• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
September 21, 2023
in Top Story, ಕರ್ನಾಟಕ
0
ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on WhatsAppShare on FacebookShare on Telegram

ಬೆಳಗಾವಿ : ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22)ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಾವರಿ ಹಿತಾಸಕ್ತಿ ಹಾಗೂ ಕುಡಿಯುವ ನೀರು ಒದಗಿಸುವುದು ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಸಲಹಾ ಸಮಿತಿಯ ನಿರ್ಧಾರ ಆಧರಿಸಿ ಅಧಿಕಾರಿಗಳು ಆದೇಶ ಮಾಡಲಿದ್ದಾರೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ ಹದಿನೈದು ದಿನಗಳವರೆಗೆ ನೀರು ಹರಿಸಲಾಗುವುದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದು ತಿಳಿಸಿದರು.

ಶಾಸಕ ಎನ್.ಎಚ್.ಕೋನರೆಡ್ಡಿ, ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಆದ್ದರಿಂದ ಜನರಿಗೆ ತೊಂದರೆಯಾಗದಂತೆ ನೀರು ಬಿಡಬೇಕಿದೆ. ನೀರಾವರಿಗೆ ಅಗತ್ಯವಿರುವ ನೀರು ಮೀಸಲಿಟ್ಟುಕೊಂಡು ಅಗತ್ಯತೆ ಆಧರಿಸಿ ಕುಡಿಯುವ ನೀರು ಬಿಡುಗಡೆಗೊಳಿಸಬೇಕು” ಎಂದು ಸಲಹೆ ನೀಡಿದರು. ಬರಗಾಲ ಎಂದು ಘೋಷಿಸಿರುವುದರಿಂದ ಪರಿಸ್ಥಿತಿ ಆಧರಿಸಿ ಕುಡಿಯುವ ಉದ್ಧೇಶಕ್ಕಾಗಿಯೇ ಹಂತ ಹಂತವಾಗಿ ಬಿಡುಗಡೆಗೊಳಿಸಬಹುದು ಎಂದು ಶಾಸಕ ಕೋನರೆಡ್ಡಿ ಅಭಿಪ್ರಾಯಪಟ್ಟರು.

ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ತೀವ್ರವಾಗಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು. ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಕುಡಿಯುವ ನೀರು ಒದಗಿಸುವುದು ಅನಿವಾರ್ಯ. ಆದ್ದರಿಂದ ಅಗತ್ಯತೆ ಆಧರಿಸಿ ಸದ್ಯಕ್ಕೆ ನೀರು ಬಿಡುಗಡೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, “ಮುಂದಿನ ಜೂನ್ ಮಾಹೆಯವರೆಗಿನ ಲೆಕ್ಕಾಚಾರ ಇಟ್ಟುಕೊಂಡು ಜಲಾಶಯ ನೀರು ನಿರ್ವಹಣೆಯನ್ನು ಮಾಡಬೇಕಿದೆ. ಆದ್ದರಿಂದ ಸಲಹಾ ಸಮಿತಿಯು ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು” ಎಂದು ಹೇಳಿದರು. ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಜಿಲ್ಲಾ ಪೊಲೀಸ್ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Tags: BelagaviLakshmi hebbalkarmalaprabha
Previous Post

16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್

Next Post

ಚಂದ್ರನ ಮೇಲೆ ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಚಂದ್ರನ ಮೇಲೆ  ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌

ಚಂದ್ರನ ಮೇಲೆ ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada