ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ ಸಿಡಿಸಿದ ಚೊಚ್ಚಲ ಶತಕ ಹಾಗೂ ಸಂಜು ಸ್ಯಾಮ್ಸನ್ ಅಬ್ಬರದ ಆಟದಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದೆ.
ಡಬ್ಲೀನ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 227 ರನ್ ಗಳಿಸಿತು.
ಇಶಾನ್ ಕಿಶನ್ ಅವರನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡ ನಂತರ ಜೊತೆಯಾದ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಎರಡನೇ ವಿಕೆಟ್ ಗೆ 176 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು.

ದೀಪಕ್ ಹೂಡಾ 57 ಎಸೆತಗಳಲ್ಲಿ 9 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 104 ರನ್ ಬಾರಿಸಿ ಚೊಚ್ಚಲ ಶತಕ ಸಿಡಿಸಿದರು. ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 77 ರನ್ ಸಿಡಿಸಿ ಔಟಾದರು.