ಜುಲೈ 3 ನೇ ವಾರದಲ್ಲಿ SSLC ಪರೀಕ್ಷೆ, ಯಾರನ್ನೂ ಅನುತ್ತೀರ್ಣಗೊಳಿಸಲ್ಲ–ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಎಸ್‌ಎಸ್ಎಲ್‌ಸಿ ದ್ವೀತೀಯ ಪಿಯುಸಿ ಪರೀಕ್ಷೆ ನಡೆಸುವ ವಿಚಾರ ಸಂಬಂಧ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಇಂದು ಪತ್ರಿಕಾಗೋಷ್ಟಿ ನಡೆಸಿ ಸ್ಪಷ್ಟಪಡಿಸಿದ್ದಾರೆ.

ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌  ತಿಳಿಸಿದ್ದಾರೆ.

ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಗ್ರೇಡಿಂಗ್ ಕೊಡುವುದಕ್ಕೆ ಕಷ್ಟವಾಗುತ್ತದೆ. ಈ ವಿದ್ಯಾರ್ಥಿಗಳು 9ನೇ ತರಗತಿ ಪರೀಕ್ಷೆಯನ್ನೂ ಬರೆದಿಲ್ಲ. ಯಾವ ಆಧಾರದಲ್ಲಿ ಫಲಿತಾಂಶ ನೀಡಬೇಕೆಂದೂ ಗೊತ್ತಿಲ್ಲ. ಇದರಿಂದ SSLC ಪರೀಕ್ಷೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಆಗದಿದ್ದರೆ. ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶವಿದೆ. ಹೊಸ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು.

ಪರೀಕ್ಷೆಯ ಸ್ವರೂಪ ಹೇಗಿರುತ್ತೆ

ಪರೀಕ್ಷೆಯಲ್ಲಿ ಯಾರನ್ನೂ ಫೇಲ್​ ಮಾಡುವುದಿಲ್ಲ

ಸಿದ್ಧತೆಗೆ ಮಾದರಿ ಪ್ರಶ್ನೆ ಪತ್ರಿಕೆ ಮೊದಲೆ ನೀಡಲಾಗುತ್ತದೆ

ಅತ್ಯಂತ ಸರಳ  ಮತ್ತು ನೇರ ಪ್ರಶ್ನೆ ಕೇಳಲಾಗುವುದು

ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಲಸಿಕೆ ಪಡೆದಿರುವುದು ಕಡ್ಡಾಯ

6 ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿನ

ಒಂದು ಕೊಠಡಿಯಲ್ಲಿ 10-12 ಜನ ಕೂರಿಸಿ ಪರೀಕ್ಷೆ ನಡೆಸಲಾಗುತ್ತದೆ 

ಒಂದು ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯನ್ನಷ್ಟೇ ಕೂರಿಸಲು ನಿರ್ಧಾರ – ವಿದ್ಯಾರ್ಥಿಗಳಿಗೆ ಎನ್95 ಮಾಸ್ಕ್ ಕೊಡಲಾಗುತ್ತದೆ.

ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪೇಪರ್ ನೀಡಲಾಗುತ್ತದೆ​. ಇದೇ ರೀತಿ ಇನ್ನೊಂದು ಭಾಷಾ ಪತ್ರಿಕೆಯಿರುತ್ದದೆ. ಬಹು ಆಯ್ಕೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.  ಈ ಕುರಿತು ಹೆಚ್ಚಿನ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ ಎಂದು ಇಲಾಖೆ ತಿಳಿಸಿದೆ.

ಜುಲೈ ಕೊನೆಯ ವಾರ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ

ಒತ್ತಡವಾಗಲಿ, ಆತಂಕವಾಗಲೀ ಬೇಡ. ಅತ್ಯಂತ ಸರಳ ಮತ್ತು ನೇರ ಪ್ರಶ್ನೆಗಳನ್ನಷ್ಟೇ ಕೇಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ. 

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...