ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಸಂಗಗಿರಿ ಬಳಿ ಸೂಟ್ಕೇಸ್ನೊಳಗೆ ಯುವತಿಯ ಕೊಳೆತ ಶವ ಪತ್ತೆಯಾಗಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ವ್ಯಾಪಕ ಭಯ ಮತ್ತು ಆತಂಕವನ್ನು ಉಂಟುಮಾಡಿದೆ.
ಸೇತುವೆಯ ಕೆಳಗಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನಿವಾಸಿಗಳು ವೈಕುಂಟಂ ಗ್ರಾಮ ಆಡಳಿತಾಧಿಕಾರಿ (ವಿಎಒ) ಜಯಕುಮಾರ್ ಅವರಿಗೆ ಮಾಹಿತಿ ನೀಡಿದರು.
ಕೂಡಲೇ ಅವರು ಸಂಕಗಿರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸೇಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌತಮ್ ಗೋಯಲ್ ಅವರು ಸಂಕಗಿರಿ ಉಪ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದರು.
ಸೂಟ್ಕೇಸ್ ತೆರೆದಾಗ, ಕೊಳೆತ ಸ್ಥಿತಿಯಲ್ಲಿ ಯುವತಿಯ ಬೆತ್ತಲೆ ದೇಹವನ್ನು ಕಂಡು ಪೊಲೀಸರು ಬೆಚ್ಚಿಬಿದ್ದರು.ಬಳಿಕ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮೃತ ಮಹಿಳೆಗೆ 20 ರಿಂದ 30 ವರ್ಷ ವಯಸ್ಸಿರಬಹುದು ಎಂದು ಅಂದಾಜಿಸಲಾಗಿದೆ. ಮೃತಳನ್ನು ಗುರುತಿಸಲು ಮತ್ತು ಆಕೆ ಎಲ್ಲಿಂದ ಬಂದಿದ್ದಾಳೆ..?. ಈ ಪ್ರದೇಶದಲ್ಲಿ ಸೂಟ್ಕೇಸ್ ಎಸೆದವರು ಯಾರು? ಎಂಬುದನ್ನು ಪತ್ತೆಹಚ್ಚಲು ಮತ್ತು ಕೊಲೆಗೆ ಕಾರಣವಾದ ವ್ಯಕ್ತಿಯ ಪತ್ತೆಗೆ ತನಿಖೆ ನಡೆಯುತ್ತಿದೆ.