ಮುಂಬೈ: ‘ಪಠಾಣ್’ ಮತ್ತು ‘ಜವಾನ್’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ನಟ ದೂರು ನೀಡಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅವರಿಗೆ ವೈ+ ಭದ್ರತೆಯನ್ನು ಒದಗಿಸಿದ್ದಾರೆ.
Y+ ಭದ್ರತೆ ಅಡಿಯಲ್ಲಿ, ಶಾರೂಕ್ ಖಾನ್ ಅವರಿಗೆ ದಿನಪೂರ್ತಿ 24 ಗಂಟೆಗಳ ಕಾಲ ಆರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯಿರುತ್ತಾರೆ. ಇದಕ್ಕೂ ಮುನ್ನ ಶಾರೂಕ್ ಖಾನ್ ಇಬ್ಬರು ಭದ್ರತಾ ಸಿಬ್ಬಂದಿಯ ರಕ್ಷಣೆಯಲ್ಲಿದ್ದರು.
ಶಾರೂಕ್ ಖಾನ್ ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದು ತಮ್ಮ ಚಿತ್ರ ಯಶಸ್ವಿಯಾದ ನಂತರ ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಶಾರೂಕ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ.