
ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ ಸ್ವತಃ ಸಿದ್ದರಾಮಯ್ಯನವರು (C M Siddaramaiah)ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನು ಸಚಿವ ಜಾರ್ಜ್, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. (Indian National Congress – Karnataka)

ಇದರ ಬೆನ್ನಲ್ಲೇ ಡಿಕೆಶಿ ಜಾರ್ಜ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ದಿನಗಳಿಂದ ಶಾಸಕರು, ಸಚಿವರು ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡುತ್ತಿದ್ದಾರೆ. ಆದರೆ, ಡಿಕೆಶಿ ಮಾತ್ರ ಜಾರ್ಜ್ ಅವರನ್ನು (K. J. George Energy Minister of Karnataka) ಭೇಟಿ ಮಾಡಿ ಅಚ್ಚರಿಗೆ ಕಾರಣವಾಗಿದೆ.











