ಮುಡಾ ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಬಿಡಿಎ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತ್ಯೇಕ ಕಾಯ್ದೆ ತರುವುದಕ್ಕೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ.
ಈಗಾಗಲೇ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಮುಂದಿನ ವಾರ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಲಿದ್ದಾರೆ. ಇದೂವರೆಗೂ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರದ ಅಧೀನದಲ್ಲಿದ್ದ ಮುಡಾ, 1987ರ ಆಕ್ಟ್ ಅನ್ವಯ ಕಾರ್ಯ ನಿರ್ವಹಿಸುತ್ತಿತ್ತು.
ಬೆಂಗಳೂರು ಡೆವಲಪ್‌ಮೆಂಟ್ ಅಥಾರಿಟಿ (BDA) ಮಾದರಿಯಲ್ಲೇ ಮುಡಾಕ್ಕೆ ಪ್ರತ್ಯೇಕ ಕಾಯ್ದೆ ತರುವುದಕ್ಕೆ ಸಂಪುಟ ಸಭೆ ಅಸ್ತು ಎಂದಿದೆ. ಹೊಸ ಆಕ್ಟ್‌ನಂತೆ ಭೂಸ್ವಾಧೀನ, ನಿವೇಶನ ಹಂಚಿಕೆ, ನಕ್ಷೆ ಮಂಜೂರಾತಿ ಸೇರಿದಂತೆ ಹಲವು ನಿರ್ಧಾರ ತೆಗೆದುಕೊಳ್ಳಲಿದೆ.
ಈ ಮೊದಲು ನೂರಕ್ಕೂ ಹೆಚ್ಚು ರಾಜಕೀಯ ನಾಯಕರೇ ಮುಡಾ ಸದಸ್ಯರು ಆಗಿದ್ದರು. ನೂತನ ಆಕ್ಟ್ ಅನ್ವಯ 3-4 ರಾಜಕೀಯ ನಾಯಕರಿಗೆ ಮಾತ್ರ ಸದಸ್ಯರಾಗಲು ಅವಕಾಶ ಸಿಗಲಿದೆ.ಬಹುತೇಕ ಬಿಡಿಎ ಮಾದರಿಯಲ್ಲಿ ಅಧಿಕಾರಿಗಳಿಗೆ ಬೋರ್ಡ್‌ನಲ್ಲಿ ಇರುತ್ತಾರೆ.