ಪ್ರದೇಶ, ಈ ಪ್ರದೇಶದಲ್ಲಿ ಮಳೆ ಬಂದಾಗ ಹೆಚ್ಚು ಹಾನಿಯಾಗುವ ಸಂಭವ ಹೆಚ್ಚು ಎಂದು ವರದಿಯಲ್ಲಿಯಲ್ಲಿ ತಿಳಿಸಲಾಗಿದೆ. ಆದರೂ ನಿರೀಕ್ಷೆಗೆ ಮೀರಿದ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಸರ್ಕಾರಿ ಅಧಿಕಾರಿಗಳೇ ತಿಳಿಸಿದ್ದಾರೆ.

ಕೃಷ್ಣಮಣಿ

Tags: BengaloreBJPBreaking NewsCongress PartydcmDCM DK ShivakumarDK ShivakumarhevyrainRainಸಿದ್ದರಾಮಯ್ಯ
Previous Post

‘ದಿ ಕೇರಳ ಸ್ಟೋರಿ’ ವೈರಲ್​ ಆಗಿರುವುದರ ಹಿಂದಿನ ಮರ್ಮ ಏನು..?

Next Post

Karnataka Assembly Session: ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
Karnataka Assembly Session: ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

Karnataka Assembly Session: ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!