ದುಮ್ಕಾ (ಜಾರ್ಖಂಡ್ Jharkhand):ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಊಟವನ್ನು the meal)ಸೇವಿಸಿದ ಸರ್ಕಾರಿ ಶಾಲೆಯ Govt School ಕನಿಷ್ಠ 65 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ (sick)ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಊಟದಲ್ಲಿ ಸತ್ತ ಸತ್ತ ಊಸರವಳ್ಳಿ (dead chameleon)ಪತ್ತೆಯಾಗಿದೆ ಎಂದು ಅವರು ಹೇಳಿದರು. ಟೋಂಗ್ರಾ ಪ್ರದೇಶದ ಮಿಡ್ಲ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ.
ಊಟ ಮಾಡಿದ ನಂತರ ವಾಂತಿ ಮಾಡಿಕೊಂಡ ವಿದ್ಯಾರ್ಥಿಗಳನ್ನು ಮಸಾಲಿಯಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಅಜ್ಫರ್ ಹುಸ್ನೇನ್ ತಿಳಿಸಿದ್ದಾರೆ. “ಮಧ್ಯಾಹ್ನದ ಊಟದಲ್ಲಿ ಸತ್ತ ಊಸರವಳ್ಳಿ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ” ಎಂದು ಅವರು ಹೇಳಿದರು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಟೊಂಗ್ರಾ ಪೊಲೀಸ್ ಠಾಣೆಯ ಉಸ್ತುವಾರಿ ಗುರುಚರಣ್ ಮಾಂಝಿ ಹೇಳಿದ್ದಾರೆ. ಹಿರಿಯ ಅಧಿಕಾರಿಗಳು ತನಿಖೆ ನಡೆಸುತಿದ್ದು ಶಾಲೆಯ ಮುಖ್ಯೋಪಾಧ್ಯಾಯರಿಂದ ವಿವರಣೆ ಕೇಳಿ ನೋಟೀಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.