ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರಾಗಿದ್ದು ತೀವ್ರ ಅಸ್ವಸ್ಥರಾಗಿರುವ ಕಾರಣ ನಟಿಯನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 26ರ ರಾತ್ರಿ ನಟಿ ಆರೋಗ್ಯದಲ್ಲಿ ಏರುಪೇರಾಗಿದ್ದು ಕುಟುಂಬಸ್ಥರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗಾಗಲೇ ವೈದ್ಯರು ಹಲವು ಪರೀಕ್ಷೆಗಳನ್ನು ಮಾಡಿದ್ದು ಈ ಬಗ್ಗೆ ಆಸ್ಪತ್ರೆ ಅಥವಾ ಕುಟುಂಬಸ್ಥರಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.









