ಕನ್ನಡದ ʻನಾಗಿಣಿʼ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟು, ʻದಿಯಾʼ ಸಿನಿಮಾದ ಮೂಲಕ ಖ್ಯಾತಿ ಗಳಿಸಿರುವ ನಟ ದೀಕ್ಷಿತ್ ಶೆಟ್ಟಿ, ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಸ್ಯಾಂಡಲ್ವುಡ್ನ ದಿಯಾ ಚಿತ್ರದಲ್ಲಿ ಪ್ರೇಕ್ಷಕರ ಗಮನ ಸೆಳೆದಿದ್ದ ದೀಕ್ಷಿತ್, ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ʻದಸರಾʼ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನ ಮಾಡಿದ್ದಾರೆ. ಟಾಲಿವುಡ್ ಸ್ಟಾರ್ ನಾನಿ ಹಾಗೂ ಕೀರ್ತಿ ಸುರೇಶ್ ನಟನೆಯ ʻದಸರಾʼ ಸಿನಿಮಾ ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿರುವ ದಸರಾ ಸಿನಿಮಾ, ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾ ನಾನಿ ಅವರ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ದಸರಾ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ನಾನಿ ಜೊತೆ ಸ್ಕ್ರೀನ್ ಶೇರ್ ಮಾಡಿರೋದು ವಿಶೇಷ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ʻದಸರಾʼ ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡ್ತಿರೋ ದಸರಾ ಸಿನಿಮಾ, ಮಾರ್ಚ್ 30ರಂದು ತೆರೆ ಮೇಲೆ ಅಬ್ಬರಿಸಲಿದೆ.