• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಿಮಾಚಲ ಪ್ರದೇಶ | ಮಳೆ, ಭೂಕುಸಿತದಲ್ಲಿ ಮೃತರ ಸಂಖ್ಯೆ 60ಕ್ಕೆ ಏರಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಇದೀಗ, ದೇಶ
0
ಹಿಮಾಚಲ ಪ್ರದೇಶ
Share on WhatsAppShare on FacebookShare on Telegram

ಹಿಮಾಚಲ ಪ್ರದೇಶ ರಾಜ್ಯದಲ್ಲಿ ವಾರದಿಂದ ಭಾರೀ ಮಳೆ ಸುರಿಯುತ್ತಿದ್ದು ಮಳೆಯಿಂದ ಭೂಕುಸಿತ, ಪ್ರವಾಹ ಮೊದಲಾದ ಅವಘಡದಲ್ಲಿ ಮೃತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

ADVERTISEMENT

ಭಾನುವಾರದಿಂದ ಶಿಮ್ಲಾದಲ್ಲಿ ಮಳೆಯಿಂದ ಕೃಷ್ಣ ನಗರ ಮತ್ತು ಫಾಗಿಲ್‌ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿ 12ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

ಶಿಮ್ಲಾದಲ್ಲಿ ಭೂಕುಸಿತದಿಂದ ಅವಶೇಷಗಳ ಅಡಿಯಿಂದ ಮಹಿಳೆಯೊಬ್ಬರ ಮೃತದೇಹವನ್ನು ಬುಧವಾರ (ಆಗಸ್ಟ್ 16) ಹೊರೆತೆಗೆಯಲಾಗಿದೆ. ಈ ಮೂಲಕ ಮೃತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರದಿಂದ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಿಮ್ಲಾದ ಸಮ್ಮರ್ ಹಿಲ್, ಕೃಷ್ಣನಗರ ಹಾಗೂ ಫಾಗಿಲ್ನಲ್ಲಿ ಸೋಮವಾರ ಭೂಕುಸಿತ ಉಂಟಾಗಿದೆ.

ಹಿಮಾಚಲ ಪ್ರದೇಶ ಸಮ್ಮರ್ ಹಿಲ್ ಹಾಗೂ ಕೃಷ್ಣನಗರ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಮ್ಮರ್ ಹಿಲ್ನಲ್ಲಿ ಒಂದು ದೇಹವನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಆದಿತ್ಯ ನೇಗಿ ಮಾಹಿತಿ ನೀಡಿದ್ದಾರೆ.

ಈವರೆಗೆ ಸಮ್ಮರ್ ಹಿಲ್‌ನಲ್ಲಿ 13, ಫಾಗಿಲ್‌ನಲ್ಲಿ 5 ಹಾಗೂ ಕೃಷ್ಣ ನಗರದಲ್ಲಿ 2 ದೇಹಗಳನ್ನು ಹೊರತೆಗೆಯಲಾಗಿದೆ. ಸೋಮವಾರ ಕುಸಿದ ಶಿವ ದೇಗುಲದ ಅವಶೇಷಗಳ ಅಡಿಯಲ್ಲಿ ಇನ್ನೂ 10 ಮಂದಿ ಸಿಲುಕಿರುವ ಶಂಕೆ ಇದೆ ಎಂದು ಅವರು ಹೇಳಿದ್ದಾರೆ.

ಕೃಷ್ಣನಗರದಲ್ಲಿ 15 ಮನೆಗಳನ್ನು ತೆರವು ಮಾಡಲಾಗಿದ್ದು, ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಸತತ ಮಳೆಯಿಂದಾಗಿ ಭೂಕುಸಿತದ ಭಯದಿಂದ ಹಲವು ಮಂದಿ ತಾವಾಗಿಯೇ ಮನೆ ತೊರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರಾಖಂಡ | ಭಾರೀ ಮಳೆಗೆ ಜೋಶಿಮಠ ಬಳಿ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿರುವ ಹಲವರು

ಎಲ್ಲಾ ಶಾಲಾ- ಕಾಲೇಜುಗಳನ್ನು ಮುಚ್ಚುವಂತೆ ಹಿಮಾಚಲ ಪ್ರದೇಶ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್ 19ರ ವರೆಗೆ ಬೋಧನೆ ನಿಲ್ಲಿಸಲಾಗಿದೆ.

ಮಳೆಯಿಂದಾಗಿ ಸುಮಾರು 800 ರಸ್ತೆಗಳು ಬಂದ್ ಆಗಿದ್ದು, ಸುಮಾರು 12,700 ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದರು.

Tags: heavy rainshimachal pradeshLandslideShimlaಭಾರೀ ಮಳೆಭೂಕುಸಿತಹಿಮಾಚಲ ಪ್ರದೇಶ
Previous Post

ನೆಹರೂ ಸ್ಮಾರಕ ಮ್ಯೂಸಿಯಂ | ಜೈರಾಮ್ ಟೀಕೆಗೆ ರವಿ ಶಂಕರ್ ತಿರುಗೇಟು

Next Post

ಇಂದು ಬಿಜೆಪಿ ಚುನಾವಣಾ ಸಮಿತಿ ಸಭೆ | ಪಂಚರಾಜ್ಯಗಳ ಚುನಾವಣಾ ತಂತ್ರ ಚರ್ಚೆ ಸಾಧ್ಯತೆ

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಬಿಜೆಪಿ ಚುನಾವಣಾ ಸಮಿತಿ

ಇಂದು ಬಿಜೆಪಿ ಚುನಾವಣಾ ಸಮಿತಿ ಸಭೆ | ಪಂಚರಾಜ್ಯಗಳ ಚುನಾವಣಾ ತಂತ್ರ ಚರ್ಚೆ ಸಾಧ್ಯತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada